• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಿ,ಟಿ. ದೇವೇಗೌಡರು ಆ 'ಸತ್ಯ' ಹೇಳಬಾರದಿತ್ತು ಎಂದ ಸಿದ್ದರಾಮಯ್ಯ

|
   ಜಿ ಟಿ ದೇವೇಗೌಡ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ | Oneindia Kannada

   ಬೆಂಗಳೂರು, ಮೇ 14: 'ಮತ್ತೆ ಸಿದ್ದರಾಮಯ್ಯ' ಹೇಳಿಕೆಗಳು ರಾಜಕೀಯ ವಲಯದಲ್ಲಿ ರಣಾಂಗಣ ಸೃಷ್ಟಿಸಿದೆ. ಅದರಲ್ಲಿಯೂ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಯಾಗಿ ಉತ್ತರ ನೀಡಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಅಖಾಡಕ್ಕೆ ಇಳಿದ ಮೇಲಂತೂ ಸಂಪೂರ್ಣ ಚಿತ್ರಣವೇ ಬದಲಾಗುವ ಸೂಚನೆ ಕಂಡುಬರುತ್ತಿದೆ.

   ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

   ಇಲ್ಲಿ ಸಿದ್ದರಾಮಯ್ಯ ಮತ್ತು ವಿಶ್ವನಾಥ್ ಅವರ ನಡುವೆ ನೇರ ವಾಕ್ಸಮರ ನಡೆದಿದ್ದರೂ, ಇದು ವೈಯಕ್ತಿಕ ಗುದ್ದಾಟವಾಗಿ ಉಳಿದಿಲ್ಲ. ಸಮ್ಮಿಸ್ರ ಸರ್ಕಾರದ ಪಾಲುದಾರರಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಣ ಜಗಳವಾಗಿ ಮಾರ್ಪಟ್ಟಿದೆ. ಒಂದು ರೀತಿಯಲ್ಲಿ ಈ ಎರಡೂ ಪಕ್ಷಗಳ ನಡುವೆ ಇರುವ ಅಸಮಾಧಾನ, ಅಪನಂಬಿಕೆ ಮತ್ತು ಸಿಟ್ಟು ಇಬ್ಬರ ನಾಯಕರ ಮೂಲಕ ಹೊರಬರುತ್ತಿವೆ.

   ಸಿದ್ದರಾಮಯ್ಯ, ವಿಶ್ವನಾಥ್ ವಾಕ್ಸಮರ : ಯಾರು, ಏನು ಹೇಳಿದರು?

   ಇದಕ್ಕೆಲ್ಲ ಜಿಟಿ ದೇವೇಗೌಡ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ ಹೇಳಿಕೆಯೇ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬುದು ಸುಳ್ಳಲ್ಲ. ಆದರೆ, ಅವರು ಆ ಹೇಳಿಕೆ ಕೊಡಬಾರದಿತ್ತು ಎಂದಿರುವ ಸಿದ್ದರಾಮಯ್ಯ, ತಮ್ಮನ್ನು ಚಾಮುಂಡೇಶ್ವರಿಯಲ್ಲಿ ಸೋಲಿಸಿದ ಜಿ.ಟಿ. ದೇವೇಗೌಡ ಅವರನ್ನು 'ಗೆಳೆಯ' ಎಂದು ಸಂಬೋಧಿಸಿದ್ದಾರೆ.

