ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ವಿಚಾರಣೆಗೆ ಹಾಜರ್: ಬೆಂಗಳೂರಿನ ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜೂ. 13: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ವತಿಯಿಂದ ಶಾಂತಿನಗರದಲ್ಲಿರುವ ಇಡಿ (ಜಾರಿ ನಿರ್ದೇಶನಾಲಯ) ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

Recommended Video

ED ತೆಕ್ಕೆಯಲ್ಲಿ ರಾಹುಲ್ ಗಾಂಧಿ! | *Politics | OneIndia Kannada

ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ರಾಹುಲ್‌ಗಾಂಧಿ ಎಐಸಿಸಿ ಕಚೇರಿಯಿಂದ ಸುಮಾರು 7 ಕಿ.ಮೀ. ಪಾದಯಾತ್ರೆ ನಡೆಸಿ ಇಡಿ ಕಚೇರಿ ತಲುಪಿದರು. ದೆಹಲಿಯಲ್ಲಿ ಇದು ಬೃಹತ್ ಪ್ರತಿಭಟನೆಯ ರೂಪ ಪಡೆದಿದೆ. ಈ ಹಿನ್ನೆಲಯಲ್ಲಿ ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ಎಐಸಿಸಿ ಚಿಂತನಾ ಶಿಬಿರ; ಆರ್ಥಿಕ ವಿಚಾರ ಮಂಡಿಸಿದ ಸಿದ್ದರಾಮಯ್ಯರಾಜಸ್ಥಾನದಲ್ಲಿ ಎಐಸಿಸಿ ಚಿಂತನಾ ಶಿಬಿರ; ಆರ್ಥಿಕ ವಿಚಾರ ಮಂಡಿಸಿದ ಸಿದ್ದರಾಮಯ್ಯ

ಬೆಂಗಳೂರಿನ ಇಡಿ ಕಚೇರಿ ಮುಂದೆ ನಡೆಸಿದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

Congress protests in front of ED office in Bangalore

ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದರ ಹಿಂದೆ ದ್ವೇಷದ ರಾಜಕಾರಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಖಂಡಿಸಲಾಯಿತು.

ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು. ಶಾಂತಿನಗರ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್ ಸುತ್ತಮುತ್ತಲಿನ ಏರಿಯಾಗಳಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಲವು ಕಾರ್ಯಕರ್ತರು ಇಡಿ ಕಚೇರಿಯೊಳಗೆ ನುಗ್ಗಲು ಪ್ರಯತ್ನ ಮಾಡಿದರು. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪ್ರತಿಭಟನೆ ಹಿನ್ನೆಲೆಯಲ್ಲಿ

Congress protests in front of ED office in Bangalore

"ಕೇದ್ರ ಸರ್ಕಾರ ಪ್ರತಿ ಪಕ್ಷಗಳನ್ನು ಹಣಿಯುವ ಕೆಲಸ ಮಾಡುತ್ತಿದೆ. ಇದರ ಭಾಗವಿಯೇ ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ನಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ. ಪ್ರತಿಭಟನೆ ಮುಂದುವರಿಸುತ್ತೇವೆ," ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಆರ್ಷದ್ ಹೇಳಿದರು.

English summary
KPCC had protest in front of the ED (Enforcement Directorate) office in Shantinagar condemning the issuance of a notice to AICC chairperson Sonia Gandhi and Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X