ಲೋಕಸಭಾ ಚುನಾವಣೆಯಲ್ಲಿ‌ ಶಿಗ್ಗಾಂವಿಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ಸಿಗೆ ಅಧಿಕ ಮತ: ಗೆಲುವು ನಮ್ಮದೇ ಎಂದ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 26: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಸನ್ನದ್ಧವಾಗಿದ್ದು , ಮೂರು ಕ್ಷೇತ್ರಗಳಿಗೆ ಸಮರ್ಥರಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದರು.

Congress party will win majority in Shiggaon Says Siddaramaiah

ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ ಮಾಡಿರುವ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಕುಮಾರಸ್ವಾಮಿಯವರ ಭಾವನಾತ್ಮಕ ಭಾಷಣ, ಕಣ್ಣೀರುಗಳಿಗೆ ಜನರು ಮಾರುಹೋಗುವುದಿಲ್ಲ ಎಂದರು. ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ , ಅವರಿಗೇ ಈ ಬಾರಿ ಅವಕಾಶ ನೀಡಲಾಗಿದೆ. ಇದೇ ಪ್ರದೇಶದ ಸೈಯದ್ ಅಜೀಂಪೀರ್ ಖಾದ್ರಿಯವರು ಸಮರ್ಥ ನಾಯಕರಿದ್ದು, ಅವರು ಸಲ್ಲಿಸಿರುವ ನಾಮಪತ್ರವನ್ನು ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಪ್ರತಿಸ್ಪರ್ಧಿ, ವ್ಯಕ್ತಿ ಅಲ್ಲ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಠಾನ್ ಅವರು ಎದುರಾಳಿಯಾಗಿಲ್ಲದಿದ್ದಲ್ಲಿ ಕಳೆದ ಚುನಾವಣೆಯಲ್ಲಿ 60 ಸಾವಿರ ಮತಗಳನ್ನು ಪಡೆಯುತ್ತಿದ್ದರೇ? ಕಳೆದ ಬಾರಿ ಶಿಗ್ಗಾಂವಿಯಲ್ಲಿ ಬಿಜೆಪಿ ಜಯ ಸಾಧಿಸಿದ್ದರೂ, ಕಾಂಗ್ರೆಸ್ ಒಳ್ಳೆಯ ಸ್ಪರ್ಧೆಯನ್ನು ನೀಡಿತ್ತು. ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ 8000 ಮತಗಳ ಮುನ್ನಡೆಯನ್ನು ಕಾಂಗ್ರೆಸ್ ಸಾಧಿಸಿತ್ತು ಎಂದು ಹೇಳಿದರು.

ಕಾಂಗ್ರೆಸ್ ನಮಗೆ ನೇರ ಎದುರಾಳಿ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಯಾರನ್ನೇ ಅಭ್ಯರ್ಥಿ ಮಾಡಿದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ‌ನಮಗೆ ನೇರ ಎದುರಾಳಿ. ಈ ಉಪ ಚುನಾವಣೆಯಲ್ಲಿ ಭರತ್ ಬೊಮ್ಮಾಯಿಗೆ ನನಗಿಂತ ಹೆಚ್ಚಿನ ದೊಡ್ಡ ಬೆಂಬಲ ದೊರೆಯುತ್ತದೆ. ದೊಡ್ಡ ಅಂತರದಲ್ಲಿ ಭರತ್ ಗೆಲ್ಲುವ ವಿಶ್ವಾಸ ಇದೆ. ಈ ಬಾರಿ ನಮಗೆ ಅತಿ ಹೆಚ್ಚು ಜನ ಬೆಂಬಲ ದೊರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭರತ ಬೊಮ್ಮಾಯಿ ನನಗಿಂತ ಹೆಚ್ಚು ಮತ ಪಡೆಯುತ್ತಾರೊ ಇಲ್ಲವೊ ಎಂದು ನಾನು ಭವಿಷ್ಯ ಹೇಳುವುದಿಲ್ಲ. ಆದರೆ, ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಶಿಗ್ಗಾವಿ, ಸಂಡೂರು ಬಿಜೆಪಿ ಗೆಲ್ಲುತ್ತದೆ. ಚನ್ನಪಟ್ಟಣವನ್ನೂ ಎನ್ ಡಿಎ ಗೆಲ್ಲುತ್ತದೆ ಎಂದರು.

ಕ್ಷೇತ್ರದಲ್ಲಿ ಅಸಮಾಧಾನ ಇರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದಲ್ಲಿ ಯಾವುದೆ ಅಸಮಾಧಾನ ಇಲ್ಲ. ನಾನು ಚುನಾವಣೆ ಮಾಡುವಾಗ ಸಣ್ಣಪುಟ್ಟ ಅಸಮಾಧಾನ ಇತ್ತು. ಈಗ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡುವಾಗ ಯಾವುದೇ ಭಿನ್ನಮತ ಇಲ್ಲ ಎಂದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ನಿಂತರೂ ಗೆಲ್ಲುವುದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರೀಯಿಸಿದ ಅವರು, ಅವರಿಗೆ ಸರಿಯಾದ ಕಾಂಗ್ರೇಸ್ ನಲ್ಲಿ ಅಭ್ಯರ್ಥಿ ಹುಡುಕಲಿಕ್ಕೆ ಆಗಲಿಲ್ಲ ಇದರ ಮೇಲೆ ನೀವೆ ಅರ್ಥ ಮಾಡಿಕೊಳ್ಳಿ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+