ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧ; ಸಿದ್ದರಾಮಯ್ಯ
ಬೆಂಗಳೂರು, ಜುಲೈ 20: "ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ" ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ. "ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಾಧ್ಯತೆ ಇಲ್ಲ" ಎಂದು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತು ಆಡಳಿತಾರೂಢ ಬಿಜೆಪಿಯಲ್ಲಿ ಉಂಟಾಗಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, "ಭ್ರಷ್ಟ ಮುಖ್ಯಮಂತ್ರಿ ಹೊರಗೆ ಹೋಗುವುದು ಒಳ್ಳೆಯ ವಿಚಾರ" ಎಂದಿದ್ದಾರೆ.

ಬಿಜೆಪಿಗೆ ತನ್ನ ಆಂತರಿಕ ಬಿಕ್ಕಟ್ಟನ್ನು ನಿಭಾಯಿಸಲು ಅಸಾಧ್ಯವಾದಲ್ಲಿ ಕಾಂಗ್ರೆಸ್ ಸಿದ್ಧವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ" ಎಂದಿದ್ದಾರೆ.
"ಯಡಿಯೂರಪ್ಪ ನಿರ್ಗಮಿಸಿದರೆ ಇನ್ನೊಬ್ಬ ವ್ಯಕ್ತಿಯನ್ನು ಸಿಎಂ ಮಾಡಲಾಗುವ ಕಾರಣಕ್ಕೆ ಶೀಘ್ರ ಚುನಾವಣೆ ನಡೆಯುತ್ತದೆ ಎಂದು ನನಗನಿಸುವುದಿಲ್ಲ. ಆದರೆ ಯಾವಾಗ ಚುನಾವಣೆಯಾದರೂ ನಾವು ಅಣಿಯಾಗಿದ್ದೇವೆ" ಎಂದು ಪುನರುಚ್ಚರಿಸಿದರು.
"ಸಿಎಂ ಬದಲಾವಣೆ ಕುರಿತು ಮುಂಚಿನಿಂದಲೂ ನಾನು ಹೇಳುತ್ತಲೇ ಬಂದಿದ್ದೇನೆ. ಯಾರೂ ಅದನ್ನು ನಂಬಲಿಲ್ಲ. ನನಗೆ ತುಂಬಾ ಹಿಂದೆಯೇ ಈ ಮಾಹಿತಿ ದೊರೆತಿದೆ. ಯಡಿಯೂರಪ್ಪ ಅವರ ಸರ್ಕಾರ ಅತಿ ಭ್ರಷ್ಟ ಸರ್ಕಾರ" ಎಂದು ಆರೋಪಿಸಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ.
Recommended Video
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications