ಸಿಎಂ ಸಿದ್ದು ವಿರುದ್ಧ ಅಲ್ಪಸಂಖ್ಯಾತರು ಗರಂ!

ಬೆಂಗಳೂರು, ಮಾ.5 : ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಅಸಮಾಧಾನಗೊಂಡಿದ್ದಾರೆ. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಪರಮಾಪ್ತ ಸಿಎಂ ಇಬ್ರಾಹಿಂ ಅವರನ್ನು ನೇಮಕ ಮಾಡಲು ನಿರ್ಧರಿಸಿರುವುದು ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದನ್ನು ಅರಿತ ಸಿಎಂ ಸಿದ್ದರಾಮಯ್ಯ ಮಂಗಳವಾರವೇ ಸಿಎಂ ಇಬ್ರಾಹಿಂ ಅವರನ್ನು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂಬ ಮಾತುಗಳಿವೆ. ಆದರೆ, ಸರ್ಕಾರ ಈ ಕುರಿತು ಯಾವುದೇ ಆದೇಶವನ್ನು ಹೊರಡಿಸಿಲ್ಲ. ಇದನ್ನು ತಿಳಿದ ಅಲ್ಪಸಂಖ್ಯಾತ ಸಮುದಾಯದ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. [ಕರ್ನಾಟದಲ್ಲಿ ಲೋಕಸಭೆ ಚುನಾವಣೆ ಯಾವಾಗ?]

Siddaramaiah

ಕಳೆದ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ಸಿಎಂ ಇಬ್ರಾಹಿಂ ಅವರಿಗೆ ಭದ್ರಾವತಿ ಕ್ಷೇತ್ರದ ಟಿಕೆಟ್ ಕೊಡಿಸಿದ್ದರು. ಆದರೆ, ಚುನಾವಣೆಯಲ್ಲಿ ಇಬ್ರಾಹಿಂ ಸೋಲು ಅನುಭವಿಸಿದ್ದರು. ಸದ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ಇಬ್ರಾಹಿಂ ಅವರನ್ನು ನೇಮಕ ಮಾಡಲು ಸಿಎಂ ಹೊರಟಿದ್ದಾರೆ ಎಂದು ಅಲ್ಪ ಸಂಖ್ಯಾತ ಮುಖಂಡರು ಆರೋಪಿಸುತ್ತಿದ್ದಾರೆ. [ಪರಮೇಶ್ವರ್, ಸಿದ್ದು ನಡುವೆ ಗುದ್ದಾಟ]

ಪ್ರಮುಖವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್, ಶಾಸಕ ಎನ್.ಎ.ಹ್ಯಾರೀಸ್ ಮುಂತಾದವರು ಸಿಎಂ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ್ದು, ವಿಧಾನಪರಿಷತ್ತಿನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೂ ಅಲ್ಪಸಂಖ್ಯಾತ ನಾಯಕರನ್ನು ನೇಮಕ ಮಾಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. [ಸಿದ್ದು ವಿರುದ್ಧ ಹ್ಯಾರೀಸ್ ಅಸಮಾಧಾನ]

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರನ್ನು ಪರಿಷತ್ ಸ್ಥಾನಕ್ಕೆ ನೇಮಕ ಮಾಡಬೇಕು. ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರಿಗೆ ಕರ್ನಾಟಕ ರಾಜ್ಯ ದೆಹಲಿ ಪ್ರತಿನಿಧಿ ಸ್ಥಾನ ನೀಡಬೇಕು ಎಂದು ಮುಖ್ಯಮಂತಿಗಳಿಗೆ ಒತ್ತಾಯ ಮಾಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+