ವಿಶ್ವಾಸಮತದ ಚರ್ಚೆ; ಮೈತ್ರಿ ಸರ್ಕಾರದ ಕಣ್ಣು ಸುಪ್ರೀಂ ತೀರ್ಪಿನ ಮೇಲೆ!

ಬೆಂಗಳೂರು, ಜುಲೈ 21 : ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲೆ ನಡೆಯುತ್ತಿರುವ ಚರ್ಚೆ ಸೋಮವಾರ ಅಂತಿಮ ಘಟ್ಟಕ್ಕೆ ತಲುಪುವ ನೀರಿಕ್ಷೆಇದೆ. ಮತ್ತೊಂದು ಕಡೆ ಮೈತ್ರಿ ಸರ್ಕಾರ ವಿಪ್ ಕುರಿತು ಸಲ್ಲಿಸಲಾಗಿರುವ ಅರ್ಜಿಯ ತೀರ್ಪಿನ ನಿರೀಕ್ಷೆಯಲ್ಲಿದೆ.

ಸೋಮವಾರ ವಿಶ್ವಾಸಮತದ ಚರ್ಚೆ ಪೂರ್ಣಗೊಳಿಸೋಣ ಎಂದು ಶುಕ್ರವಾರ ಕಲಾಪವನ್ನು ಮುಂದೂಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದೆ. ಆದರೆ, ಮೈತ್ರಿ ಸರ್ಕಾರ ಸುಪ್ರೀಂಕೋರ್ಟ್‌ನತ್ತ ಚಿತ್ತ ಹರಿಸಿದೆ.

ಶಾಸಕರಿಗೆ ವಿಪ್ ಜಾರಿಗೊಳಿಸುವ ವಿಚಾರದಲ್ಲಿ ಗೊಂದಲವಿದೆ. ಅದನ್ನು ಬಗೆಹರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಈ ಅರ್ಜಿಯ ತೀರ್ಪು ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

ಸುಪ್ರೀಂ ತೀರ್ಪು ಬರುವ ತನಕ ಕಲಾಪವನ್ನು ಮುಂದುವರೆಸುವ ಆಲೋಚನೆಯಲ್ಲಿ ಮೈತ್ರಿ ಸರ್ಕಾರವಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷದ ಪರವಾಗಿ ತೀರ್ಪು ಬಂದರೆ ಅತೃಪ್ತ ಶಾಸಕರಿಗೆ ಆತಂಕ ಎದುರಾಗಲಿದ್ದು, ರಾಜ್ಯದ ರಾಜಕೀಯ ಹೈಡ್ರಾಮ ಮತ್ತೊಂದು ತಿರುವು ಪಡೆಯುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಸದನದಲ್ಲಿ ಪ್ರಶ್ನೆ ಎತ್ತಿದ್ದಾರೆ

ಸಿದ್ದರಾಮಯ್ಯ ಸದನದಲ್ಲಿ ಪ್ರಶ್ನೆ ಎತ್ತಿದ್ದಾರೆ

ಕಾಂಗ್ರೆಸ್ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಈ ಕುರಿತು ಪ್ರಶ್ನೆ ಎತ್ತಿದ್ದಾರೆ. "ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ‌ ಗೊಂದಲ ಇದೆ. ಇದು ಸ್ಪಷ್ಟವಾಗುವ ವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು" ಎಂದು ಹೇಳಿದ್ದರು.

ಕಾನೂನು ತಜ್ಞರ ಜೊತೆ ಚರ್ಚೆ

ಕಾನೂನು ತಜ್ಞರ ಜೊತೆ ಚರ್ಚೆ

ಸಿದ್ದರಾಮಯ್ಯ ಎತ್ತಿದ ಪ್ರಶ್ನೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಜೊತೆ ಚರ್ಚೆ ನಡೆಸಿದ್ದರು. ಇದರ ನಡುವೆಯೇ ಕಾಂಗ್ರೆಸ್ ಆದೇಶದ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

ಸುಪ್ರೀಂಕೋರ್ಟ್‌ ತೀರ್ಪು ಏನಾಗಿತ್ತು?

ಸುಪ್ರೀಂಕೋರ್ಟ್‌ ತೀರ್ಪು ಏನಾಗಿತ್ತು?

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದಿಂದ ವಿಪ್ ನೀಡಲಾಗಿದೆ. ಆದರೆ, 15 ಶಾಸಕರು ಸದನಕ್ಕೆ ಹಾಜರಾಗಬೇಕು ಎಂದು ಒತ್ತಡ ಹೇರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಹಾಗಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗಿದೆಯೇ?" ಎಂದು ಪ್ರಶ್ನಿಸಿದ್ದರು.

ಪ್ರತಿವಾದಿಯನ್ನಾಗಿ ಮಾಡಿಲ್ಲ

ಪ್ರತಿವಾದಿಯನ್ನಾಗಿ ಮಾಡಿಲ್ಲ

15 ರೆಬಲ್ ಶಾಸಕರು ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ, ವಿಧಾನಸಭೆಯ ಅಧ್ಯಕ್ಷರು ಹಾಗೂ ಕೇಂದ್ರ ಸರ್ಕಾರವನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಆದರೆ, 12 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದಾರೆ. ನಮ್ಮ ಪಕ್ಷದ ಸೂಚನೆಯಿಂತೆ ಅವರು ನಡೆದುಕೊಳ್ಳಬೇಕು. ಆದರೆ ನಮ್ಮನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ ಎಂದು ಕಾಂಗ್ರೆಸ್ ಪ್ರಶ್ನೆ ಎತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+