ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಸಭೆ, ಸಚಿವರೇ ಟಾರ್ಗೆಟ್?

|
Google Oneindia Kannada News

ಬೆಂಗಳೂರು, ಜ. 1 : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರ ಮೇಲೆ ಕಾಂಗ್ರೆಸ್ ಶಾಸಕರು ಸಾಲು-ಸಾಲು ದೂರು ಹೇಳುತ್ತಿದ್ದಾರೆ. ಇವುಗಳ ನಡುವೆಯೇ ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಚಿವರನ್ನು ಶಾಸಕರು ಟಾರ್ಗೆಟ್ ಮಾಡುವ ಸಾಧ್ಯತೆ ಇದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಕೆಲವು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸೂಚನೆ ಇರುವ ಹಿನ್ನಲೆಯಲ್ಲಿ ನಾಳೆಯ ಸಭೆ ಮಹತ್ವ ಪಡೆದುಕೊಂಡಿದೆ.

Siddaramaiah

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಸಚಿವರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು, ಕಣ್ಣೀರು ಹಾಕಿದ್ದರು. ಅಸಮರ್ಥ ಸಚಿವರನ್ನು ಸಂಪುಟದಿಂದ ಕೈ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. [ಶಾಸಕಾಂಗ ಸಭೆಯಲ್ಲಿ ಸಚಿವರ ವಿರುದ್ಧ ದೂರು]

ಸಿಎಂ ಅಲ್ಲಿ ಶಾಸಕರಿಗೆ ನೀಡಿದ ಭರವಸೆಯಂತೆ ಶಾಸಕರ ದೂರಗಳನ್ನು ಆಲಿಸಲು ಶುಕ್ರವಾರ ಶಾಸಕಾಂಗ ಸಭೆ ಕರೆದಿದ್ದಾರೆ. ಸಿಎಂ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಚಿವ ಮೌಲ್ಯ ಮಾಪನವೂ ನಡೆಯಲಿದೆ ಎಂದು ತಿಳಿದುಬಂದಿದೆ.

ಪಂಚಾಯಿತಿ ಫೈಟ್ : ಗ್ರಾಮ ಪಂಚಾಯಿತಿ ಚುನಾವಣೆಗೆ ಮುನ್ನ ಪಂಚಾಯಿತಿಗಳನ್ನು ವಿಭಜನೆ ಮಾಡಿ ಇಡೀ ವ್ಯವಸ್ಥೆಯನ್ನು ಪುನರ್ ರಚಿಸಬೇಕು ಮತ್ತು ಪಂಚಾಯಿತಿ ವ್ಯಾಪ್ತಿಯನ್ನು ಕಡಿಮೆ ಮಾಡಬೇಕು ಎಂದು ನಂಜಯ್ಯ ಮಠ್ ಅವರ ಸಮಿತಿ ವರದಿ ನೀಡಿದೆ.

ಹಿರಿಯ ಶಾಸಕ ರಮೇಶ್‌ ಕುಮಾರ್ ಅವರ ಸಮಿತಿ ಈಗಿರುವ ಪಂಚಾಯಿತಿಯ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಎಂದು ಸರ್ಕಾರಕ್ಕೆ ವರದಿ ನೀಡಿದೆ. ಆದ್ದರಿಂದ ಶಾಸಕಾಂಗ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಿ, ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿಲು ತೀರ್ಮಾನಿಸಲಾಗಿದೆ.

ಚಳಿಗಾಲದ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಶುಕ್ರವಾರ ಸಭೆಯಲ್ಲಿ ಸಂಪುಟ ವಿಸ್ತರಣೆ ಅಥವ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಬೇಕು ಎಂದು ಶಾಸಕರು ಬೇಡಿಕೆ ಇಡುವ ಸಾಧ್ಯತೆ ಇದೆ.

English summary
Karnataka Congress Legislature Party (CLP) meeting will be held on Friday in Bengaluru. In meeting legislators may target CM Siddaramaiah cabinet ministers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X