Lok Sabha Elections 2024: ಲೋಕಸಭಾ ಚುನಾವಣೆಯ ಲೆಕ್ಕಾ? ಸದ್ದಿಲ್ಲದೇ ನಡೆದಿದ್ಯಾ ‘ಆಪರೇಷನ್ ಹಸ್ತ’?
ಬೆಂಗಳೂರು,ಜುಲೈ 10: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ, ಬಿಜೆಪಿ ಪಾಳಯದಲ್ಲಿ ಸ್ವಪಕ್ಷದ ನಾಯಕರ ವಿರುದ್ದ ವಾಕ್ಸಮರ ಜೋರಾಗಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ.
ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷದ ಬದಲಾವಣೆ ಹಾಗೂ ವಿಪಕ್ಷ ನಾಯಕರ ಆಯ್ಕೆ ವಿಳಂಬವಾಗುತ್ತಿದ್ದು, ಪಕ್ಷ ಸಂಘಟನೆಯ ಮೇಲೆ ಪರಿಣಾಯ ಬೀರಲಿದೆ ಎಂದು ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ. ಇನ್ನೂ ವಿಧಾನಸಭಾ ಚುನಾವಣೆಯ ಗೆಲುವಿನಂತೆ ಲೋಕಸಭಾ ಚುನಾವಣೆಯಲ್ಲಿಯೂ ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ಪ್ಲಾನ್ ನಡೆಸಿದ್ದು, ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈ ಬಾರಿಯ ಲೋಕಸಮರಕ್ಕೆ 20 ರ ಟಾರ್ಗೆಟ್ ನ ರಾಜ್ಯ ನಾಯಕರಿಗೆ ನೀಡಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ರಚನೆಯ ವೇಳೆಯೂ ಜಾತಿವಾರು ಹಾಗೂ ಪ್ರಾದೇಶಿಕವಾರು ಸಚಿವ ಸ್ಥಾನವನ್ನ ನೀಡಿದ್ದಾರೆ.
ಇತ್ತ ಲೋಕಸಭಾ ಚುನಾವಣೆಯಲ್ಲಿ ಹಲವು ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ 2019 ರ ಚುನಾವಣೆಯಲ್ಲಿ ಕಳೆದುಕೊಂಡ ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನವನ್ನು ಗೆಲ್ಲುವ ಮಾಸ್ಟರ್ ಪ್ಲಾನ್ ಹಾಕಿಕೊಂಡು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮೂಲಕ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದೆ ಎನ್ನಲಾಗಿದೆ.
ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 13 ಜನ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿಲಿದೆ ಎನ್ನುವ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗಿದ್ದು, ಈ ಬಾರೀ ಆಪರೇಷನ್ ಹಸ್ತಕ್ಕೆ ಪ್ಲಾನ್ ನಡೆದಿದೆ ಎನ್ನಲಾಗಿದ್ದು, ಹಲವು ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಲು ಮುಂದಾಗಿದೆ ಎಂದು ಹೇಳಲಾಗಿದೆ.

ಈಗಾಗಲೇ ಮೂರು ವರ್ಷಗಳ ಆಡಳಿತ ನಡೆಸಿ ಹೀನಾಯವಾಗಿ ಸೋಲು ಅನುಭವಿಸಿರುವ ಬಿಜೆಪಿಯಲ್ಲಿ ಪ್ರಮುಖ ನಾಯಕರೇ ಸೋಲಿನ ವಿಚಾರವಾಗಿ ಸ್ವಪಕ್ಷದ ನಾಯಕರ ವಿರುದ್ದವಾಗಿ ಅಸಮಾಧಾನಹೊರ ಹಾಕಿದ್ದಾರೆ. ಇತ್ತ ಮಾಜಿ ಸಚಿವರಾದ ಮಾಧುಸ್ವಾಮಿಗೆ ಗಾಳ ಹಾಕಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಸಹ ಸ್ವಪಕ್ಷದ ನಾಯಕರ ವಿರುದ್ದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಅಸಮಾಧಾನಗೊಂಡಿದ್ದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನ ಸಂಪರ್ಕಿಸಿದ್ದು, ಕಾಂಗ್ರೆಸ್ ಗೆ ಹೋಗುತ್ತಾರಾ ಎನ್ನುವ ಚರ್ಚೆ ನಡೆದಿದೆ. ಇನ್ನೂ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಆಸೆಯನ್ನ ಬಹಿರಂಗಗೊಳಿಸಿರುವ ಎಂ ಪಿ ರೇಣುಕಾಚಾರ್ಯ ಅವರಿಗೆ ಬಿಜೆಪಿಯಿಂದ ಟಿಕೆ ಸಿಗುವುದು ಡೌಟ್ ಎನ್ನಲಾಗಿದ್ದು, ಹಲವು ಟಿಕೆಟ್ ಲೆಕ್ಕಾಚಾರಗಳು ನಡೆಯುತ್ತಿವೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರಡಿ ಸಂಗಣ್ಣಗೆ ಟಿಕೆಟ್ ನೀಡಲ್ಲ ಎನ್ನುವ ಚರ್ಚೆ ವಂದತಿ ಶುರುವಾಗಿದ್ದು, ಕರಡಿ ಸಂಗಣ್ಣ ಹಾಗೂ ಶಂಕರ್ ಪಾಟೀಲ್ ಮುನೇನಕೊಪ್ಪ ಗೆ ಕಾಂಗ್ರೆಸ್ ಗಾಳ ಹಾಕಲಿದೆ ಎನ್ನಲಾಗಿದ್ದು, ಮೂರು ಪಕ್ಷಗಳಿಂದಲೂ ಸಹ ಈಗಾಗಲೇ ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಮುಂದಾಗಿದೆ ಎಂದು ಹೇಳಲಾಗಿದೆ.












Click it and Unblock the Notifications