ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೈಲ ಬೆಲೆ ಏರಿಕೆ: ರಾಜ್ಯಾದ್ಯಂತ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

By Lekhaka
|
Google Oneindia Kannada News

ಕರ್ನಾಟಕ, ಜೂನ್ 29: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿನಿತ್ಯ ಏರಿಕೆ ಮಾಡುವುದನ್ನು ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು.

Recommended Video

Lunar Eclipse July 5th : ಜುಲೈ 5ಕ್ಕೆ ಚಂದ್ರ ಗ್ರಹಣ , ಇಲ್ಲಿದೆ ಕಂಪ್ಲೀಟ್ ಮಾಹಿತಿ | Oneindia Kannada

ಸೋಮವಾರ ಬೆಳಿಗ್ಗೆ ನಗರದ ಜಯದೇವ ವೃತ್ತದಲ್ಲಿ ಎತ್ತಿನಬಂಡಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ ಮಂಜಪ್ಪನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಂತರ ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಬೆಂಗಳೂರು ಜನತೆಯ ನೆಮ್ಮದಿ ಕಾಂಗ್ರೆಸ್‌ಗೆ ಬೇಕಿಲ್ಲ!ಬೆಂಗಳೂರು ಜನತೆಯ ನೆಮ್ಮದಿ ಕಾಂಗ್ರೆಸ್‌ಗೆ ಬೇಕಿಲ್ಲ!

ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿತಾಬಾಯಿ ಮಾಲತೇಶ್, ಲಾಕ್ ಡೌನ್ ನ ಕಳೆದ ಮೂರು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕದ ಬೆಲೆಯಲ್ಲಿ ಪುನರಾವರ್ತಿತ ಮತ್ತು ಅನ್ಯಾಯದ ಹೆಚ್ಚಳವು ಭಾರತದ ಜನರ ಮೇಲೆ ದುಸ್ತರ ನೋವು ಮತ್ತು ಸಂಕಟವನ್ನು ಉಂಟುಮಾಡಿದೆ ಎಂದು ದೂರಿದರು.

Congress Protests Against Central Government Condemning Oil Price Hike

ದೇಶವು ಅಭೂತಪೂರ್ವ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಇಂತಹ ಸಂದರ್ಭದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಮೋದಿ ಸರ್ಕಾರವು ಹೆಚ್ಚಿಸಿ ಜನರ ದುಃಖದಿಂದ ಲಾಭವನ್ನು ಗಳಿಸಲು ಹೊರಟಿರುವುದು ದುರಂತ ಎಂದರು.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿ ಮೋದಿ ಸರ್ಕಾರ ಕಳೆದ ಆರು ವರ್ಷಗಳಲ್ಲಿ 18 ಲಕ್ಷ ಕೋಟಿ ರೂ. ಗಳಿಸಿದೆ ಎಂದು ದೂರಿದ ಅವರು, ಮೂರು ತಿಂಗಳ ಹಿಂದೆ ಲಾಕ್ ಡೌನ್ ನಿಂದ ಬೆಲೆಗಳು ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದ ಪುನರಾವರ್ತಿತ ಹೆಚ್ಚಳದಿಂದ ಸುಲಿಗೆ ಮತ್ತು ಲಾಭದಾಯಕತೆಯು ಎಲ್ಲಾ ರೀತಿಯ ಶೋಷಣೆಯನ್ನು ಮೀರಿದೆ ಎಂದು ದೂರಿದರು.

ಕಾಂಗ್ರೆಸ್‌ ಕಚೇರಿಗೆ ಹೋಗಲು ಕಾರು ಬಿಟ್ಟು ಸೈಕಲ್ ಏರಿದ ಸಿದ್ದರಾಮಯ್ಯ!ಕಾಂಗ್ರೆಸ್‌ ಕಚೇರಿಗೆ ಹೋಗಲು ಕಾರು ಬಿಟ್ಟು ಸೈಕಲ್ ಏರಿದ ಸಿದ್ದರಾಮಯ್ಯ!

ಜೂನ್ 7, 2020 ರಿಂದ ಜೂನ್ 24, 2020 ರವರೆಗೆ ಹೃದಯರಹಿತ ಮೋದಿ ಸರ್ಕಾರವು ಸತತವಾಗಿ 18 ದಿನಗಳವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದ್ದು, ಡೀಸೆಲ್ ಗೆ ಪ್ರತಿ ಲೀಟರ್ ಗೆ 10.48 ರೂ. ಮತ್ತು ಪೆಟ್ರೋಲ್ ಗೆ 8.50 ರೂ. ಹೆಚ್ಚಿಸಿದೆ ಎಂದರು.

Congress Protests Against Central Government Condemning Oil Price Hike

ಚಿಕ್ಕಮಗಳೂರು:

ಚಿಕ್ಕಮಗಳೂರಿನ ನಗರದ ಐಜಿ ರಸ್ತೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೈಕಲ್ ಸವಾರಿ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಶಾಸಕ ರಾಜೇಗೌಡ, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಚಿತ್ರದುರ್ಗ:

ಕೋಟೆನಾಡು ಚಿತ್ರದುರ್ಗದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಎತ್ತಿನ ಗಾಡಿಯ ಮೇಲೆ ಬೈಕ್ ಸಾಗಿಸಿ ವಿನೂತನವಾಗಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ‌ ಸಂಸದ ಬಿಎನ್ ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕ ಬಿ.ಜಿ ಗೋವಿಂದಪ್ಪ, ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ:

ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಎನ್. ಕೇಶವರೆಡ್ಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Congress Protests Against Central Government Condemning Oil Price Hike

ಕೋಲಾರ:

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಈ ಸಂದರ್ಭ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. ದೇಶದಲ್ಲಿ ಕೊರೊನಾ ಸೋಂಕು ಕಡಿಮೆ ಇದ್ದ ವೇಳೆ ಲಾಕ್ ಡೌನ್ ಮಾಡಲಾಗಿತ್ತು. ಜಾಸ್ತಿ ಆದ ಮೇಲೆ ಲಾಕ್ ಡೌನ್ ಸಡಿಲ ಮಾಡಲಾಗಿದೆ ಎಂದೂ ಆರೋಪಿಸಿದರು.

ಮಂಡ್ಯ:

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿ, ತಕ್ಷಣವೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದರು.

ರಾಮನಗರ:

ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಕೈಗೊಂಡು ಕಾಂಗ್ರೆಸ್ ಕಚೇರಿಯಿಂದ ಅಂಚೆ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಎಂಎಲ್ಸಿ ಸಿ.ಎಂ ಲಿಂಗಪ್ಪ, ಜಿಲ್ಲಾಧ್ಯಕ್ಷ ಗಂಗಾಧರ್, ಇಕ್ಬಾಲ್ ಹುಸೇನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ಚಿಕ್ಕೋಡಿ:

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು, ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಸಿ ಚಿಕ್ಕೋಡಿ ಎಸಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಕೆ ಮಾಡಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರ ವಿರೋಧ ಘೋಷಣೆ ಹಾಕಿ ಪ್ರತಿಭಟನೆ ನಡೆಸಿದರು.

English summary
The Davangere District Congress Party held protest against the central government condemning the hike in petrol and diesel prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X