ರಾಜ್ಯಸಭೆ ಚುನಾವಣೆ; ಕುಮಾರಸ್ವಾಮಿ ಟ್ವೀಟ್‌ನಲ್ಲಿ ಮಾಡಿದ ಮನವಿ ಏನು?
ಬೆಂಗಳೂರು ಜೂನ್ 9: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಜೆಡಿಎಸ್ ತಯಾರಿ ನಡೆಸಿದೆ. ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲಾ ರೀತಿಯ ತಂತ್ರಗಳನ್ನು ಹಣಿಯುತ್ತಿವೆ.
Recommended Video
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. 4 ಸದಸ್ಯರ ಆಯ್ಕೆಗೆ ಮೂರು ಪಕ್ಷಗಳಿಂದ ಒಟ್ಟು 6 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಆಡಳಿತರೂಢ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪರಮಾಪ್ತ ಲೆಹರ್ ಸಿಂಗ್ ಸಿರೋಯ, ನಟ ಜಗ್ಗೇಶ್ ಕಣದಲ್ಲಿದ್ದಾರೆ.
ಅದೇ ರೀತಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಜಯರಾಂ ರಮೇಶ್, ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಆಲಿಖಾನ್ ಕಣದಲ್ಲಿದ್ದಾರೆ. ಅದೇ ರೀತಿ ಜೆಡಿಎಸ್‌ನಿಂದ ಉದ್ಯಮಿ ಡಿ. ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಇದೇ ವೇಳೆ ರಾಜ್ಯಸಭೆ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಕೋರಿದ್ದಾರೆ. ಜಾತ್ಯಾತೀತ ಶಕ್ತಿಗಳನ್ನು ಬಲಗೊಳ್ಳಿಸಲು ಕಾಂಗ್ರೆಸ್ ಪಕ್ಷವು ಜೆಡಿಎಸ್ ಗೆ ಬೆಂಬಲಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.
|
ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿ
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, "ಜೆಡಿಎಸ್ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರಾಗಿದ್ದಾರೆ,'' ಎಂದು ಹೇಳಿದ್ದಾರೆ.
|
ಎಲ್ಲ ಪಕ್ಷಗಳು ಜೆಡಿಎಸ್ ಅಭ್ಯರ್ಥಿ ಬೆಂಬಲಿಸಿ
"ರಾಜ್ಯಸಭೆ ಸದ್ಯರಾಗಿ ಅನುಭವವುಳ್ಳ ಕುಪೇಂದ್ರ ರೆಡ್ಡಿ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷವು ಕುಪೇಂದ್ರ ರೆಡ್ಡಿ ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡಬೇಕು,'' ಎಂದು ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಮನವಿ ಮಾಡಿದ್ದಾರೆ.
|
ಕಾಂಗ್ರೆಸ್ ಬೆಂಬಲ ಕೋರಿದ ಎಚ್ ಡಿಕೆ
ಇದೇ ವೇಳೆ ಮತ್ತೊಂದು ಟ್ವೀಟ್ ನಲ್ಲಿ ಎಚ್.ಡಿ.ಕುಮಾರಸ್ವಾಮಿ, "ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು,'' ಎಂದು ಕೋರಿರುವ ಅವರು, "ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ ಮತ್ತು ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಈ ಕುರಿತು ಕರ್ನಾಟಕ ಕಾಂಗ್ರೆಸ್ ನ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ,'' ಎಂದು ಮನವಿ ಮಾಡಿದ್ದಾರೆ.

ಗೆಲುವಿಗೆ ಮೂರು ಪಕ್ಷಗಳಿಂದ ತಂತ್ರಗಾರಿಕೆ
ಜೂನ್ 10ರಂದು ಅಂದರೆ ಶುಕ್ರವಾರ ರಾಜ್ಯಸಭೆಯ ಎಲ್ಲಾ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳ ಅದೃಷ್ಟ ಏನಾಗಲಿದೆ ಎಂಬುದು ನಿರ್ಧಾರವಾಗಲಿದೆ. ತಮ್ಮ ಅಭ್ಯರ್ಥಿಗಳ ಗೆಲುವು ಪಕ್ಷಗಳ ಪಾಲಿಗೆ ಪ್ರತಿಷ್ಠೆಯಾಗಿದ್ದು, ಈ ನಿಟ್ಟಿನಲ್ಲಿ ಮೂರು ಪಕ್ಷಗಳು ಎಲ್ಲಾ ರೀತಿಯ ತಂತ್ರಗಾರಿಕೆಗಳನ್ನು ನಡೆಸುತ್ತಿವೆ. ಯಾರ ಬೆಂಬಲಕ್ಕೆ ಯಾರು ನಿಲ್ಲಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications