ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಕಲಾಪ; ಪಟ್ಟು ಬಿಡದ ಕಾಂಗ್ರೆಸ್‌, ಜೆಡಿಎಸ್‌ನಿಂದ ಸಭಾತ್ಯಾಗ

|
Google Oneindia Kannada News

ಬೆಂಗಳೂರು, ಮಾರ್ಚ್ 23: ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ವಿಧಾನಸಭೆಯಲ್ಲಿ ಗದ್ದಲ ಮುಂದುವರೆದಿದೆ. ವಿಧಾನಸಭೆ ಕಲಾಪಕ್ಕೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸುತ್ತಿದ್ದಾರೆ. ಸ್ಪೀಕರ್ ಮನವೊಲಿಕೆ ಯತ್ನವೂ ವಿಫಲವಾಗಿದ್ದು, ಜೆಡಿಎಸ್ ಸಭಾತ್ಯಾಗ ಮಾಡಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರರಕರಣ ದಾಖಲು ಮಾಡಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ಕೋರ್ಟ್ ಮೊರೆ ಹೋಗಿರುವ 6 ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳವಾರ ಎರಡು ಬಾರಿ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಕಲಾಪ ಪುನಃ ಆರಂಭವಾದಾಗ ಕಾಂಗ್ರೆಸ್‌ನಿಂದ ವಿಧಾನಸಭೆಯಲ್ಲಿ ಗದ್ದಲ ಮುಂದುವರೆಯಿತು.

Congress Protest In Assembly Session JDS Walks Out

Recommended Video

ಇಂದು ಕೂಡ ಸದನದಲ್ಲಿ ಸಿಡಿ ವಿಚಾರ ಚರ್ಚೆ ಆರಂಭಿಸಿದ ಕಾಂಗ್ರೆಸ್ | Oneindia Kannada

ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಹೋರಾಟವನ್ನು ಮುಂದುವರೆಸಿದರು. ಗದ್ದಲದ ನಡುವೆಯೇ ಕೆಲವು ವಿಧೇಯಕಗಳನ್ನು ಮಂಡನೆ ಮಾಡಲಾಯಿತು, ಅನುಮೋಧನೆಯನ್ನು ಪಡೆಯಲಾಯಿತು. ಈ ನಡುವೆ ವಿಧಾನಸಭೆ ಕಲಾಪದಿಂದ ಜೆಡಿಎಸ್ ಸದಸ್ಯರು ಹೊರನಡೆದರು.

English summary
Karnataka Congress demand for FIR against Ramesh Jarkiholi and protest in assembly session. JD(S) leader H. D. Revanna and other members of his party walked out.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X