ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಆಸ್ಪೋಟಿಸಿದ ಅಸಮಾಧಾನ

ಬೆಂಗಳೂರು, ಡಿಸೆಂಬರ್ 05: ಸಂಪುಟ ಸಭೆಯ ನಂತರ ಸಮನ್ವಯ ಸಭೆಗೆ ಮುನ್ನಾ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ಗೆ ಮೈತ್ರಿ ಧರ್ಮದಂತೆ ಸಿಗಬೇಕಾಗಿದ್ದ ಪ್ರಾಶಸ್ತ್ಯಗಳು ಸಿಗುತ್ತಿಲ್ಲ ಎಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Congress seniour leaders unhappy with JDS

ಸಭೆಯು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದರಲ್ಲಿ ಸಿದ್ದರಾಮಯ್ಯ, ಪರಮೇಶ್ವರ್, ಕೆ.ಸಿ.ವೇಣುಗೋಪಾಲ್, ಡಿಕೆ.ಶಿವಕುಮಾರ್, ಕೆ.ಎಚ್.ಮುನಿಯಪ್ಪ, ಡಿ.ಕೆ.ಶಿವಕುಮಾರ್, ಆರ್‌.ವಿ.ದೇಶಪಾಂಡೆ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಜೆಡಿಎಸ್‌ ಮುಖಂಡರು ತಾವು ಒಪ್ಪಿಕೊಂಡಂತೆ ಸಮಸ್ಯೆಗಳನ್ನು ಬಗೆಹರಿಸಿಲ್ಲ, ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸ್ವತಃ ಸಿದ್ದರಾಮಯ್ಯ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Congress seniour leaders unhappy with JDS

ವರ್ಗಾವಣೆ ಸೇರಿದಂತೆ ಇಲಾಖಾವಾರು ಅನುದಾನ, ಕ್ಷೇತ್ರಗಳ ಅನುದಾನಗಳಲ್ಲಿಯೂ ಪಕ್ಷಪಾತವಾಗುತ್ತಿದೆ ಎಂದು ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮನ್ವಯ ಸಮಿತಿಯ ನಿರ್ಣಯಗಳಿಗೆ ಬದ್ಧವಾಗಿ ಜೆಡಿಎಸ್ ನಡೆದುಕೊಳ್ಳುತ್ತಿಲ್ಲ ಎಂದು ಸಹ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+