ಕರ್ನಾಟಕದಲ್ಲಿ ಕೇಂದ್ರದ ಅನುದಾನ ಬಳಕೆ ಎಷ್ಟಾಗಿದೆ?: ಕಾಂಗ್ರೆಸ್‌ಗೆ ಬಿಜೆಪಿಯ ಸವಾಲು

ಬೆಂಗಳೂರು, ಫೆಬ್ರವರಿ 05: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅನ್ಯಾಯವಾಗಿದೆ. ಈ ಬಗ್ಗೆ ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಬೆಂಬಲವಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಬಿಜೆಪಿ ಗುಡುಗಿದೆ. ರಾಜ್ಯದ ಆಡಳಿತ ಕುರಿತು ಬಿಜೆಪಿ ದೂರಿದೆ.

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೋಮವಾರ ಟ್ವೀಟ್ ಮಾಡಿದೆ. ಬಿಜೆಪಿಯು, ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸದಾ ಕೇಂದ್ರವನ್ನು ಆರೋಪಿಸಿತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ.

Congress Should Released White Letter of How Much Used Central Grant Under Schemes: BJP

ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಜೀವನ ಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರದ ಅವಧಿಗಿಂತಲೂ ಹೆಚ್ಚು ಅನುದಾನ ಬಿಜೆಪಿ ರಾಜ್ಯಕ್ಕೆ ನೀಡಿದೆ ಎಂದು ಸಮರ್ಥಿಸಿಕೊಂಡಿದೆ.

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರುಪಟ್ಟು ಅಧಿಕ ತೆರಿಗೆ ಪಾಲು ಮತ್ತು ಅನುದಾನಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದೆ. ಈ ಕುರಿತು ಬಿಜೆಪಿ ಕಾಂಗ್ರೆಸ್‌ ಪಟ್ಟಿ ಕೊಟ್ಟಿದೆ. ಅವುಗಳು ಈ ಮುಂದಿನಂತಿವೆ.

ಕರ್ನಾಟಕಕ್ಕೆ ಎನ್‌ಡಿಎ ಸರ್ಕಾರದ ಕೊಡುಗೆ ತಿಳಿಸಿದ ಬಿಜೆಪಿ:ಪಟ್ಟಿ

* 2004-2014ರ ವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ ₹81,795 ಕೋಟಿ.

ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ ₹2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್‌ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ.

* ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಧಿಕ ಎಂಬುದನ್ನು ನೀವು ಲೆಕ್ಕ ಹಾಕಬಹುದು. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಬಂದ ₹ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ ₹2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದಿಲ್ಲ ಎಂದು ತಿರುಗೇಟು ನೀಡಿದೆ.

* ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6,750 ಕಿಲೋಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋಮೀಟರ್.

* 2009 ರಿಂದ 2014ರ ವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ ₹835 ಕೋಟಿಗಿಂತ ಮೋದಿ ಸರ್ಕಾರ ನೀಡಿರುವ ₹11,000 ಕೋಟಿ ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ತಿಳಿಸಿ ಎಂದು ಬಿಜೆಪಿ ಕೇಳಿದೆ.

* ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್‌ ಅಧಿಕಾರ ಬಿಟ್ಟು ತೊಲಗುವವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೇ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಕಾಂಗ್ರೆಸ್ಸನ್ನು ಉಚ್ಛಾಟಿಸಿ ಬಂದ ಮೋದಿ ಸರ್ಕಾರ ಬರೋಬ್ಬರಿ 3265 ಕಿಮೀ. ರೈಲ್ವೆ ವಿದ್ಯುದೀಕರಣ ಮಾಡಿದೆ.

* ರೈಲ್ವೆ ಇಲಾಖೆ ಸಾಧನೆಯೇ ಕಾಂಗ್ರೆಸ್‌ ಅವಧಿಯಲ್ಲಿ ಇಷ್ಟು ಅತ್ಯಲ್ಪವಾಗಿರುವಾಗ ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ. ಅಂದರೆ ಇದು ನಿಮ್ಮ ಪಕ್ಷದವರು ನಿರ್ಮಿಸಿದ್ದಕ್ಕಿಂತ 10 ಪಟ್ಟಿಗೂ ಹೆಚ್ಚು ಅಧಿಕ ಎಂದು ಬಿಜೆಪಿ ವಿವರಿಸಿದೆ.

* ಕಾಂಗ್ರೆಸ್‌ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ಕೇವಳ ಏಳು ವಿಮಾನ ನಿಲ್ದಾಣಗಳು ನಿರ್ಮಾಣವಾಗಿದ್ದವು. ಆದರೆ 2014ರಲ್ಲಿ ದೇಶದ ಜನ ಕಾಂಗ್ರೆಸ್‌ ಪಕ್ಷವನ್ನು ಕಿತ್ತೊಗೆದ ನಂತರ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಇದು ಸಹ ಬಿಜೆಪಿ ನೀಡಿದ ಕೊಡುಗೆ.

* ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು ₹30,000 ಕೋಟಿ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್‌ ಸಮ್ಮಾನದ ಮೌಲ್ಯ ₹10,990 ಕೋಟಿ ಹಣ ಒದಗಿಸಲಾಗಿದೆ.

* ಕಾಂಗ್ರೆಸ್‌ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್‌ ಭಾರತ ಯೋಜನೆಗೆ ಇಂದು 62,00,000 ಕ್ಕೂ ಅಧಿಕ ಹೆಚ್ಚು ಕನ್ನಡಿಗರು ಫಲಾನುಭವಿಗಳಾಗಿದ್ದಾರೆ.

* ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಪ್ರಧಾನಿ ಮೋದಿ ಸರ್ಕಾರ ಎಂಬುದು ನೆನಪಿರಲಿ.

* ಕೊರೋನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಬಿಜೆಪಿಯು ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ.

* ಮೇಲೆ ಹೇಳಿದ ಇವಿಷ್ಟೂ ಅಲ್ಲದೆ ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ ₹1 ಲಕ್ಷ ಕೋಟಿ ರೂಪಾಯಿಗೂ ಅಧಿಕ ನೆರವು 2014ರ ನಂತರ ಹರಿದು ಬಂದಿದೆ.

Congress Should Released White Letter of How Much Used Central Grant Under Schemes: BJP

ಅನುದಾನ ಬಳಕೆಯ ಶ್ವೇತಪತ್ರ ಹೊರಡಿಸಿ

ಇದೀಗ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಜಲ ಜೀವನ್‌ ಮಿಷನ್‌, ಅಮೃತ್ ಯೋಜನೆ, ಸ್ಮಾರ್ಟ್‌ ಸಿಟಿ, ಪಿಎಂ ಆವಾಸ್‌ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರವನ್ನು ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ ಎಂದು ಬಿಜೆಪಿ ಸವಾಲು ಹಾಕಿದೆ.

ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ.

ಸಿದ್ದರಾಮಯ್ಯ ಹೇಳಿದ್ದೇನು?

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ.

ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್.

ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು.

ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+