ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಎಂಎಲ್‌ಸಿ
ಬೆಂಗಳೂರು, ಅಕ್ಟೋಬರ್ 07: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಲಿಂಗಾಯತ ಅಧಿಕಾರಗಳದ್ದು ನಾಯಿಪಾಡಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕಗೆ ಕಾಂಗ್ರೆಸ್ ಎಂಎಲ್‌ಸಿ ಪ್ರಕಾಶ್ ರಾಥೋಡ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿ, ಲಿಂಗಾಯತ ಸಮುದಾಯದ ಅಧಿಕಾರಿಗಳನ್ನು ಸರ್ಕಾರದ ಪ್ರಮುಖ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ ಎಂಬ ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯಿಂದ ನನಗೆ ನೋವಾಗಿದೆ ಎಂದು ಕಾಂಗ್ರೆಸ್ ಎಂಎಲ್‌ಸಿ ಪ್ರಕಾಶ್ ಕೆ ರಾಥೋಡ್ ಹೇಳಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಇಂತಹ ಹೇಳಿಕೆಯು ಅಲ್ಪಸಂಖ್ಯಾತ ಸಮುದಾಯಗಳು, ದಲಿತರು ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೋವುಂಟು ಮಾಡಿದೆ, ಅವರು ಪಕ್ಷಕ್ಕೆ ಮತ ಚಲಾಯಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ರಾಥೋಡ್ ಹೇಳಿದರು.
ಸಮೀಕ್ಷೆಯ ಪ್ರಕಾರ 88% ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ 20% ಲಿಂಗಾಯತರು ಮಾತ್ರ ಪಕ್ಷವನ್ನು ಬೆಂಬಲಿಸಿದ್ದಾರೆ. ಅದರ ಹೊರತಾಗಿಯೂ ಸಿದ್ದರಾಮಯ್ಯ ಸಂಪುಟದಲ್ಲಿ ಏಳು ಸಚಿವರು ಲಿಂಗಾಯತ ಸಮುದಾಯದವರಾಗಿದ್ದು, ಇಬ್ಬರು ಮಾತ್ರ ಮುಸ್ಲಿಮರಿದ್ದಾರೆ ಎಂದು ಪ್ರಕಾಶ್ ರಾಥೋಡ್ ಹೇಳಿದ್ದಾರೆ.
80% ಕ್ಕೂ ಹೆಚ್ಚು ಲಂಬಾಣಿ ಸಮುದಾಯದವರು ಪಕ್ಷಕ್ಕೆ ಮತ ಚಲಾಯಿಸಿದ್ದಾರೆ. ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಲಂಬಾಣಿ ಸಮುದಾಯದ ಉಪ್ಪಾರ, ಯಾದವ, ಬಾಲಾಜಿಗ ಯಾರನ್ನೂ ಸಚಿವರನ್ನಾಗಿ ಮಾಡಿಲ್ಲ. ಶಿಸ್ತುಬದ್ಧವಾಗಿ ಆ ಸಮುದಾಯಗಳ ಮುಖಂಡರು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು, ಎಐಸಿಸಿ ಮುಖಂಡರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯದ ಜನರನ್ನು ಒಗ್ಗೂಡಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಶಾಸಕರು, ಪಕ್ಷದ ಮುಖಂಡರು ಸೇರಿದಂತೆ ಎಲ್ಲರೂ ಮುಖ್ಯಮಂತ್ರಿಯನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.
ಲಿಂಗಾಯತ ಅಧಿಕಾರ ಶಾಮನೂರರ ಹೇಳಿಕೆಗೆ ಸ್ವತಃ ಅವರ ಪುತ್ರ, ಗಣಿ ಇಲಾಖೆ ಸಚಿವರೂ ಆಗಿರುವ ಎಸ್‌ಎಸ್ ಮಲ್ಲಿಕಾರ್ಜುನ್ ಅವರು ಇತ್ತಿಚೆಗೆ ಮಾತನಾಡಿ, ನಮ್ಮ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ಹೇಳಿದ್ದರು.
ಈ ಸಂಗತಿಯ ಬಗ್ಗೆ ನಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರನ್ನೇ ಕೇಳಿ, ಅವರ ವೈಯಕ್ತಿಕ ವಿಚಾರ ಏನೂ ಎಂದು ಗೊತ್ತಿಲ್ಲ. ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ಈ ವಿಷಯ ಕುರಿತು ಸಿಎಂ ಹಾಗೂ ತಂದೆ ಶಾಮನೂರು ಶಿವಶಂಕರಪ್ಪ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ ಎಂದು ಹೇಳಿದ್ದರು.
ಶಾಮನೂರರ ಹೇಳಿಕೆಗೆ ಪಕ್ಷಬೇಧ ಮರೆತು ಮಾಜಿ ಸಿಎಂ ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳಲ್ಲಿ ವಿರಶೈವ ಲಿಂಗಾಯತ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಸಮುದಾಯದ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ. ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರು ಕಳಕಳಿಯಿಂದ ಮಾತನಾಡಿದ್ದಾರೆ. ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತದೆ ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಣಗಣಿಸಬೇಕು ಎಂದು ಹೇಳಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications