ಲೋಕಸಮರಕ್ಕೆ ʼಕೈʼ ಪಡೆಯಿಂದ 20 ರ ಟಾರ್ಗೆಟ್‌ ! ಬಾಂಬೆ ಬಾಯ್ಸ್‌ ಗೆ ಗಾಳ?: ಕಾಂಗ್ರೆಸ್‌ ಗೆ ಮತ್ತೆ ಬರುವವರು ಯಾರ್ಯಾರು?

ಬೆಂಗಳೂರು, ಆಗಸ್ಟ್16: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರು ಕೈ ಪಡೆ, ಇದೀಗ 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರೀ 20 ಕ್ಕೂ ಹೆಚ್ಚು ಸ್ಥಾನವನ್ನ ಗೆಲ್ಲಲೇ ಬೇಕು ಎಂದು ಟಾರ್ಗೆಟ್‌ ಹಾಕಿಕೊಂಡಿರುವ ಕಾಂಗ್ರೆಸ್‌ ನಾಯಕರು ಆಪರೇಷನ್‌ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಹೌದು, ರಾಜ್ಯ ರಾಜಕಾರಣದಲ್ಲಿ ಶೀಘ್ರದಲ್ಲೇ ಮತ್ತೊಂದು ಸುತ್ತಿನ ರಾಜಕೀಯ ಸಮೀಕರಣ ಆರಂಭವಾಗುವ ಸೂಚನೆಗಳಿದ್ದು, ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬಿಟ್ಟು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಬಾಂಬ್‌ ಬಾಯ್ಸ್‌ ಗೆ ಇದೀಗ ಕಾಂಗ್ರೆಸ್‌ ಗೆ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ.

Congress Secret Strategy to Attract Dissatisfied BJPs MLAs to party For Upcoming Lok Sabha Election?

2024 ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ಹಲವು ಸುತ್ತಿನ ಮಾತುಕತೆಯನ್ನ ರಾಜ್ಯ ಕಾಂಗ್ರೆಸ್‌ ನಾಯಕರ ಜೊತೆಗೆ ಮಾತನಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಪಣ ತೊಟ್ಟಿದ್ದು, ಒಟ್ಟಾಗಿ ಹೋಗಲು ನಿರ್ಧಾರಿದ್ದಾರೆ ಎನ್ನಲಾಗಿದೆ.

ಇನ್ನೂ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನ ಹೊಂದಿರುವ ಕಾಂಗ್ರೆಸ್‌, ಇದೀಗ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಗಾಳ ಹಾಕಿದ್ದು, ಬಾಂಬೆ ಬಾಯ್ಸ್‌ ಗಳಲ್ಲಿ ಪ್ರಮುಖರನ್ನ ಕಾಂಗ್ರೆಸ್‌ ಸೇರ್ಪಡೆ ಮಾಡಿಕೊಳ್ಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಬಾಂಬೆ ಬಾಯ್ಸ್‌ ಪ್ರಮುಖರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಹೆಚ್ಚು ಸ್ಥಾನಗಳನ್ನ ಗೆಲ್ಲುವ ತಂತ್ರಗಾರಿಕೆಯನ್ನ ಕಾಂಗ್ರೆಸ್‌ ನಾಯಕರು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ತೆರಳಿ ಸಚಿವರಾಗಿದ್ದ ಬೆಂಗಳೂರು ಮೂಲದ ಇಬ್ಬರು ಶಾಸಕರು, ಜೆಡಿಎಸ್‌ನ ಒಬ್ಬರು ಶಾಸಕರು, ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಸೇರಿದ್ದ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಶಾಸಕರು ಕಾಂಗ್ರೆಸ್‌ ಸೇರುವ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಲೋಕಸಭಾ ಚುನಾವಣೆ ತಯಾರಿ ನಡೆಸುತ್ತಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಮತ್ತೆ ಕರೆತರುವ ಕುರಿತು ಮೊದಲ ಹಂತದಲ್ಲಿ ಶೀಘ್ರದಲ್ಲೇ ನಡೆಯಲಿದೆ ಎಂದು ತಿಳಿದು ಬಂದಿದ್ದು, ಬೆಂಗಳೂರಿನ ಒಬ್ಬ ಶಾಸಕರು ಬಿಜೆಪಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಇದಾದ ಬಳಿಕ ಲೋಕಸಭೆ ಚುನಾವಣೆ ವೇಳೆಗೆ ಉಳಿದ ನಾಲ್ಕೈದು ಶಾಸಕರು ಹಂತ ಹಂತವಾಗಿ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮೈತ್ರಿ ಸರ್ಕಾರದ ಪತನದ ಬಳಿಕ ರಚನೆಯಾದ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದಿದ್ದ ಕೆಲ ಶಾಸಕರು ಇದೀಗ ತಮ್ಮ ಕ್ಷೇತ್ರದ ಹಿತದೃಷ್ಟಿಯಿಂದ ಬಿಜೆಪಿ ತೊರೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದ್ದು, ಲೋಕಸಭಾ ಚುನಾವಣೆ ವೇಳೆಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿ ಮರು ಆಯ್ಕೆಯಾಗುವ ಲೆಕ್ಕಾಚಾರವನ್ನ ಈ ಶಾಸಕರು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನೂ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನ ಪಕ್ಷ ಕರೆತರುವ ನಿಟ್ಟಿನಲ್ಲಿ ಒಂದು ಸುತ್ತಿನ ಮಾತುಕತೆಯನ್ನ ಈಗಾಗಲೇ ನಡೆಸಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಸಹ ಅನ್ಯ ಪಕ್ಷದನಾಯಕರನ್ನ ಕರೆತರುವ ನಿಟ್ಟಿನಲ್ಲಿ ಗೀನ್‌ ಸಿಗ್ನಲ್‌ ನೀಡಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+