ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಯಾರಿಗೆ ಅದೃಷ್ಟ?

ಬೆಂಗಳೂರು, ಜೂನ್‌ 02: ಕಾಂಗ್ರೆಸ್​ನಲ್ಲಿ ವಿಧಾನ ಪರಿಷತ್ ಚುನಾವಣೆ ಟಿಕೆಟ್​​ಗಾಗಿ ಪೈಪೋಟಿ ಜೋರಾಗಿದೆ. ಪರಿಷತ್ ಪರಿಷತ್‌ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯ ಕಾಂಗ್ರೆಸ್‌ ಹೈಕಮಾಂಡ್‌ ಗೆ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿತ್ತು. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚಿಸಿದ್ದು ಇಂದು(ಜೂನ್2)‌ ರಂದು ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಗಳನ್ನ ಘೋಷಿಸಿದೆ.

ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಲಾಬಿ ಹೆಚ್ಚಾಗಿದ್ದು, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.

Congress Releases List Of Candidates For MLC Elections Karnataka

ಲೋಕಸಭಾ ಚುನಾವಣಾ ಬೆನ್ನಲ್ಲೆ ಬಿಜೆಪಿ ಮೂರು ಸ್ಥಾನಗಳ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಸಂಖ್ಯಾಬಲದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್​ಗೆ ಸಿಗಲಿದ್ದು, 7 ಸ್ಥಾನಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಏಳು ಸ್ಥಾನಗಳಿಗೆ 300 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಅಳೆದು ತೂಗಿ 7 ಜನರಿಗೆ ಮಣೆ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನೂ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.

ಸಮುದಾಯದ ಆಧಾರದ ಮೇಲೆ ಹೈಕಮಾಂಡ್‌ ಟಿಕೆಟ್!

ಕಾಂಗ್ರೆಸ್‌ ಎಂಟು ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ಟಿಕೆಟ್‌ ಘೋಷಿಸಿದ್ದಯ, ಸಮುದಾಯಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಿಂದರಾಜ್ ಅವರನ್ನೇ ಮತ್ತೊಂದು ಅವಧಿಗೆ ಮುಂದುವರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಹಾಗೂಒಕ್ಕಲಿಗ ಸಮುದಾಯದವರ ಗೋವಿಂದ ರಾಜ್‌ ಅವರಿಗೆ ಅವಕಾಶವನ್ನ ನೀಡಿದೆ. ಒಬಿಸಿ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಸಮುದಾಯದಿಂದ ವಸಂತಕುಮಾರ್, ರೆಡ್ಡಿ ಸಮುದಾಯದಿಂದ ಹಾಲಿ ಸಚಿವ ಎನ್​ಎಸ್ ಬೋಸರಾಜು, ಜಗದೇವ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+