ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಎಂದು ಆರೋಪಿಸಿದ ಕಾಂಗ್ರೆಸ್‌ ವಿಭಿನ್ನವಾಗಿ ಪ್ರತಿಭಟಿಸಿತು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಮೇಖ್ರಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜಿವಾಲ್‌ ವಹಿಸಿದ್ದರು. ರಾಜ್ಯಕ್ಕೆ ಕೇಂದ್ರದಿಂದ ಆಗಿರುವ ಅನ್ಯಾಯದ ವಿರುದ್ಧ ಅನ್ಯಾಯವಾಗಿದೆ ಎಂದು ಅವರು ಇದೇ ವೇಳೆ ಗುಡುಗಿದರು. ಇದೇ ವೇಳೆ ಕಾಂಗ್ರೆಸ್‌ ಮುಖಂಡರು ಖಾಲಿ ಚೊಂಬನ್ನು ಪ್ರದರ್ಶನ ಮಾಡಿ ಆಕ್ರೋಶವನ್ನು ಹೊರ ಹಾಕಿತು.

Congress protests in Bangalore with an empty mug

ಕೇಂದ್ರದಲ್ಲಿನ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಬರೀ ಖಾಲಿ ಚೊಂಬನ್ನು ನೀಡಿದೆ. ಬರ ಪರಿಹಾರ ವಿಚಾರದಲ್ಲೂ ಬಿಜೆಪಿ ಸರ್ಕಾರ ಮೋಸ ಮಾಡಿದೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಿದ್ದ 62 ಸಾವಿರ ಕೋಟಿ ಬದಲು ಕರ್ನಾಟಕಕ್ಕೆ ಖಾಲಿ ಚೊಂಬು ಸಿಕ್ಕಿದೆ ಎಂದು ಸುರ್ಜಿವಾಲ್‌
ಆರೋಪಿಸಿದರು.

ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 27 ಸ್ಥಾನಗಳನ್ನು ಬಿಜೆಪಿ ಹಾಗೂ ಜೆಡಿಎಸ್‌ಗೆ ನೀಡಿದೆ. ಸಂಸದರು ರಾಜ್ಯಕ್ಕೆ ಬರೀ ಚೊಂಬು ನೀಡಲಷ್ಟೇ ಶಕ್ತರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯದ ಮತದಾರ ಇದನ್ನೇ ನೀಡಲಿದ್ದಾರೆ ಎಂದು ಚೊಂಬನ್ನು ತೋರಿಸುತ್ತಾ ಸುರ್ಜಿವಾಲ್‌ ಹೇಳಿದರು.

Congress protests in Bangalore with an empty mug

ಬರೀ ಅನ್ಯಾಯ

ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಮೋಸ ಮಾಡಿದ ಬಿಜೆಪಿ ಸರ್ಕಾರ ,ರೈತರ ಆದಾಯ ದ್ವಿಗುಣಗೊಳಿಸಲಿಲ್ಲ, ನಾವು ಕಟ್ಟುವ ಪ್ರತಿ 100 ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು ನೀಡಿದೆ.

ಬಿಜೆಪಿ ಸರ್ಕಾರದಿಂದ ಮೋಸ

ಬಿಜೆಪಿ ಸರ್ಕಾರ ಎಲ್ಲರ ಖಾತೆಗೆ 15 ಲಕ್ಷ ರೂ. ನೀಡುತ್ತದೆ ಎಂದು ಹೇಳಿಕೆ ನೀಡಿ ಮೋಸ ಮಾಡಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ತಿಳಿಸಿತ್ತು. ಇದನ್ನು ಮಾಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವನ್ನು ಮಾಡುತ್ತಿದೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜಿವಾಲ್‌ ಗುಡುಗಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಶಾಸಕ ಅರ್ಷದ್ ರಿಜ್ವಾನ್ ಸೇರಿದಂತೆ ಪಕ್ಷದ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

ಡಿಕೆಶಿ ಕಿಡಿ

ಇದೇ ಸಂಬಂಧ ಮಾತನಾಡಿರುವ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಹ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದರು. ಪ್ರಧಾನಿ ಮೋದಿ ನಮ್ಮ ತೆರಿಗೆ, ಬರ ಪರಿಹಾರದ ಹಣವನ್ನು ನೀಡದಿರುವ ಬಗ್ಗೆಯೂ ಹೇಳಿಕೆಯನ್ನು ನೀಡಬೇಕು. ಭದ್ರ ಯೋಜನೆಯಡಿ ಬಜೆಟ್‌ನಲ್ಲಿ ಮೀಸಲು ಇಡಬೇಕಾದ ಹಣವನ್ನು ಏಕೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸಿಎಂ ಗರಂ

ಕೇಂದ್ರದ ಬಿಜೆಪಿ ಸರ್ಕಾರ ತಾನು ನೀಡಿದ್ದ ಒಂದೇ ಒಂದು ಆಶ್ವಾಸನೆಯನ್ನು ಸಹ ಈಡೇರಿಸಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಪ್ರಧಾನಿ ಮೋದಿ 100 ದಿನದಲ್ಲಿ ಕಪ್ಪು ಹಣವನ್ನು ತರುವುದಾಗಿ ತಿಳಿಸಿದ್ದರು. ಆ ಹಣವನ್ನು ತಂದು ಎಲ್ಲರ ಖಾತೆಗೆ ಹಾಕಿದ್ದಾರಾ ಎಂದು ಪ್ರಶ್ನೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+