ಕಾಂಗ್ರೆಸ್‌ನ ಗ್ಯಾರಂಟಿಗೆ ವಾರಂಟಿ ಇಲ್ಲ: ಪ್ರಧಾನಿ ಮೋದಿ ಸಂವಾದ ಯಶಸ್ವಿ ಎಂದ ಶೋಭಾ ಕರಂದ್ಲಾಜೆ
ಬೆಂಗಳೂರು, ಏಪ್ರಿಲ್ 27: ವಿರೋಧ ಪಕ್ಷ ನೀಡುತ್ತಿರುವ ಗ್ಯಾರಂಟಿಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್‌ನವರು ಯಾವುದೇ ಗ್ಯಾರಂಟಿಗೆ ವಾರಂಟಿ ಇಲ್ಲ. ಸುಳ್ಳು ಪ್ರಚಾರಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದರು.
ನಗರದ ಮಲ್ಲೇಶ್ವರಂನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಕೋಮು ಗಲಭೆಗಳು, ಬಾಂಬ್ ಸ್ಫೋಟಗಳು ನಡೆದಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮಾಜಘಾತುಕ, ಕಾನೂನು ಬಾಹಿರ ಮತ್ತು ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ನಂತರ ಅಮಿತ್ ಶಾ ಅತ್ಯುತ್ತಮ ಗೃಹ ಸಚಿವರಾಗಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಏ.29 ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಅವರು ಬೆಳಗ್ಗೆ 9 ಗಂಟೆಗೆ ಬೀದರ್ ಜಿಲ್ಲೆ ಹಮ್ನಾಬಾದ್‌ನಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ವಿಜಯಪುರ ಹಾಗೂ 3ಗಂಟೆಗೆ ಬೆಳಗಾವಿ ಜಿಲ್ಲೆ ಕುಡುಚಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ ಎಂದರು.
ಅಂದು ಸಂಜೆ ಬೆಂಗಳೂರಿನಲ್ಲಿ ಮಾಗಡಿ ರಸ್ತೆಯ ನೈಸ್ ರಸ್ತೆಯಿಂದ ಸುಮನಹಳ್ಳಿವರೆಗೆ ಸುಮಾರು 4.5 ಕಿ.ಮೀ ದೂರ ರೋಡ್ ಷೋ ನಡೆಸಲಿದ್ದಾರೆ. ರೋಡ್ ಷೋ ಗೆ ಸುಮಾರು 450 ಬ್ಲಾಕ್‌ಗಳನ್ನು ಸಂಯೋಜನೆ ಮಾಡಲಾಗಿದೆ.
ಕೋಲಾರದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ
ಅದೇ ರೀತಿ ಏಪ್ರಿಲ್ 30 ರಂದು ಭಾನುವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 1.00 ಗಂಟೆಗೆವರೆಗೆ ಕೋಲಾರದಲ್ಲಿ, ಸಂಜೆ 4 ಗಂಟೆಗೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಚುನಾವಣಾ ಮತಯಾಚನೆ ನಡೆಸಲಿದ್ದಾರೆ. ನಂತರ ಸಂಜೆ ಮೈಸೂರಿನಲ್ಲಿ ಜೆ.ಎಸ್.ಎಸ್ ವಿದ್ಯಾಪೀಠ ವೃತ್ತದಿಂದ ಬನ್ನಿಮಂಟಪ ವೃತ್ತದ ವರೆಗೆ ಸುಮಾರು 5 ಕಿಲೋ ಮೀಟರ್ ದೂರ ರೋಡ್ ಷೋ ನಡೆಸಲಿದ್ದಾರೆ ಎಂದರು.

ಪ್ರಧಾನಮಂತ್ರಿಗಳು ಇಂದು ರಾಜ್ಯದ 67 ಲಕ್ಷ 900 ಕಾರ್ಯಕರ್ತರೊಂದಿಗೆ ವರ್ಚವಲ್ ಮೂಲಕ ನೇರ ಸಂವಾದ ನಡೆಸಿದ್ದಾರೆ. ಕಾರ್ಯಕರ್ತರಲ್ಲಿ ಹುರುಪು, ಉತ್ಸಾಹ ತುಂಬಿ ಪ್ರೇರಣೆ ನೀಡಿದ್ದಾರೆ. 58,112 ಬೂತ್‌ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದ ಹಮ್ಮಿಕೊಳ್ಳಲಾಗಿತ್ತು.
ಬೂತ್ ಮತ್ತು ಹೋಬಳಿ ಮಟ್ಟದಲ್ಲಿ ಟಿ.ವಿಗಳ ಮೂಲಕ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಯಶಸ್ವಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಏ.30ಕ್ಕೆ ಮನ್-ಕಿ-ಬಾತ್ ನ 100 ನೇ ಆವೃತ್ತಿ
ಒದೇ ಏಪ್ರಿಲ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್-ಕಿ-ಬಾತ್ ನ 100ನೇ ಆವೃತ್ತಿಯನ್ನು ವೀಕ್ಷಿಸಲು ದೇಶದ 2 ಲಕ್ಷ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯದ 12 ಶಕ್ತಿ ಕೇಂದ್ರಗಳಲ್ಲಿ ಈ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮವನ್ನು ವಿಶ್ವದಾಖಲೆ ಮಾಡುವ ಯೋಜನೆಯನ್ನು ಬಿಜೆಪಿ ಹೊಂದಿದೆ. ದೇಶಾದ್ಯಂತ ಇದನ್ನು ಹಬ್ಬವನ್ನಾಗಿ ಆಚರಿಸಲಾಗುವುದು ಎಂದು ಅವರು ವಿವರಿಸಿದರು.












Click it and Unblock the Notifications