Lok Sabha Election 2024: ಎಸ್ ಟಿ ಸೋಮಶೇಖರ್, ಹೆಬ್ಬಾರ್ ಗೆ ಕಾಂಗ್ರೆಸ್ ಗಾಳ- ಈ ಕ್ಷೇತ್ರಗಳಿಂದ ಸ್ಪರ್ಧೆ ಫಿಕ್ಸ್?
ಬೆಂಗಳೂರು, ಡಿಸೆಂಬರ್ 06: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳ ಗೆದ್ದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್ 28 ಕ್ಷೇತ್ರಗಳ ಪೈಕಿ 20 ಕ್ಕೂ ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ನೀಡಿದ್ದು, ಕರ್ನಾಟಕ ಕಾಂಗ್ರೆಸ್ ಲೋಕಸಮರಕ್ಕೆ ಭರ್ಜರಿಯಾಗಿ ತಯಾರಿಗೆ ಪ್ಲಾನ್ ನಡೆಸಿದ್ದು, ಪ್ರಭಾವಿ ನಾಯಕರಿಗೆ ಗಾಳ ಹಾಕುತ್ತಿದೆ.
ಹೌದು, ವಿಧಾನಸಭಾ ಚುಣಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ರುಚಿ ತೋರಿಸಲು ಮೈತ್ರಿಯಾಗಿದ್ದು, ಇತ್ತ ಹೈಕಮಾಂಡ್ ಕೊಟ್ಟ ಟಾರ್ಗೆಟ್ ನ ಈಡೇರಿಸಲು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದು, ಹಲವು ತಂತ್ರಗಾರಿಕೆ ನಡೆಸುತ್ತಿದೆ.

ಈಗಾಗಲೇ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ವೀಕ್ಷಕರನ್ನ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದ್ದು, ಕಾಂಗ್ರೆಸ್ ನಲ್ಲಿ ಲೋಕಸಭಾ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯ ಕೊರತು ಉಂಟಾಗಿದ್ದು, ಬಿಜೆಪಿ ಶಾಸಕರಿಗೆ ಗಾಳ ಹಾಕುತ್ತಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಗೆ ವಿವಿಧ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಹುಡುಗಾಟದಲ್ಲಿದ್ದು, ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದಾರೆ. ಈಗಾಗಲೇ ಇಬ್ಬರು ನಾಯಕರನ್ನ ಸಂಪರ್ಕಿಸಿರುವ ಕಾಂಗ್ರೆಸ್ ನಾಯಕರು ಮೈಸೂರಿನಿಂದ ಎಸ್ ಟಿ ಸೋಮಶೇಖರ್ ಗೆ ಹಾಗೂ ಉತ್ತರ ಕನ್ನಡದಿಂದ ಶಿವರಾಂ ಹೆಬ್ಬಾರ್ ಅವರನ್ನ ಕಣಕ್ಕಿಳಿಸಲು ಮಾತುಕತೆ ನಡೆಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಾಯಕರು ಈ ಇಬ್ಬರು ಬಿಜೆಪಿ ಶಾಸಕರಿಗೆ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದು, ಈಗಾಗಲೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದು, ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಗೆ ಹೋಗುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ಮೈಸೂರು ಜಿಲ್ಲೆಯ ಉಸ್ತುವಾರಿಯಾಗಿ ಎಸ್ ಟಿ ಸೋಮಶೇಖರ್ ಅವರು ಹಲವು ಅಭಿವೃದ್ದಿ ಕಾರ್ಯಗಳನ್ನ ಮಾಡಿದ್ದು, ಮೈಸೂರು ಜಿಲ್ಲೆಯ ಮಠಮಾನ್ಯಗಳು ಹಾಗೂ ಸ್ವಾಮಿಗಳ ಜೊತೆಗೆ ಉತ್ತಮ ಒಡನಾಟವನ್ನ ಎಸ್ ಟಿ ಸೋಮಶೇಖರ್ ಹೊಂದಿದ್ದು, ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ ಎಸ್ ಟಿ ಸೋಮಶೇಖರ್ ಅವರನ್ನ ಕಣಕ್ಕಿಳಿಸಿದರು ಸುಲಭವಾಗಿ ಗೆಲ್ಲಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಇಬ್ಬರು ಶಾಸಕರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಈ ಬಿಜೆಪಿಗೆ ಕರೆದುಕೊಳ್ಳುವಾಗ ಜಾಮೂನು ಕೊಟ್ಟು, ಅವರ ಕೆಲಸ ಆದ ಮೇಲೆ ವಿಷ ಕೊಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧವಾಗಿ ಎಸ್.ಟಿ.ಸೋಮಶೇಖರ್ ಹರಿಹಾಯ್ದಿದ್ದರು. ಈ ಸಂದರ್ಭದಲ್ಲಿ, ಇಬ್ಬರೂ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಡಿತ್ತು. ಅಲ್ಲದೇ ಬಿಜೆಪಿ ನಾಯಕರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಅವರು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ತಮ್ಮ ಕ್ಷೇತ್ರದಲ್ಲಿ ಜಾರಿಗೊಳಿಸುವ ಕಾರ್ಯಕ್ರಮವನ್ನ ಕೈಗೊಂಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು.












Click it and Unblock the Notifications