"ಕರ್ನಾಟಕದಲ್ಲಿ ಕಾಂಗ್ರೆಸ್‌ ಶಾಸಕರಿಗೇ ನಯಾ ಪೈಸೆ ಅನುದಾನ ಇಲ್ಲ"

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಾಂಗ್ರೆಸ್‌ನ ಪ್ರಭಾವಿ ಸಚಿವರೇ ತಿರುಗಿ ಬಿದಿದ್ದಾರೆ. ತನ್ನ ಕಾಂಗ್ರೆಸ್‌ ಶಾಸಕರೇ ತಮ್ಮ ಹಾಗೂ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವುದು ಕಾಂಗ್ರೆಸ್‌ಗೆ ನುಂಗಲಾರದ ತುಪ್ಪವಾಗಿದೆ. ಇದೀಗ ಇದೇ ವಿಷಯವನ್ನು ವಿರೋಧ ಪಕ್ಷಗಳು ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿವೆ.

ರಾಜ್ಯದಲ್ಲಿ ತನ್ನದೇ ಸರ್ಕಾರವಿದ್ದರೂ ಕ್ಷೇತ್ರದ ಜನರಿಗೆ ಸಹಾಯ ಮಾಡಲು ಆಗುತ್ತಿಲ್ಲ ಎಂದು ಕಾಂಗ್ರೆಸ್‌ನ ಪ್ರಭಾವಿ ಸಚಿವ ರಾಜು ಕಾಗೆ ಅವರು ಈಚೆಗೆ ಹೇಳಿದ್ದರು. ತಮ್ಮದೇ ಸರ್ಕಾರದ ವಿರುದ್ಧ ಅವರು ಬಹರಿಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಇದೀಗ ಬಿಜೆಪಿ ಹಾಗೂ ಜೆಡಿಎಸ್‌ ಅಸ್ತ್ರವಾಗಿಸಿಕೊಂಡಿವೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್‌ಗೆ ಕ್ಲಾಸ್‌ ತೆಗೆದುಕೊಂಡಿದೆ.

Congress MLAs do not get a single penny grant in Karnataka Congress MLA statement

ಟ್ವೀಟ್‌ ಮಾಡಿ ಕಾಂಗ್ರೆಸ್‌ ಕಾಲೆಳೆದ ಜೆಡಿಎಸ್‌: ಕಾಂಗ್ರೆಸ್‌ ಶಾಸಕರು ನೀಡಿರುವ ಹೇಳಿಕೆಯನ್ನೇ ಇಟ್ಟುಕೊಂಡು ಜೆಡಿಎಸ್‌ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿರುವ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್‌ನ ಶಾಸಕರೇ ಅಳಲು ತೋಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದೆ.

ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಸಾರ್ವಜನಿಕ ಸಭೆಯಲ್ಲೇ ಮಾತನಾಡಿದ್ದಾರೆ. ಮುಂದುವರಿದು ರೈತರನ್ಮು ಬದುಕಿಸಿ ಎಂದು ತಮ್ಮದೇ ಸರ್ಕಾರಕ್ಕೆ ಗೋಗೆರೆಯುವ ದಯಾನೀಯ ಸ್ಥಿತಿಗೆ ತಲುಪಿದ್ದಾರೆ. ಕರ್ನಾಟಕದಲ್ಲಿ ಕಳೆದ 16 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಆಡಳಿತವೇ ಸಾಕ್ಷಿ ಎಂದು ಟೀಕಿಸಿದೆ.

ಶಾಸಕರಿಗೆ ನಯಾಪೈಸೆ ಅನುದಾನ ನೀಡುತ್ತಿಲ್ಲ. ಅಲ್ಲದೇ ಒಂದೇ ಒಂದೂ ಅಭಿವೃದ್ಧಿ ಯೋಜನೆಗಳಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವ ಮಾತನ್ನು ಹೇಳುತಿದ್ದಾರೆ ಎಂದರೇ ಭ್ರಷ್ಟ ಮುಖ್ಯಮಂತ್ರಿ ಮತ್ತು ಸಚಿವರು ಯಾವ ಪರಿ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ ಎಂಬುದನ್ನು ಕರ್ನಾಟಕದ ಮತದಾರರು ಅರ್ಥಮಾಡಿಕೊಳ್ಳಬೇಕು ಎಂದು ಜೆಡಿಎಸ್‌ ಹೇಳಿದೆ.

ರಾಜ್ಯ ಬೊಕ್ಕಸ ಬರಿದುಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಅಲ್ಲದೇ ಸರ್ಕಾರ ಬರೀ ದಿನ ಪತ್ರಿಕೆಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿಟ್ಟಿ ಪ್ರಚಾರ ಪಡೆಯುತ್ತಾ ಜನರಿಗೆ ಮಂಕುಬೂದಿ ಎರಚುತ್ತಿದೆ. ಈ ದುಷ್ಟ ರೈತ ವಿರೋಧಿ, ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದೂ ಜೆಡಿಎಸ್‌ ವ್ಯಂಗ್ಯವಾಡಿದೆ.

ಶಾಸಕರ ವಿಡಿಯೋ ವೈರಲ್‌: ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ವಿರೋಧ ಪಕ್ಷಗಳು ಟೀಕೆ ಮಾಡುವುದು ಸಹಜ. ಅದು ಕಾಮನ್‌ ಕೂಡ ಆದರೆ, ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಶಾಸಕರು, ಸಚಿವರೇ ಅವರದ್ದೇ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ವಿರಳ. ಅದರಲ್ಲೂ ಅಭಿವೃದ್ಧಿ ಹಾಗೂ ಅನುದಾನದ ವಿಚಾರದಲ್ಲಿ ಆಡಳಿತ ಪಕ್ಷದ ನಾಯಕರು ತಮ್ಮದೇ ಪಕ್ಷದ ವಿರುದ್ಧ ಅಷ್ಟು ಸಾಮಾನ್ಯವಾಗಿ ಟೀಕೆ, ಬಹಿರಂಗ ಹೇಳಿಕೆಗಳನ್ನು ನೀಡುವುದಿಲ್ಲ. ಇದೀಗ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+