ಶಾಸಕಾಂಗ ಪಕ್ಷದ ಸಭೆ : ಸಿದ್ದರಾಮಯ್ಯ ಮುಂದಿದೆ ದೊಡ್ಡ ಸವಾಲು!

Recommended Video

      ಸಿದ್ದರಾಮಯ್ಯ ಮುಂದಿದೆ ಒಂದು ದೊಡ್ಡ ಸವಾಲು | Oneindia Kannada

      ಬೆಂಗಳೂರು, ಡಿಸೆಂಬರ್ 17 : ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಲವು ಕಾರಣಗಳಿಗೆ ಕುತೂಹಲ ಹುಟ್ಟು ಹಾಕಿದೆ. ಅದರಲ್ಲೂ ಸಂಪುಟ ವಿಸ್ತರಣೆಗೆ ಕೆಲವು ದಿನಗಳು ಬಾಕಿ ಇರುವುದರಿಂದ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುವ ನಿರೀಕ್ಷೆ ಇದೆ.

      ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಡಿ.18ರಂದು ಬೆಳಗಾವಿಯಲ್ಲಿ ಸಭೆ ನಡೆಯಲಿದೆ. ವಿದೇಶ ಪ್ರವಾಸದಿಂದ ಮರಳಿರುವ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಬಳಿಕ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

      ಉತ್ತರ ಕರ್ನಾಟಕ ಭಾಗದ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಅಥವ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಶಾಸಕರು ಬೇಡಿಕೆ ಇಡಬಹುದು ಎಂಬ ನಿರೀಕ್ಷೆ ಇದೆ. ಪ್ರಭಾವಿ ಖಾತೆಗಳಿಗೂ ಅವರು ಬೇಡಿಕೆ ಇಡಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಂಗಳವಾರ ಅವರು ತಿರುಪತಿಗೆ ಭೇಟಿ ನೀಡಲಿದ್ದು, ಬುಧವಾರ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ....

      ಶಾಸಕರಿಂದ ಬೇಡಿಕೆ

      ಶಾಸಕರಿಂದ ಬೇಡಿಕೆ

      ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ನೀಡಬೇಕು. ಸಂಪುಟ ಪುನಾರಚನೆ ವೇಳೆ ಪ್ರಭಾವಿ ಖಾತೆಗಳನ್ನು ನೀಡಬೇಕು ಎಂದು ಬೇಡಿಕೆ ಇಡುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ಹೇಗೆ ಸಮಾಧಾನ ಪಡಿಸಲಿದ್ದಾರೆ? ಎಂಬುದನ್ನು ಕಾದು ನೋಡಬೇಕಿದೆ.

      ಹೆಚ್ಚಿನ ಸಚಿವ ಸ್ಥಾನ ಕೊಡಿ

      ಹೆಚ್ಚಿನ ಸಚಿವ ಸ್ಥಾನ ಕೊಡಿ

      ಸಂಪುಟ ಪುನಾರಚನೆ ವೇಳೆ ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕು. ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿಲ್ಲ ಎಂದು ಶಾಸಕರು ಬೇಡಿಕೆ ಇಡುವ ಸಾಧ್ಯತೆ ಇದೆ. ಜಾರಕಿಹೊಳಿ ಸಹೋದರರು, ಮತ್ತೊಂದು ಕಡೆ ಎಂ.ಬಿ.ಪಾಟೀಲ್ ಮತ್ತು ಎಸ್.ಆರ್.‌ಪಾಟೀಲ್ ಅವರು ಸಭೆಯಲ್ಲಿ ತಮ್ಮ ಬೇಡಿಕೆ ಮುಂದಿಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

      ಎಂ.ಬಿ.ಪಾಟೀಲ್ ಹೇಳುವುದೇನು?

      ಎಂ.ಬಿ.ಪಾಟೀಲ್ ಹೇಳುವುದೇನು?

      'ಉತ್ತರ ಕರ್ನಾಟಕ ಭಾಗದಿಂದ 41 ಶಾಸಕರು ಆಯ್ಕೆಯಾಗಿದ್ದಾರೆ. ಆದರೆ, ಕೇವಲ 5 ಶಾಸಕರಿಗೆ ಮಾತ್ರ ಮಂತ್ರಿಗಿರಿ ಸಿಕ್ಕಿದೆ. ದಕ್ಷಿಣ ಭಾಗದ ಶಾಸಕರಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ' ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

      ಹಿರಿಯ ನಾಯಕರ ಒತ್ತಡ

      ಹಿರಿಯ ನಾಯಕರ ಒತ್ತಡ

      ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ರಾಮಲಿಂಗಾ ರೆಡ್ಡಿ, ರೋಷನ್ ಬೇಗ್, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಸೇರಿದಂತೆ ಹಿರಿಯ ನಾಯಕರಿಗೆ ಅವಕಾಶ ಸಿಕ್ಕಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

      ಡಿಸಿಎಂ ಪಟ್ಟಕ್ಕೆ ಬೇಡಿಕೆ

      ಡಿಸಿಎಂ ಪಟ್ಟಕ್ಕೆ ಬೇಡಿಕೆ

      ಜಾರಕಿಹೊಳಿ ಸಹೋದರರು ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿಎಂ ಹುದ್ದೆಗೆ ಬೇಡಿಕೆ ಇಡುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ಗೃಹ, ಕಂದಾಯ ಸೇರಿದಂತೆ ವಿವಿಧ ಪ್ರಭಾವಿ ಖಾತೆಗಳಿಗೆ ಬೇಡಿಕೆ ಇಡುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+