ಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರ

ಬೆಂಗಳೂರು, ಜುಲೈ 02 : ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರೆದಿದೆ. ವಿಧಾನಪರಿಷತ್ ಸದಸ್ಯರು ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆ.ಸಿ.ವೇಣುಗೋಪಾಲ್ ಅವರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ನ 20 ಎಂಎಲ್‌ಸಿಗಳು ಸಹಿ ಮಾಡಿದ ಪತ್ರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದಾರೆ.

ಕೆಪಿಸಿಸಿಗೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಬೇಕು. ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಪರಿಷತ್ ಸದಸ್ಯರಿಗೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

Congress MLCs demands for minister post to senior member

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿ.ಎಸ್.ಉಗ್ರಪ್ಪ, ಮೋಹನ್ ಕೊಂಡಜ್ಜಿ, ಎಚ್‌.ಎಂ.ರೇವಣ್ಣ ಸೇರಿದಂತೆ 20 ಎಂಎಲ್‌ಸಿಗಳು ಈ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಇದೇ ಪತ್ರದ ಮತ್ತೊಂದು ಪ್ರತಿಯನ್ನು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ.

ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದಾರೆ. ಹಿರಿಯ ನಾಯಕರನ್ನು ಕಡೆಗಣಿಸಿ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿರುವುದು ನಾಯಕರ ನಡುವಿನ ಅಸಮಾಧಾನಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+