Congress New Cabinet: ಹೊಸ ಸಂಪುಟದಲ್ಲಿ ಮತ್ತೆ ಮಹತ್ವದ ಬದಲಾವಣೆ? ಇವರಿಗೆಲ್ಲಾ ಸಿಗುತ್ತಾ ಮಂತ್ರಿಗಿರಿ ಭಾಗ್ಯ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಮಹತ್ವದ ಬದಲಾವಣೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಸಂಪುಟದಲ್ಲಿ ಉಂಟಾಗಿರುವ ಅಸಮಾಧಾನ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಮತ್ತು ಪಕ್ಷದೊಳಗಿನ ವಿವಿಧ ಲೆಕ್ಕಾಚಾರಗಳನ್ನು ಸರಿಪಡಿಸುವ ಉದ್ದೇಶದಿಂದ ಕೆಲವು ಸಚಿವರ ಬದಲಾವಣೆಗೆ ಕಾಂಗ್ರೆಸ್‌ ನಾಯಕತ್ವ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ಕುರಿತು ಕಾಂಗ್ರೆಸ್‌ ವಲಯದಲ್ಲಿ ಹೊಸ ಲೆಕ್ಕಾಚಾರಗಳು ಆರಂಭವಾಗಿವೆ ಸಂಪುಟ ವಿಸ್ತರಣೆ ವೇಳೆ ಅವಕಾಶ ಸಿಗದಿದ್ದಕ್ಕೆ ಎಂ. ಕೃಷ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಮನವೊಲಿಸಲು ಕಾಂಗ್ರೆಸ್‌ ನಾಯಕತ್ವ ಹಲವು ಪ್ರಯತ್ನಗಳನ್ನು ನಡೆಸಿತ್ತು. ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರಿಗೆ ಪ್ರಬಲ ನಿಗಮ-ಮಂಡಳಿ ಹುದ್ದೆ ನೀಡುವ ಭರವಸೆಯನ್ನೂ ಪಕ್ಷದ ವತಿಯಿಂದ ನೀಡಲಾಗಿತ್ತು ಎಂಬ ಮಾಹಿತಿ ಇದೆ.

Congress New Cabinet Major Cabinet Changes Again in Karnataka These Leaders May Get Ministerial Berths

ಇದರ ಜೊತೆಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೂಡ ಎಂ. ಕೃಷ್ಣಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ, ಎಂ. ಕೃಷ್ಣಪ್ಪ ಅವರು ಸಚಿವ ಸ್ಥಾನಕ್ಕಾಗಿ ಪಟ್ಟು ಮುಂದುವರಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿರುವ ಒಬ್ಬ ಒಕ್ಕಲಿಗ ಸಚಿವರನ್ನು ಕೈಬಿಟ್ಟು ಕೃಷ್ಣಪ್ಪ ಅವರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕುರುಬ ಸಮುದಾಯಕ್ಕೆ ಮತ್ತೊಂದು ಅವಕಾಶ?

ಸಂಪುಟದಲ್ಲಿ ಕುರುಬ ಸಮುದಾಯದ ಪ್ರತಿನಿಧಿತ್ವವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಸವರಾಜ್ ಶಿವಣ್ಣನವರ್ ಅವರ ಹೆಸರೂ ಸಚಿವ ಸ್ಥಾನಕ್ಕೆ ಪರಿಗಣನೆಯಲ್ಲಿದೆ ಎಂಬ ಮಾತು ಕೇಳಿಬರುತ್ತಿದೆ. ಕುರುಬ ಸಮುದಾಯದ ಕೋಟಾದಡಿ ಶಿವಣ್ಣನವರ್ ಅವರಿಗೆ ಅವಕಾಶ ನೀಡುವ ಮೂಲಕ ಸಮುದಾಯದ ಪ್ರತಿನಿಧಿತ್ವದ ಲೆಕ್ಕಾಚಾರವನ್ನು ಸರಿಪಡಿಸುವ ಪ್ರಯತ್ನ ನಡೆಯಬಹುದು ಎನ್ನಲಾಗಿದೆ.

ಮುನಿಯಪ್ಪ ಬದಲು ಪುತ್ರಿಗೆ ಸಚಿವ ಸ್ಥಾನ?

ಇನ್ನು ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅವರ ಬದಲಿಗೆ ಪುತ್ರಿ ರೂಪ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡುವ ಪ್ರಸ್ತಾಪ ಪಕ್ಷದೊಳಗೆ ಚರ್ಚೆಯಲ್ಲಿದೆ ಎಂಬ ಮಾಹಿತಿ ಇದೆ. ರೂಪ ಶಶಿಧರ್ ಅವರಿಗೆ ಅವಕಾಶ ನೀಡಿದರೆ, ಒಂದೆಡೆ ಮಹಿಳಾ ಪ್ರತಿನಿಧಿತ್ವ ಹೆಚ್ಚಿಸುವುದರ ಜೊತೆಗೆ ಕೋಲಾರ ಜಿಲ್ಲೆಗೂ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸಿದಂತಾಗುತ್ತದೆ ಎಂಬ ಲೆಕ್ಕಾಚಾರ ಕಾಂಗ್ರೆಸ್‌ ವಲಯದಲ್ಲಿದೆ ಎನ್ನಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಬದಲಾವಣೆಯ ಚರ್ಚೆ

ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆಯಾದ ಬಳ್ಳಾರಿ ಜಿಲ್ಲೆಯ ಒಬ್ಬ ಸಚಿವರನ್ನು ಕೈಬಿಟ್ಟು, ಮಾಜಿ ಸಚಿವ ತುಕಾರಾಂ ಅವರ ಪತ್ನಿ ಹಾಗೂ ಕಾಂಗ್ರೆಸ್‌ ನಾಯಕಿ ಅನ್ನಪೂರ್ಣ ತುಕಾರಾಂ ಅವರಿಗೆ ಅವಕಾಶ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ರಾಜಕೀಯ ಲೆಕ್ಕಾಚಾರ, ಮಹಿಳಾ ಪ್ರಾತಿನಿಧ್ಯ ಹಾಗೂ ಸ್ಥಳೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಯ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಮುಸ್ಲಿಂ ಪ್ರತಿನಿಧಿತ್ವದಲ್ಲೂ ಬದಲಾವಣೆ?

ಸಂಪುಟದಲ್ಲಿರುವ ಮುಸ್ಲಿಂ ಸಮುದಾಯದ ಒಬ್ಬ ಸಚಿವರನ್ನು ಕೈಬಿಟ್ಟು, ಉತ್ತರ ಕರ್ನಾಟಕ ಭಾಗದ ಅದೇ ಸಮುದಾಯದ ಮತ್ತೊಬ್ಬ ಶಾಸಕರಿಗೆ ಅವಕಾಶ ನೀಡುವ ಕುರಿತೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಪ್ರಾದೇಶಿಕ ಸಮತೋಲನದ ಜೊತೆಗೆ ವಿವಿಧ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಈ ರೀತಿಯ ಬದಲಾವಣೆಗಳನ್ನು ಪರಿಗಣಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+