ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ತಿಗೆ ಬಿ.ಕೆ.ಹರಿಪ್ರಸಾದ್ ಆಯ್ಕೆಯ ಹಿಂದೆ ಏನಿದು ಸೋನಿಯಾ ಲೆಕ್ಕಾಚಾರ?

|
Google Oneindia Kannada News

ಸುದೀರ್ಘ ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದವರು, ಒಮ್ಮೆಲೇ ವಿಧಾನ ಪರಿಷತ್ತಿಗೆ ಆಯ್ಕೆಯಾಗುತ್ತಾರೆ ಎಂದರೆ, ಇದರ ಹಿಂದೆ ಕಾಂಗ್ರೆಸ್ ಹೈಕಮಾಂಡಿನ ಲೆಕ್ಕಾಚಾರ ಬೇರೆ ಏನಾದರೂ ಇರಬಹುದೇ? ಕರ್ನಾಟಕದಲ್ಲಿ ಇದೆ ಎನ್ನಲಾಗುತ್ತಿರುವ ಬಣ ರಾಜಕೀಯಕ್ಕೆ ಬಿಸಿ ಮುಟ್ಟಿಸಲು ಸೋನಿಯಾ ಇಂತಹ ನಿರ್ಧಾರಕ್ಕೆ ಬಂದರೇ?

Recommended Video

Solar Eclipse June 21 2020 : Sunday darshan timing changed in Kukke Subramanya | Oneindia Kannada

ದಶಕಗಳಿಂದಲೂ ಸೋನಿಯಾ ಗಾಂಧಿ ಆಪ್ತವಲಯದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ರಾಜಕೀಯಕ್ಕೆ ಕಳುಹಿಸಿ, ಹೊಸ ಸಂದೇಶವನ್ನು ರವಾನಿಸಿದೆ.

ಪರಿಷತ್ ಚುನಾವಣೆ ಅಭ್ಯರ್ಥಿ: ಕಾಂಗ್ರೆಸ್ ಪಡಶಾಲೆಯಲ್ಲಿ ಮತ್ತೆ 'ಘರ್ಜಿಸಿದ್ದು' ಇವರೇ? ಪರಿಷತ್ ಚುನಾವಣೆ ಅಭ್ಯರ್ಥಿ: ಕಾಂಗ್ರೆಸ್ ಪಡಶಾಲೆಯಲ್ಲಿ ಮತ್ತೆ 'ಘರ್ಜಿಸಿದ್ದು' ಇವರೇ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಕೆ.ಹರಿಪ್ರಸಾದ್, ಸುಮಾರು ಹದಿನೆಂಟು ವರ್ಷ ರಾಜ್ಯಸಭಾ ಸದಸ್ಯರಾಗಿದ್ದವರು. ಮೂಲ ಕಾಂಗ್ರೆಸ್ಸಿಗರಾಗಿರುವ ಹರಿಪ್ರಸಾದ್, ದಶಕಗಳ ಕಾಲದಿಂದಲೂ, ಹೈಕಮಾಂಡ್ ಆಪ್ತವಲಯದಲ್ಲಿ ಗುರುತಿಸಿಕೊಂಡವರು.

ಹಿಂದುಳಿದ ನಾಯಕರೂ ಮತ್ತು ತಮ್ಮದೇ ಆದ ಕಾರ್ಯಕರ್ತರು ಮತ್ತು ಅನುಯಾಯಿಗಳನ್ನು ಹೊಂದಿರುವ ಹರಿಪ್ರಸಾದ್ ಅವರ ಆಯ್ಕೆಯ ಹಿಂದೆ, ರಾಜ್ಯದ ಪ್ರಭಾವೀ ನಾಯಕರನ್ನು ಚೆಕ್ ಮೇಟ್ ಮಾಡುವ ಉದ್ದೇಶ, ಹೈಕಮಾಂಡ್ ಹೊಂದಿದೆಯೇ ಎನ್ನುವ ಚರ್ಚೆ ಆರಂಭವಾಗಿದೆ.

