ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು; 5 ಕಾರಣಗಳು

ಬೆಂಗಳೂರು, ಸೆಪ್ಟೆಂಬರ್ 15 : 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿತ್ತು. 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಲು ಪಕ್ಷ ಯಶಸ್ವಿಯಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿತ್ತು. ಕೆಪಿಸಿಸಿ ಚುನಾವಣಾ ಸೋಲಿನ ಕುರಿತು ವರದಿ ನೀಡಲು ಸತ್ಯಶೋಧನಾ ಸಮಿತಿಯನ್ನು ವಿ. ಆರ್. ಸುದರ್ಶನ್ ನೇತೃತ್ವದಲ್ಲಿ ರಚನೆ ಮಾಡಿತ್ತು.

ಸತ್ಯಶೋಧನಾ ಸಮತಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೊರತುಪಡಿಸಿ ಉಳಿದ 27 ಕ್ಷೇತ್ರಗಳಲ್ಲಿ ಸಂಚಾರ ನಡೆಸಿ ವರದಿಯನ್ನು ತಯಾರು ಮಾಡಿದೆ. ಕಾಂಗ್ರೆಸ್ ಪಕ್ಷದ ಸೋಲಿಗೆ 5 ಪ್ರಮುಖ ಕಾರಣಗಳನ್ನು ಪಟ್ಟಿ ಮಾಡಿದೆ.

ಅಕ್ಟೋಬರ್ 2ರಂದು ಕೆಪಿಸಿಸಿ ಅಧ್ಯಕ್ಷರಿಗೆ ವರದಿಯನ್ನು ಸಮಿತಿ ಹಸ್ತಾಂತರ ಮಾಡಲಿದೆ. ಮೈತ್ರಿ ಸರ್ಕಾರದ ಗೊಂದಲ, ಸ್ಥಳೀಯ ಮಟ್ಟದ ಕಾರ್ಯಕರ್ತರ ಹೊಂದಾಣಿಕೆ ಕೊರತೆ ಸೋಲಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ನೀಡಿರುವ 5 ಕಾರಣಗಳು ಇಲ್ಲಿವೆ.

ಕಾರಣ - 1

ಕಾರಣ - 1

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಲೋಕಸಭಾ ಚುನಾವಣೆಯಲ್ಲಿ ಅದು ಫಲ ನೀಡಿಲಿಲ್ಲ. ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದ ಸ್ಥಳೀಯ ಮಟ್ಟದ ನಾಯಕರು, ಕಾರ್ಯಕರ್ತರು ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಲಿಲ್ಲ. ಸ್ಥಳೀಯ ಮಟ್ಟದಲ್ಲಿ ಈ ಸಮಸ್ಯೆ ಇರುವ ಬಗ್ಗೆ ಮಾಹಿತಿ ಇದ್ದರೂ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು ತಪ್ಪು, ಇದರಿಂದಾಗಿ ಹಿನ್ನಡೆ ಉಂಟಾಗಿದೆ.

ಕಾರಣ - 2

ಕಾರಣ - 2

ಕಾಂಗ್ರೆಸ್‌-ಜೆಡಿಎಸ್ ಮೈತ್ರಿಯ ಬಳಿಕ ಯಾವ ಕ್ಷೇತ್ರವನ್ನು ಯಾರಿಗೆ ಬಿಟ್ಟುಕೊಡಬೇಕು ಎಂಬ ಗೊಂದಲ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ ತನಕ ಮುಂದುವರೆಯಿತು. ಇದರಿಂದಾಗಿ ಕಾರ್ಯಕರ್ತರು ಉತ್ಸಾಹದಿಂದಾಗಿ ಕೆಲಸ ಮಾಡಲು ಆಗಲಿಲ್ಲ. ಚುನಾವಣೆಯಲ್ಲಿ ಹಿನ್ನಡೆ ಆಗಲು ಇದು ಸಹ ಕಾರಣವಾಯಿತು.

ಕಾರಣ - 3

ಕಾರಣ - 3

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷ ತೊರೆಯಲು ಅನರ್ಹ ಶಾಸಕರು ಸಿದ್ಧವಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರ ಮತ್ತು ತಮ್ಮ ಪ್ರಭಾವ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಲೇ ಇಲ್ಲ. ಇದರಿಂದಾಗಿ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಯಿತು. ಆದ್ದರಿಂದ, 1 ಸೀಟು ಗೆಲ್ಲುವುದು ಮಾತ್ರ ಸಾಧ್ಯವಾಯಿತು.

ಕಾರಣ - 4

ಕಾರಣ - 4

ಉಡುಪಿ-ಚಿಕ್ಕಮಗಳೂರು, ವಿಜಯಪುರ, ಉತ್ತರ ಕನ್ನಡ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನೆಲೆಯೇ ಇಲ್ಲ. ಆದರೂ ಆ ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಇದು ಅಕ್ಕಪಕ್ಕದ ಕ್ಷೇತ್ರಗಳ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿತು. ಆದ್ದರಿಂದ, ಮೂರು ಕ್ಷೇತ್ರದ ಜೊತೆಗೆ ಅಕ್ಕ-ಪಕ್ಕದ ಕ್ಷೇತ್ರದಲ್ಲಿಯೂ ಸೋಲಾಯಿತು.

ಕಾರಣ - 5

ಕಾರಣ - 5

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ ನಿಲ್ಲಲಿಲ್ಲ. ನಾಯಕರ ನಡುವಿನ ಗೊಂದಲ ಕಾರ್ಯಕರ್ತರ ಮೇಲೆಯೂ ಪರಿಣಾಮ ಬೀರಿತು. ಆದ್ದರಿಂದ, ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಕೇವಲ 2 ಸೀಟುಗಳು ಮಾತ್ರ ಸಿಕ್ಕಿದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+