ಐಟಿ ದಾಳಿ ರಾಜ್ಯಸಭೆ ಚುನಾವಣೆ ರಾಜಕೀಯ : ಅಹಮದ್ ಪಟೇಲ್
ಬೆಂಗಳೂರು, ಆ.2 : 'ಒಂದೇ ಒಂದು ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಬಿಜೆಪಿ ಹಿಂದೆದೂ ಕಂಡರಿಯದ ರಾಜಕೀಯ ಮಾಡುತ್ತಿದೆ ಎಂದು' ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಪ್ರತಿಕ್ರಿಯೆ ನೀಡಿದ್ದಾರೆ.
ಗುಜರಾತ್ ಕಾಂಗ್ರೆಸ್ ಶಾಸಕರು ನೆಲೆಸಿರುವ ಬೆಂಗಳೂರು ಹೊರವಲಯದ ಈಗಲ್ ಟನ್ ಗಾಲ್ಫ್ ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆಯೂ ದಾಳಿ ಮಾಡಲಾಗಿದೆ.

'ಬಿಜೆಪಿ ಒಂದೇ ಒಂದು ರಾಜ್ಯಸಭೆ ಸ್ಥಾನವನ್ನು ಗೆಲ್ಲಲು ಹಿಂದೆ ಕಂಡರಿಯದ ರೀತಿಯ ರಾಜಕೀಯ ಮಾಡುತ್ತಿದೆ' ಎಂದು ಅಹಮದ್ ಪಟೇಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ ಮತ್ತು ಟ್ವಿಟ್ ಮಾಡಿದ್ದಾರೆ.
BJP is on an unprecedented witch-hunt just to win one Rajya Sabha seat
— Ahmed Patel (@ahmedpatel) August 2, 2017
ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ.
ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಕಪುರ ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆಯೂ ಐಟಿ ದಾಳಿ ನಡೆಸಲಾಗಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
After using the state machinery and every other agency,these I-T raids show their utter desperation & frustration
— Ahmed Patel (@ahmedpatel) August 2, 2017












Click it and Unblock the Notifications