ವಿಧಾನ ಪರಿಷತ್ ಚುನಾವಣೆ: ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆವಿಧಾನ ಪರಿಷತ್ ಚುನಾವಣೆ: ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬಿ.ಕೆ.ಹರಿಪ್ರಸಾದ್, ನಜೀರ್ ಅಹಮದ್

ಬಿ.ಕೆ.ಹರಿಪ್ರಸಾದ್, ನಜೀರ್ ಅಹಮದ್

ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಆರಿಸಿರುವ ಇಬ್ಬರಲ್ಲಿ ಬಿ.ಕೆ.ಹರಿಪ್ರಸಾದ್ ನೇರವಾಗಿ ಹೈಕಮಾಂಡ್ ಆಯ್ಕೆಯಾದರೆ, ನಜೀರ್ ಅಹಮದ್ ಅವರು ಸಿದ್ದರಾಮಯ್ಯನವರ ಆಪ್ತರು. ಈ ಇಬ್ಬರ ಆಯ್ಕೆಯಲ್ಲಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಮನ್ನಣೆ ಸಿಕ್ಕಿಲ್ಲವೇ ಎನ್ನುವುದಕ್ಕಿಂತ, ಹರಿಪ್ರಸಾದ್ ಆಯ್ಕೆಯ ಹಿಂದಿನ ಲೆಕ್ಕಾಚಾರ ಏನು ಎನ್ನುವುದು ಪ್ರಾಮುಖ್ಯತೆ ಪಡೆದಿದೆ.

ಈಡಿಗ ಸಮುದಾಯದ ಬಿ.ಕೆ.ಹರಿಪ್ರಸಾದ್

ಈಡಿಗ ಸಮುದಾಯದ ಬಿ.ಕೆ.ಹರಿಪ್ರಸಾದ್

ಈಡಿಗ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರ ಆಯ್ಕೆ ಕರ್ನಾಟಕ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿರುವುದಂತೂ ಹೌದು. ರಾಜ್ಯದ ಮೂವತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಈಡಿಗ ಸಮುದಾಯ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎನ್ನುವುದು ಒಂದು ಲೆಕ್ಕಾಚಾರ.

ಕಾಂಗ್ರೆಸ್ ಪಾಲಿಗೆ ಮಾಸ್ ಲೀಡರ್ ಆಗಿರುವ ಸಿದ್ದರಾಮಯ್ಯ

ಕಾಂಗ್ರೆಸ್ ಪಾಲಿಗೆ ಮಾಸ್ ಲೀಡರ್ ಆಗಿರುವ ಸಿದ್ದರಾಮಯ್ಯ

ಇನ್ನೊಂದು ಲೆಕ್ಕಾಚಾರದ ಪ್ರಕಾರ, ಕರ್ನಾಟಕ ಕಾಂಗ್ರೆಸ್ ಪಾಲಿಗೆ ಮಾಸ್ ಲೀಡರ್ ಆಗಿರುವ ಸಿದ್ದರಾಮಯ್ಯನವರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗದ ನಾಯಕರೊಬ್ಬರನ್ನು ಮುನ್ನಲೆಗೆ ತರಲು ವಿಧಾನ ಪರಿಷತ್ ಚುನಾವಣೆಯ ಮೂಲಕ ವೇದಿಕೆಯನ್ನು ಕಲ್ಪಿಸಲಾಗುತ್ತಿದೆ ಎನ್ನುವ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

ಪರಿಷತ್ತಿಗೆ ಬಿ.ಕೆ.ಹರಿಪ್ರಸಾದ್ ಆಯ್ಕೆಯ ಹಿಂದೆ ಏನಿದು ಸೋನಿಯಾ ಲೆಕ್ಕಾಚಾರ?

ಪರಿಷತ್ತಿಗೆ ಬಿ.ಕೆ.ಹರಿಪ್ರಸಾದ್ ಆಯ್ಕೆಯ ಹಿಂದೆ ಏನಿದು ಸೋನಿಯಾ ಲೆಕ್ಕಾಚಾರ?

ಈ ಹಿಂದೆ, ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿರುವ ಅನುಭವವಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ಮುಂದಿನ ದಿನಗಳಲ್ಲಿ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಹೆಚ್ಚಿನ ಮಹತ್ವ ಸಿಗುವ ಸಾಧ್ಯತೆಯಿಲ್ಲದಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ.

English summary
Congress Selected BK Hariprasad For Legislative Council: What Is Sonia Gandhi Calculation,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X