Get Updates
Get notified of breaking news, exclusive insights, and must-see stories!

Lok Sabha Election 2024: ಕಾಂಗ್ರೆಸ್ ಪಕ್ಷದ 4 ಮತ್ತು 5ನೇ ಗ್ಯಾರಂಟಿ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಮಾರ್ಚ್ 16: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂಬರುವ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಮತ್ತು ಐದನೇ ನ್ಯಾಯ್ ಭರವಸೆಗಳನ್ನು ಘೋಷಣೆ ಮಾಡಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು ಶ್ರಮಿಕ ನ್ಯಾಯ್, ಭಾಗೀದಾರರ (ಹಿಸ್ಸೇದಾರ್) ನ್ಯಾಯ್ ಅನ್ನು ಶನಿವಾರ ಘೋಷಿಸಿದರು. ರಾಹುಲ್ ಗಾಂಧಿ ಅವರು ಮಣಿಪುರದ ಮುಂಬೈವರೆಗಿನ ನ್ಯಾಯ ಯಾತ್ರೆ ನಾಳೆ ಅಂತಿಮವಾಗಲಿದೆ. ಈ ಸುದೀರ್ಘ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಕಿಸಾನ್ ನ್ಯಾಯ, ಯುವ ನ್ಯಾಯ್, ಮಹಿಳಾ ನ್ಯಾಯ್ ವರ್ಗಗಗಳಲ್ಲಿ 15 ಗ್ಯಾರಂಟಿ ಭರವಸೆಗಳನ್ನು ಘೋಷಣೆ ಮಾಡಿದ್ದಾರೆ. ಇಂದು ನಮ್ಮ ಪಕ್ಷದ ವತಿಯಿಂದ ನಾಲ್ಕನೆಯ ಶ್ರಮಿಕ ನ್ಯಾಯ್ ಹಾಗೂ ಐದನೆಯ ಭಾಗೀದಾರರ ನ್ಯಾಯ್ ಅನ್ನು ಘೋಷಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

Congress party s 4th and 5th guarantees announced by Mallikarjun Kharge

ದೇಶದಲ್ಲಿ ಎಲ್ಲಾ ಭಾರತೀಯರಿಗೆ ನ್ಯಾಯ ಒದಗಿಸುವುದು ಈ ಯಾತ್ರೆ ಹಾಗೂ ನಮ್ಮ ಉದ್ದೇಶವಾಗಿದೆ. ಕಾರ್ಮಿಕರ ರಕ್ಷಣೆಗಾಗಿ ಕಾಂಗ್ರೆಸ್ ಸರ್ಕಾರವು ಈವರೆಗೂ ಕನಿಷ್ಠ ವೇತನ ಕಾಯ್ದೆಯಿಂದ, ಆರೋಗ್ಯ ಮಿಮಾ ಕಾಯ್ದೆ. ಕಾರ್ಮಿಕ ಭವಿಷ್ಯ ನಿಧಿ (ಪಿಎಫ್) ಕಾಯ್ದೆ, ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ಅನೇಕ ಕಾನೂನು ಜಾರಿಗೆ ತಂದಿದೆ. ಆದರೆ ಮೋದಿ ಅವರ ಕಳೆದ 10 ವರ್ಷಗಳ ಆಡಳಿತದಲ್ಲಿ ಕಾರ್ಮಿಕರ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಮೋದಿ ಸರ್ಕಾರ ನರೇಗಾ ಯೋಜನೆ ಕಾರ್ಮಿಕರ ವೇತನದ ಹಣವನ್ನು ರಾಜ್ಯಗಳಿಗೆ ಈವರೆಗೂ ನೀಡಿಲ್ಲ.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿದ್ದೇವೆ. ಆದರೆ ನರೇಗಾ ಯೋಜನೆ ಅನುದಾನ ಹಾಗೂ ಬರ ಪರಿಸ್ಥಿತಿಯಲ್ಲಿ ನರೇಗಾ ಯೋಜನೆಯಲ್ಲಿ ಕೂಲಿ ದಿನವನ್ನು 150ಕ್ಕೆ ಏರಿಸುತ್ತಿಲ್ಲ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಎಷ್ಟೇ ಮನವಿ ನೀಡಿ ಗೋಗರೆದರೂ ಮೋದಿ ಸರ್ಕಾರ ಸಹಕಾರ ನೀಡುತ್ತಿಲ್ಲ. ಕಾರ್ಮಿಕರ ರಕ್ಷಣೆಗಾಗಿ ಇರುವ ಈ ಕಾಯ್ದೆಗಳನ್ನು ಕಡ್ಡಾಯವಾಗಿ ಕಾರ್ಯವಹಿಸಲು ಹಾಗೂ ಕಾರ್ಮಿಕರ ರಕ್ಷಣೆಗೆ ಈ ಶ್ರಮಿಕ ನ್ಯಾಯ್ ಭರವಸೆ ನೀಡಲಾಗುತ್ತಿದೆ.

