Lok Sabha Election 2024: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಕಾರಣ-ಎಚ್‌ಡಿಕೆ

ಬೆಂಗಳೂರು ಮಾರ್ಚ್ 19: ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಬಿರುಕು ಕಾಣಿಸಿಕೊಂಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಸಮಾಧಾನದ ಹೊಗೆಯಾಡತೊಡಗಿದೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಒಪ್ಪಂದದಂತೆ ನಡೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮೈತ್ರಿ ಬಗ್ಗೆ ಅಪಸ್ವರ ನುಡಿದಿದ್ದಾರೆ. ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮೂರು ಕ್ಷೇತ್ರ (ಮಂಡ್ಯ, ಹಾಸನ, ಕೋಲಾರ) ನಾವು ಬಿಜೆಪಿಗೆ ಕೇಳಿದ್ದೆವು ಆದರೆ ಅದನ್ನು ನೀಡುವ ಬಗ್ಗೆ ಅವರು ಇನ್ನೂ ನಿಖರತೆ ನೀಡಿಲ್ಲ. ಈ ಕ್ಷಣದವರೆಗೂ ಅವರು ಅದರ ಬಗ್ಗೆ ನಮ್ಮೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ. ಬಿಜೆಪಿ ಹೈಕಮಾಂಡ್ ನಮ್ಮೊಂದಿಗೆ ಗೌರವಯುತವಾಗಿ ನೋಡಿಕೊಳ್ಳಬೇಕು ಎಂದಿದ್ದಾರೆ.

Congress reason for alliance with BJP - HD Kumaraswamy

ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವರು ವಾಗ್ದಾಳಿ ಮಾಡಿದರು. ನಾನು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಕಾರಣ. ಅವರನ್ನು (Congress) ಜನ ಕೈ ಹಿಡಿಯುವುದಿಲ್ಲ ಎಂದು ಕಳೆದ ಚುನಾವಣೆಯಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಆದರೆ ಅವರು ನಮ್ಮನ್ನು ಗೌರವಯುತವಾಗಿ ನೋಡಿಕೊಳ್ಳಲಿಲ್ಲ. ಈಗ ನಮ್ಮನ್ನು ಕರೆಯುತ್ತಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿಯು ನಮ್ಮನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. 'ಗೌರವಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸಬಾರದು. ಇದರಿಂದ ಮುಂದೆಪೆಟ್ಟುಬಿದ್ದರೆ ಅದರ ಸಾಧಕ-ಭಾಧಕಗಳಿಗೆ ಬಿಜೆಪಿಯೇ ಜವಬ್ದಾರಿಯಾಗಲಿದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ಧಾಟಿಯಲ್ಲಿ ತೀಕ್ಷ್ಣವಾಗಿ ಹೇಳಿದ್ದಾರೆ.

ರಾಜ್ಯದ ಸುಮಾರು 18 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ನಮ್ಮ ಪಕ್ಷದಿಂದ ಅನುಕೂಲ ಆಗಲಿದೆ. ಈ ವಿಷಯಯವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಮ್ಮ ಶಕ್ತಿಯನ್ನು ಧಾರೆ ಎರೆದರೆ ಬಿಜೆಪಿಗೆ ಒಳ್ಳೆಯ ಫಲಿತಾಂಶ ಬರುತ್ತದೆ. ಏಕೆಂದರೆ ಕರ್ನಾಟಕದ ರಾಜಕೀಯ ಬೇರೆ, ದೇಶದ ಇತರೆ ರಾಜ್ಯಗಳ ರಾಜಕೀಯವೇ ಬೇರೆ, ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ನನ್ನ ಮೇಲೆ ಒತ್ತಡ ಹಾಕಿದ್ದಾರೆ ಎಂದರು.

ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಮದು ತಿಳಿಸಿದರು. ಇವತ್ತಿನ ಸಭೆಯಲ್ಲಿ ಚುನಾವಣೆ ಉಸ್ತುವಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು ಭಾಗವಹಿಸಿದ್ದರು. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ನಮ್ಮ ಪ್ರಮುಖರು ಅಭಿಪ್ರಾಯ ಹೇಳಿದ್ದಾರೆ. ಇದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಹಕಾರ ಇರುವ ರೀತಿಯಲ್ಲೇ ಬಿಜೆಪಿಯಿಂದಲೂ ಸಹರಾಕ ಇರಬೇಕು ಎಂದರು.

ಕೋಲಾರ ಕ್ಷೇತ್ರವನ್ನು ಬಿಜೆಪಿಯವರು ಬಿಟ್ಟುಕೊಡಲಿ ಅಥವಾ ಕೊಡದಿರಲಿ. ಅಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಿತ್ರ ಪಕ್ಷ ಜೆಡಿಎಸ್‌ ತೀರ್ಮಾನಿಸಿದೆ. ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಸ್ಪಷ್ಟತೆ ಕೊಟ್ಟಿರುವ ಬಿಜೆಪಿ ವರಿಷ್ಠರು ಇದುವರೆಗೆ ಕೋಲಾರದ ಯಾವುದೇ ಸ್ಪಷ್ಟತೆ ನೀಡಿಲ್ಲ. ಈ ವಿಷಯದಲ್ಲಿ ಬೇಸರಗೊಂಡಿರುವ ಎಚ್‌.ಡಿ ಕುಮಾರಸ್ವಾಮಿ, 'ನಾವು ಆರೇಳು ಕ್ಷೇತ್ರ ಕೇಳಿಲ್ಲ. ಕೇಳಿರುವುದು ಮೂರ್ನಾಲ್ಕು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಎಂದು ತೀಕ್ಷ್ಣವಾಗಿ ಕೇಳಿದ್ದಾರೆ.

ಬಿಜೆಪಿ ಬಗ್ಗೆ ಅಸಮಾಧಾನಕ್ಕೆ ಕಾರಣಗಳಿವು....

ಬಿಜೆಪಿ ಮೈತ್ರಿ ಧರ್ಮ ಪಾಲಿಸದೇ ಜೆಡಿಎಸ್ ಅನ್ನು ಕಡೆಗಣಿಸುತ್ತಿದೆ.

ಇಪ್ಪತ್ತು ಕ್ಷೇಥ್ರಕ್ಕೆ ಅಭ್ಯರ್ಥಿ ಘೋಷಣೆಗೆ ಮುನ್ನ ಜೆಡಿಎಸ್‌ ಜೊತೆ ಮಾತಾಡಿಲ್ಲ.

ಚುನಾವಣಾ ಪ್ರಚಾರಕ್ಕೆ ಜೆಡಿಎಸ್‌ ನಾಯಕರನ್ನು ಆಹ್ವಾನಿಸುತ್ತಿಲ್ಲ

3-4% ಜೆಡಿಎಸ್‌ನ ಮತಗಳು ಸಿಕ್ಕರೆ 18 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುತ್ತಾರೆ

ಕಲಬುರಗಿ ಶಿವಮೊಗ್ಗದ ಮೋದಿ ಸಮಾವೇಶಕ್ಕೆ ದೇವೇಗೌಡ, ಕುಮಾರಸ್ವಾಮಿ ಅವರನ್ನೂ ಕರೆದಿಲ್ಲ

ಜೆಡಿಎಸ್‌ ಹೇಗಿದ್ದರೂ ಗೆಲ್ಲುತ್ತಿದ್ದ 2-3 ಕ್ಷೇತ್ರಗಳನ್ನು ಪಡೆಯುವುದಕ್ಕೆ ಬಿಜೆಪಿಗೆ ತಲೆಬಾಗಬೇಕೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+