   ಇಬ್ಬರೂ ನಾಯಕರನ್ನು ತಡೆಯಲು, ತೇಪೆ ಹಚ್ಚಲು ಯಾವ ಮುಖಂಡರೂ ಮುಂದೆ ಬರುತ್ತಿಲ್ಲ. ಇದುವರೆಗೂ ಎಚ್ ವಿಶ್ವನಾಥ್ ಅವರ ಹೇಳಿಕೆಗೆ ಎಚ್ ಡಿ ಕುಮಾರಸ್ವಾಮಿ ಅವರಾಗಲೀ, ಎಚ್ ಡಿ ದೇವೇಗೌಡ ಅವರಾಗಲೀ ಪ್ರತಿಕ್ರಿಯೆ ನೀಡಿಲ್ಲ. ಇತ್ತ ಕಾಂಗ್ರೆಸ್‌ನಲ್ಲಿಯೂ ಶಾಸಕರು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮ ಬಯಕೆ. ಆದರೆ ಅದು ಈಗಲೇ ಎಂದು ಹೇಳುತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ಗೆದ್ದು ಅವರು ಸಿಎಂ ಆಗಲಿ ಎನ್ನುವುದನ್ನು ಮುಂದುವರಿಸಿದ್ದಾರೆ. ಇದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುತ್ತಲೇ ಇದೆ.

   ಸಿದ್ದರಾಮಯ್ಯ ಆಶೀರ್ವಾದ ಇರುವ ತನಕ ಸರ್ಕಾರ ಸುಭದ್ರ : ಕುಮಾರಸ್ವಾಮಿ

   ಜೆಡಿಎಸ್ ಮುಖಂಡ ವಿಶ್ವನಾಥ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ವಿಶ್ವನಾಥ್ ಕೂಡ ಬಾಂಬ್ ಸಿಡಿಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ, ವಿಶ್ವನಾಥ್ ಹೇಳಿಕೆ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.

   ಸತ್ಯವಾದರೂ ಅನಗತ್ಯವಾಗಿತ್ತು

   ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು. ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

   ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ

   ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ. ಅನ್ನಭಾಗ್ಯ,ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ....ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ. ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ ಎಂದು ಸಿದ್ದರಾಮಯ್ಯ ಅವರು ವಿಶ್ವನಾಥ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

   ವಿಶ್ವನಾಥ್ Vs ಸಿದ್ದರಾಮಯ್ಯ ಹಿಂದಿನ ಅಸಲಿಯತ್ತು ಬೇರೆಯೇ ಇದೆ!?

   ಸಮಿತಿಯಲ್ಲಿ ಸಭೆ

   ಸಮಿತಿಯಲ್ಲಿ ಸಭೆ

   ತಮ್ಮ ಕಾರ್ಯಕ್ರಮಗಳು ಯಾವುದೂ ಜನಪ್ರಿಯವಲ್ಲ, ಜನಪರವೂ ಅಲ್ಲ ಎಂದು ಹಿಂದಿನ ಸರ್ಕಾರದ ಕುರಿತು ಟೀಕಾಪ್ರಹಾರ ನಡೆಸಿರುವ ಎಚ್ ವಿಶ್ವನಾಥ್ ಅವರ ಹೇಳಿಕೆಗಳಮ ಕುರಿತು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.

   ಗಂಭೀರವಾಗಿ ತೆಗೆದುಕೊಳ್ಳೊಲ್ಲ

   ಗಂಭೀರವಾಗಿ ತೆಗೆದುಕೊಳ್ಳೊಲ್ಲ

   ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದನ್ನೇ ಪದೇ ಪದೇ ಹೇಳುತ್ತಿರುತ್ತಾರೆ. ಅವರು ಹೇಳಿದ್ದನ್ನೆಲ್ಲ ಗಂಭೀರವಾಗಿ ತೆಗೆದುಕೊಳ್ಳಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕೇವಲ ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ನಡೆಯುತ್ತಿದೆ. ಬಿಜೆಪಿಗರು ಇರುವ ಹೋಟೆಲ್, ಯಡಿಯೂರಪ್ಪ ಇರುವ ರೂಂ ಮೇಲೆ ಏಕೆ ಐಟಿ ದಾಳಿಗಳು ನಡೆಯುತ್ತಿಲ್ಲ ಎಂದು ಅವರು ಕಿಡಿಕಾರಿದರು.

   English summary
   Congress leader Siddaramaiah said that, The statement made by GT Devegowda on JDS workers were voted for BJP in Lok Sabha elections in Mysuru was true but unnecessary.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X