Karnataka MLC Elections: ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಯಾರಿಗೆ ಅದೃಷ್ಟ?

ಬೆಂಗಳೂರು: ಕಾಂಗ್ರೆಸ್​ನಲ್ಲಿ ವಿಧಾನ ಪರಿಷತ್ ಚುನಾವಣೆ ಟಿಕೆಟ್​​ಗಾಗಿ ಪೈಪೋಟಿ ಜೋರಾಗಿದ್ದು, ವಿಧಾನ ಪರಿಷತ್‌ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯ ಕಾಂಗ್ರೆಸ್‌ ಹೈಕಮಾಂಡ್‌ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಇದೀಗ 2026ರ ನವೆಂಬರ್‌ನಲ್ಲಿ ನಡೆಯುವ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ.

ರಾಜ್ಯ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ 2026ರಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ಭರ್ಜರಿ ತಯಾರಿ ನಡೆಸಿದ್ದು, ಹೊಸ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಚುನಾವಣೆಗೆ ಸಿದ್ದ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, ಹಲವು ತಿಂಗಳು ಮುಂಚಿತವಾಗಿಯೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದು (ಮಂಗಳವಾರ ಡಿ.30) ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನಾಲ್ಕು ಹೆಸರುಗಳಿಗೆ ಅಂತಿಮ ಮುದ್ರೆ ಒತ್ತಿದ್ದಾರೆ.

Congress releases list of candidates for Karnataka Legislative Council elections

2023 ರ ವಿಧಾನಸಭೆಯಲ್ಲಿ ಪ್ರಚಂಡ ಬಹುಮತ ಹೊಂದಿರುವ ಕಾಂಗ್ರೆಸ್‌ ಸರ್ಕಾರವು ನವೆಂಬರ್‌ 2026 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿಯೂ ಪೂರ್ಣ ಹಿಡಿತ ಸಾಧಿಸುವ ಗುರಿಯಿದೆ. ಈ ನಿಟ್ಟಿನಲ್ಲಿ ಗೆಲ್ಲುವ ಕುದುರೆಗಳನ್ನು ಅಳೆದು ತೂಗಿ ಕಾಂಗ್ರೆಸ್‌ ಹೈಕಮಾಂಡ್‌ ಆಯ್ಕೆ ಮಾಡಲಾಗಿದೆ. ಮೇಲ್ಮನೆಯಲ್ಲಿ ಸ್ಪಷ್ಟ ಬಹುಮತ ಸಾಧಿಸುವ ಗುರಿಯೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಶ್ಚಿಮ ಪದವೀಧರ, ಆಗ್ನೇಯ ಪದವೀಧರ, ಈಶಾನ್ಯ ಶಿಕ್ಷಕರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್‌, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಮೇಲ್ಮನೆಯಲ್ಲಿ ಸ್ಪಷ್ಟ ಬಹುಮತ ಸಾಧಿಸುವ ಗುರಿಯೊಂದಿಗೆ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ್ದು, ಪ್ರಸ್ತುತ ಪರಿಷತ್‌ನಲ್ಲಿ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿದ್ದರೂ, ಮಸೂದೆಗಳನ್ನು ಸುಲಲಿತವಾಗಿ ಪಾಸ್‌ ಮಾಡಲು ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ತವಕದಲ್ಲಿದೆ ಕಾಂಗ್ರೆಸ್‌ ಇದೆ.

ಪ್ರಸ್ತುತ 75 ಸದಸ್ಯ ಬಲದ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ 37 ಸ್ಥಾನಗಳನ್ನು ಹೊಂದುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರಸ್ತುತ ಕಾಂಗ್ರೆಸ್‌ 37, ಬಿಜೆಪಿ 29, ಜೆಡಿಎಸ್‌ 7, ಪಕ್ಷೇತರ 1 ಹಾಗೂ ಸಭಾಪತಿ ಒಬ್ಬರಿದ್ದಾರೆ. ಸದ್ಯ ಯಾವುದೇ ಮಸೂದೆಗೆ ಅನುಮೋದನೆ ಪಡೆಯಬೇಕಿದ್ದರೂ ಕಾಂಗ್ರೆಸ್‌ಗೆ ಪಕ್ಷೇತರ ಸದಸ್ಯರ ಬೆಂಬಲ ಅತ್ಯಗತ್ಯ. ಯಾವುದೇ ಮಸೂದೆ ಅಥವಾ ಕಾಯ್ದೆಗಳಿಗೆ ತಡೆರಹಿತವಾಗಿ ಅನುಮೋದನೆ ಪಡೆಯಲು ಪಕ್ಷಕ್ಕೆ ಇನ್ನಷ್ಟು ಸಂಖ್ಯಾಬಲದ ಅಗತ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ನಾಲ್ಕೂ ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್‌ ಸದಸ್ಯರ ಸಂಖ್ಯೆ 40ಕ್ಕೆ ಏರಿಕೆಯಾಗಲಿದ್ದು, ಮೇಲ್ಮನೆಯಲ್ಲಿ ಸ್ಪಷ್ಟ ಬಹುಮತ ಸಿಗಲಿದೆ.

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಹೈಕಮಾಂಡ್‌ ನಾಯಕರಿಗೆ ಎಂಎಲ್‌ಸಿ ಪುಟ್ಟಣ್ಣ ಧನ್ಯವಾದ ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನನ್ನ ಮೇಲೆ ವಿಶ್ವಾಸವಿಟ್ಟು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದಕ್ಕಾಗಿ ಮಾನ್ಯ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕತ್ವ ಹಾಗೂ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+