Congress party s 4th and 5th guarantees announced by Mallikarjun Kharge

ಶ್ರಮಿಕ ನ್ಯಾಯದ ಐದು ಗ್ಯಾರಂಟಿಗಳು:

• ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಕಾರ್ಮಿಕರಿಗೆ ಉಚಿತ ಔಷಧಿ, ಚಿಕಿತ್ಸೆ, ಡಯಾಗ್ನೋಸ್ಟಿಕ್ಸ್, ಶಸ್ತ್ರ ಚಿಕಿತ್ಸೆ ನೀಡಲಾಗುವುದು.
• ನರೇಗಾ ಯೋಜನೆ ಅಡಿಯಲ್ಲಿ ಕೂಲಿಗಾರರ ದಿನಗೂಲಿ ಮೊತ್ತವನ್ನು ದೇಶದಾದ್ಯಂತ 400ಕ್ಕೆ ಏರಿಕೆ ಮಾಡಲಾಗುವುದು.
• ನರೇಗಾ ಮಾದರಿಯಲ್ಲಿ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು ಆಮೂಲಕ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರಿತ್ಯದ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದಾಗಿದೆ.
• ಅಸಂಘಟಿತ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆಗಳು ಸೇರಿದಂತೆ ಸಾಮಾಜಿಕ ಭದ್ರತೆ ಒದಗಿಸುವುದು.
• ಮೋದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕನ್ನು ಮರುಸ್ಥಾಪಿಸಲಾಗುವುದು.

ಭಾಗೀದಾರರ ನ್ಯಾಯದ ಐದು ಗ್ಯಾರಂಟಿಗಳು

• ರಾಷ್ಟ್ರ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ನಡೆಸುವ ಮೂಲಕ ದೇಶದ ಸಂಪತ್ತನ್ನು ಸಮಾನವಾಗಿ ಹಂಚಿಕೆ ಮಾಡುವುದು. ಆಡಳಿತದಲ್ಲಿ ಎಲ್ಲಾ ವರ್ಗದವರ ಪ್ರಾತಿನಿಧ್ಯಕ್ಕೆ ಅವಕಾಶ ಕಲ್ಪಿಸಲಾಗುವುದು.
• ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಡ್ಡಿಯಾಗಿರುವ ಶೇ.50ರಷ್ಟು ಮಿಸಲಾತಿ ಮಿತಿಯನ್ನು ತಿದ್ದುಪಡಿಗಳ ಮೂಲಕ ಏರಿಕೆ ಮಾಡಲಾಗುವುದು.
• ಆದಿವಾಸಿಗಳಿಗೆ ಅರಣ್ಯ ಹಕ್ಕು ರಕ್ಷಣೆ ಮಾಡಲಾಗುವುದು. ಒಂದು ವರ್ಷದಲ್ಲಿ ಬಾಕಿ ಇರುವ ಅರಣ್ಯ ಹಕ್ಕು ಕಾಯ್ದೆಯ ಬೇಡಿಕೆಯನ್ನು ಪೂರ್ಣಗೊಳಿಸಲಾಗುವುದು. ಇದರ ಜತೆಗೆ ಸಣ್ಣ ಅರಣ್ಯ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ, ಅರಣ್ಯ ಸಂರಕ್ಷಣೆ ಕಾಯ್ದೆ ಹೆಸರಿನಲ್ಲಿ ಮಾಡಲಾಗಿರುವ ಬಡಕಟ್ಟು ವಿರೋಧಿ ತಿದ್ದುಪಡಿಗಳನ್ನು ರದ್ದು ಮಾಡಲಾಗುವುದು.
• ಆದಿವಾಸಿಗಳಿಗೆ ಸ್ವಯಂ ಆಡಳಿತ ಹಾಗೂ ಸಂಸ್ಕೃತಿ ರಕ್ಷಣೆ ಹಕ್ಕು ನೀಡಲಾಗುವುದು.
• ಇನ್ನು ಮಧ್ಯಪ್ರದೇಶ ಛತ್ತೀಸ್ ಗಡ, ಪಶಿಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಜನ ಅರಣ್ಯ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಇವರಿಗಾಗಿ ಜಲ, ಅರಣ್ಯ ಹಾಗೂ ಭೂಮಿಯನ್ನು ನಾವು ರಕ್ಷಣೆ ಮಾಡುತ್ತೇವೆ.

ದೊಡ್ಡ ಉದ್ಯಮಿಗಳು ಅರಣ್ಯ ಪ್ರದೇಶಕ್ಕೆ ಕಾಲಿಡುತ್ತಿದ್ದು ಅವರಿಂದ ಅರಣ್ಯ ರಕ್ಷಣೆ ಮಾಡಲಾಗುವುದು. ಇನ್ನು ಸರ್ಕಾರದಲ್ಲಿರುವ ಮೀಸಲಾತಿ ಹುದ್ದೆಗಳನ್ನು ನೇಮಕ ಮಾಡಲಾಗುವುದು. ಈ ವರ್ಗದವರಿಗೆ ಖಾಯಂ ಉದ್ಯೋಗ ಸಿಗಬಾರದು ಎಂಬ ಉದ್ದೇಶದಿಂದ ಮೋದಿ ಅವರ ಸರ್ಕಾರ ನೇಮಕಾತಿಗಳನ್ನು ಮಾಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದಾಗ ನೇಮಕಾತಿ ಮಾಡಲಾಗುವುದು.

ಈ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರ್ಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಳ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ. ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಘೋಷಣೆ ಮಾಡಿದ ಐದೂ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸರ್ಕಾರ ಹಾಗೂ ಸಚಿವರುಗಳು ಜಾರಿಗೊಳಿಸಿದ್ದಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+