ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಿ ಎಂದ ಶಾಸಕ ಗವಿಯಪ್ಪಗೆ ಶೋಕಾಸ್ ನೋಟೀಸ್: ಡಿ.ಕೆ. ಶಿವಕುಮಾರ್

ಬೆಂಗಳೂರು, ನವೆಂಬರ್‌ 26: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟೀಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹದೆ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ.

Congress Party Will Give Show Cause Notice To MLA Gaviyappa DK Shivakumar said

ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ" ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, "ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ ನಲ್ಲಿ ಹೇಮಂತ್ ಸೊರೇನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಇನ್ನು ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ" ಎಂದು ತಿಳಿಸಿದರು.

ಆದಷ್ಟು ಬೇಗ ಮಹದಾಯಿ ಯೋಜನೆಗೆ ಅನುಮತಿ ನೀಡುತ್ತೇವೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಬಹಳ ಸಂತೋಷ. ಮಹದಾಯಿ ಯೋಜನೆಗೂ ಅನುಮತಿ ಕೊಡಿಸಲಿ, ಮಾನ್ಯ ದೇವೇಗೌಡರು ಮೇಕೆದಾಟು ಯೋಜನೆಗೂ ಅನುಮತಿ ಕೊಡಿಸುವುದಾಗಿ ಹೇಳಿದ್ದು, ಅದನ್ನೂ ಕೊಡಿಸಲಿ. ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲು ಸಹಕಾರ ಕೊಟ್ಟರೆ ನಾವು ಅದನ್ನು ಬಳಸಿಕೊಳ್ಳಲು ಸಿದ್ಧ" ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, "ಖಂಡಿತಾ, ಕಾಂಗ್ರೆಸ್ ಕಚೇರಿ ನಮ್ಮ ಪಾಲಿನ ದೇವಾಲಯ. ಅಲ್ಲಿಗೆ ಹೋದ ಮೇಲೆ ನಾಯಕರನ್ನು ಭೇಟಿ ಮಾಡುತ್ತೇವೆ" ಎಂದು ತಿಳಿಸಿದರು. ಇನ್ನೂ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಈ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ ಎಂದು ತಿಳಿಸಿದರು. ಸಚಿವರಿಗೂ ತಮ್ಮ ಸ್ಥಾನ ಬಿಡಲು ಹೇಳಿರುವುದಾಗಿ ಭಾಷಣದಲ್ಲಿ ಪ್ರಸ್ತಾಪ ಮಾಡಿದಿರಿ ಎಂದು ಕೇಳಿದಾಗ "ಅದು ತಕ್ಷಣಕ್ಕೆ ಅಲ್ಲ. ಅದಕ್ಕೆ ಇನ್ನು ಸಮಯಾವಕಾಶವಿದೆ ಎಂದು ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+