ಪ್ರತಾಪ್ ಸಿಂಹ ಅವರೇ ಚಿಂತಿಸಬೇಡಿ! ಬಿಜೆಪಿ ಅಕ್ರಮಗಳನ್ನು ತನಿಖೆ ಮಾಡಿಸುತ್ತೇವೆ!
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಹಗ್ಗ ಜಗ್ಗಾಟ ಜೋರಾಗಿದೆ. ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಮತ್ತು ಸಿ.ಟಿ. ರವಿ ಆರೋಪ ಮಾಡಿದ ಬಳಿಕ ರಾಜಕಾರಣ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್‌ನವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಸಿದ್ದರು, ಈಗ ತನಿಖೆ ಮಾಡಿಸಿ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ಕೊಡಿಸಲಿ, ಇದರಿಂದ ಬಿಜೆಪಿ ಸ್ವಚ್ಛವಾಗುತ್ತದೆ ಎಂದು ಈ ಮೊದಲು ಹೇಳಿಕೆ ನೀಡಿದ್ದರು.

ಮಂಗಳವಾರ ಮಾತನಾಡಿದ್ದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ ನಾಯಕರಿಗೆ ತನಿಖೆ ಮಾಡುವುದಾಗಿ ಹೆದರಿಸುತ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಿಜೆಪಿ ನಾಯಕರ ಅಕ್ರಮಗಳ ತನಿಖೆ ಮಾಡುವುದಾಗಿ ಹೆದರಿಸುತ್ತಾರೆ, ಆದರೆ ತನಿಖೆ ಮಾಡುವುದಿಲ್ಲ, ಇಬ್ಬರದ್ದೂ ಹೊಂದಾಣಿಕೆ ರಾಜಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
,@mepratap ಅವರೇ,
— Karnataka Congress (@INCKarnataka) June 14, 2023
ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ.
ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ.
ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ!
ತನಿಖೆಗೆ ತಾವೂ ಕೂಡ ಸಾಕ್ಷಿ ನೀಡಬಹುದು, ತಮ್ಮ ನಾಯಕರ ಲೂಟಿ ಬಗ್ಗೆ ನಿಮಗೆ ಹೆಚ್ಚು…
ಬಿಜೆಪಿ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ
ಪ್ರತಾಪ್ ಸಿಂಹ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಬಿಜೆಪಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳಿದೆ. "ಪ್ರತಾಪ್ ಸಿಂಹ ಅವರೇ, ಚಿಂತಿಸಬೇಡಿ, ಬಿಜೆಪಿಯ ಎಲ್ಲಾ ಹಗರಣಗಳು, ಅಕ್ರಮಗಳು, ಲೂಟಿಗಳನ್ನು ತನಿಖೆಗೆ ವಹಿಸುತ್ತೇವೆ. ಮುಲಾಜು ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಯಾರೊಬ್ಬರ ಅಂಜಿಕೆಯೂ ನಮಗಿಲ್ಲ. ಬಿಜೆಪಿ ಮಾಡಿದ ಲೂಟಿಗಳನ್ನು ವಾಪಸ್ ಕಕ್ಕಿಸುತ್ತೇವೆ!" ಎಂದು ಹೇಳಿದೆ.
ತನಿಖೆಗೆ ತಾವೂ ಕೂಡ ಸಾಕ್ಷಿಗಳನ್ನು ನೀಡುವ ಮೂಲಕ ಸಹಾಯ ಮಾಡಬಹುದು, ನಿಮ್ಮ ನಾಯಕರ ಲೂಟಿಯ ಬಗ್ಗೆ ನಿಮಗೆ ಹೆಚ್ಚು ತಿಳಿದಿರುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರತಾಪ್ ಸಿಂಹ ಅವರ ಕಾಲೆಳದಿದೆ.
ಬಿಜೆಪಿ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್
ಇನ್ನು ಬಿಜೆಪಿ ಸರ್ಕಾರ ಇದ್ದಾಗ ಹಲವು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಅದರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ ಹಗರಣ, 40 ಪರ್ಸೆಂಟ್ ಕಮೀಷನ್ ಆರೋಪ, ಕೋವಿಡ್ ಸಮಯದಲ್ಲಿ ಅಕ್ರಮ ಆರೋಪ ಮುಖ್ಯವಾಗಿ ಕಾಂಗ್ರೆಸ್‌ನ ಅಸ್ತ್ರಗಳಾಗಿದ್ದವು.
ರಾಜ್ಯಾದ್ಯಂತ ಪ್ರತಿಭಟನೆ ಕೂಡ ಮಾಡಿದ್ದ ಕಾಂಗ್ರೆಸ್, ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಭ್ರಷ್ಟಾಚಾರ, ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿ ಹೇಳಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನುಡಿದಂತೆ ಬಿಜೆಪಿ ಅಕ್ರಮಗಳ ತನಿಖೆ ನಡೆಸಲಿ ಎನ್ನುವ ಕೂಗು ಕೇಳಿಬಂದಿದೆ.












Click it and Unblock the Notifications