ಸಚಿವ ಸುಧಾಕರ್ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಮಾರ್ಚ್ 24: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಸಚಿವರ ಹೇಳಿಕೆಗೆ ವಿವಿಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
Recommended Video
ಬುಧವಾರ ಬೆಳಗ್ಗೆ ಡಾ. ಕೆ. ಸುಧಾಕರ್ ಅವರು "ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ?. ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?" ಎಂದು ಹೇಳಿಕೆ ನೀಡಿದ್ದರು.

"ನಾನೂ ಸೇರಿದಂತೆ 224 ಶಾಸಕರ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ. ಎಲ್ಲಾ ಮಂತ್ರಿಗಳದ್ದೂ, ಶಾಸಕರದ್ದೂ, ವಿರೋಧ ಪಕ್ಷದವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ? ಎಂಬುದು ತಿಳಿಯಲಿ ಬಿಡಿ" ಎಂದು ಹೇಳಿದ್ದರು.
ಮಧ್ಯಾಹ್ನ ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಹೇಳಿಕೆಯನ್ನು ಪ್ರಸ್ತಾಪಿಸಿದರು. "224 ಶಾಸಕರು ವ್ಯಭಿಚಾರಿಗಳಾ?, ನಿಮಗೆ ಮಾನ, ಮರ್ಯಾದೆ ಇಲ್ವಾ?" ಎಂದು ಪ್ರಶ್ನಿಸಿದರು.
"ನಿಮ್ಮ ಹೇಳಿಕೆಯನ್ನು ವಾಪಸ್ ಪಡೆಯಿರಿ. ಸಚಿವರ ರಾಜೀನಾಮೆ ಕೊಡಿಸಿ" ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಜೆಡಿಎಸ್ ಸದಸ್ಯರು ಸದ ಇದಕ್ಕೆ ಧ್ವನಿ ಗೂಡಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಸದಸ್ಯರನ್ನು ಸಮಾಧಾನ ಪಡಿಸಿದರು.
ಸಚಿವರ ಸ್ಪಷ್ಟನೆ; ತಮ್ಮ ಹೇಳಿಕೆ ಬಗ್ಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.
ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.(1/2)
— Dr Sudhakar K (@mla_sudhakar) March 24, 2021











Click it and Unblock the Notifications