Operation Sindoor: ಆಪರೇಷನ್ ಸಿಂಧೂರ್; ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್: ಜನರ ಆಕ್ರೋಶದ ಬಳಿಕ ಟ್ವೀಟ್‌ ಡಿಲೀಟ್‌

ಬೆಂಗಳೂರು, ಮೇ 07: ಏಪ್ರಿಲ್‌ 22 ರಂದು ಪಹಲ್ಗಾಮ್‌ ನಲ್ಲಿ 26 ಮಂದಿ ಭಾರತೀಯರ ಮೇಲೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪಾಕ್ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಪಾಕ್‌ ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತೀಯರ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ.

ಪಾಕ್‌ ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸಿದ್ದು, ಭಾರತ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್ ಅನ್ನು ಜನರು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದಾರೆ. ದೇಶವೇ ಸಂಭ್ರಮಿಸುವ ಹೊತ್ತಲಿ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಗೆ ತೀವ್ರ ಆಕ್ರೋಶವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ತನ್ನ ಟ್ವೀಟ್ನ್ನು ಡಿಲೀಟ್ ಮಾಡಿದೆ.

Congress Removes Tweet on peace after gets a public outcry amidst Operation Sindoor

ಆಪರೇಷನ್​ ಸಿಂಧೂರ್ ಮೂಲಕ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕೆ ರಾಜಕೀಯ ನಾಯಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್​ 'ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ' ಎಂದು ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಕಾಂಗ್ರೆಸ್‌ ನ ಈ ಟ್ವೀಟ್‌ ನಿಂದಾಗಿ ಜನರ ತೀವ್ರ ಆಕ್ರೋಶವನ್ನ ವ್ಯಕ್ತಪಡಿಸಿದ್ದು, ಕರ್ನಾಟಕ ಕಾಂಗ್ರೆಸ್‌ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿದೆ.

ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್‌ ಇನ್ನೊಂದು ಟ್ವೀಟ್‌ ಮಾಡಿದೆ.

ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಭಾರತೀಯ ವಾಯುಪಡೆ ಪಾಕ್​ ಮೇಲೆ ದಾಳಿ ಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೂಕ್ತ ಉತ್ತರ ನೀಡಿದೆ. ನಾವು ಸರ್ಕಾರದೊಂದಿಗೆ ಮತ್ತು ಭದ್ರತಾ ಪಡೆಗಯೊಂದಿಗೆ ನಿಲ್ಲುತ್ತೇವೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್ ಮಾಡಿದೆ. ಇತ್ತ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಪಾಕ್​ನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನೂ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ?
ಅಪರೇಷನ್ ಸಿಂಧೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+