ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಐಸಿಸಿ ಪುನಾರಚನೆ: ಖಾಯಂ ಆಹ್ವಾನಿತರಾದ ಕೆ.ಎಚ್. ಮುನಿಯಪ್ಪ!

|
Google Oneindia Kannada News

ಬೆಂಗಳೂರು, ಸೆ. 12: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಎಐಸಿಸಿ ಸಿಡಬ್ಲ್ಯೂಸಿ ಖಾಯಂ ಆಹ್ವಾನಿತರನ್ನಾಗಿ ಮುಂದುವರೆಸಲಾಗಿದೆ. ಉಪ ಚುನಾವಣೆಯ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಕೊಟ್ಟಿದ್ದರು. ಆಗ ಮಾಜಿ ಸಚಿವ ಎಚ್.ಕೆ. ಪಾಟೀಲ್, ಡಿಕೆಶಿ ಅವರೊಂದಿಗೆ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರು ಕೂಡ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಭಾರಿ ಲಾಬಿ ನಡೆಸಿದ್ದರು.

ಸತತವಾಗಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗುತ್ತಲೆ ಬಂದಿರುವ ಕೆ.ಎಚ್. ಮುನಿಯಪ್ಪ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನ್ನುಂಡಿದ್ದಾರೆ. ಸತತವಾಗಿ ಏಳು ಬಾರಿ ಸಂಸದರಾಗಿ ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರೂ ಪೂರ್ಣ ಪ್ರಮಾಣದ ಮಂತ್ರಿ ಪದವಿ ಜವಾಬ್ದಾರಿಯನ್ನು ಅವರಿಗೆ ಹೈಕಮಾಂಡ್ ಕೊಟ್ಟಿರಲಿಲ್ಲ.

ಎಐಸಿಸಿ ಪುನಾರಚನೆ: ಮಲ್ಲಿಕಾರ್ಜುನ್ ಖರ್ಗೆರಿಗೆ ನಿಜವಾಗಿಯೂ ಹಿನ್ನಡೆ ಆಯ್ತಾ? ಎಐಸಿಸಿ ಪುನಾರಚನೆ: ಮಲ್ಲಿಕಾರ್ಜುನ್ ಖರ್ಗೆರಿಗೆ ನಿಜವಾಗಿಯೂ ಹಿನ್ನಡೆ ಆಯ್ತಾ?

ಪ್ರತಿ ಬಾರಿ ಮಂತ್ರಿಯಾದಾಗಲೂ ಕೇಂದ್ರ ರಾಜ್ಯ ಖಾತೆ ಸಚಿವ ಸ್ಥಾನಕ್ಕೆ ಅವರು ತೃಪ್ತಿ ಪಟ್ಟುಕೊಳ್ಳುವಂತಾಗಿತ್ತು. ಜೊತೆಗೆ ಮುನಿಯಪ್ಪ ಅವರು ಕೋಲಾರ ಭಾಗದ ಪರಿಶಿಷ್ಟ ಸಮುದಾಯದ ಪ್ರಭಾವಿ ನಾಯಕರೂ ಹೌದು. ಹೀಗಾಗಿ ಪಕ್ಷ ಸಂಘಟನೆಯಲ್ಲಿ ಅವರನ್ನು ತೊಡಗಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ಬಾರಿಯೂ ಅವರನ್ನು ಸಿಡಬ್ಲ್ಯೂಸಿಯ ಖಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪರಿಶಿಷ್ಟ ಸಮುದಾಯಕ್ಕೆ ಮನ್ನಣೆಯನ್ನೂ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿದೆ.

Congress Reshuffle:k H Muniyappa Get New Responsibilities As Permanent Invitee Of AICC

Recommended Video

HD kumaraswamy : ನಾವು ಬೇರೆಯವರ ತರ ಕದ್ದು ಮುಚ್ಚಿ ಕೊಲಂಬೊ ಹೋಗಿರ್ಲಿಲ್ಲ | Oneindia Kannada

ಗಾಂಧಿ ಕುಟುಂಬದ ಪರಮ ನಿಷ್ಠರಲ್ಲಿ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೂಡ ಒಬ್ಬರು. ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಗಾಂಧಿ ಕುಟುಂಬದಿಂದ ಮಾತ್ರ ಕಾಂಗ್ರೆಸ್ ಪಕ್ಷ ಉಳಿಯುವುದು ಸಾಧ್ಯ ಎಂದು ಪ್ರತಿಪಾದಿಸುವವರು. ಹೀಗಾಗಿ ಹೈಕಮಾಂಡ್ ಕೆ.ಎಚ್. ಮುನಿಯಪ್ಪ ಅವರ 'ಕೈ' ಹಿಡಿದಿದೆ.

English summary
Former Union Minister K.H. Muniyappa continues to be a permanent invitee to the AICC CWC. Read more here,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X