ಸಿಎಂ ಘೋಷಣೆ ಕಗ್ಗಂಟು: ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರಿಗೆ ಕಾಂಗ್ರೆಸ್‌ ನೋಟಿಸ್?

ಬೆಂಗಳೂರು, ಮೇ 17: ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ನಲ್ಲಿ ಕಳೆದ ನಾಲ್ಕು ದಿನಗಳಿಂದ ಮುಖ್ಯಮಂತ್ರಿ ಆಯ್ಕೆ ವಿಚಾರ ದೆಹಲಿಯಲ್ಲಿ ಚರ್ಚೆಯಾಗುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಮಧ್ಯ ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ ಎಂಬ ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರು ಕಾಂಗ್ರೆಸ್‌ ನಾಯಕರಿಗೆ ನೋಟಿಸ್‌ ನೀಡುವ ಎಚ್ಚರಿಕೆ ನೀಡಲಾಗಿದೆ.

notice to congress

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಹಾಗೂ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್‌ ಎಂ. ಪಟ್ಟಣ್‌ ಅವರಿಗೆ ನೋಟಿಸ್‌ ನೀಡುವಂತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಈಗಾಗಲೇ ಕಳೆದ ಎರಡು ದಿನಗಳಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಜೊತೆಗೆ ಹಲವು ಸರಣಿ ಸಭೆಗಳು ನಡೆದರು ಸಹ ಇನ್ನು ಯಾರು ಮುಖ್ಯಮಂತ್ರಿ ಎಂಬ ಬಗ್ಗೆ ಅಂತಿಮ ತಿರ್ಮಾನವನ್ನ ತೆಗೆದುಕೊಂಡಿಲ್ಲ, ಇತ್ತ ಡಿ ಕೆ ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ರಾಹುಲ್‌ ಗಾಂಧಿ ಜೊತೆಗೂ ಈ ಇಬ್ಬರು ನಾಯಕರು ಸಭೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+