ಮೋದಿ ಒಮ್ಮೆ ಕೈಬೀಸಿದರೆ ಜನತೆಗೆ ಬರೆ ಎಳೆದು ಹೋದರು ಎಂದೇ ಅರ್ಥ: ಕಾಂಗ್ರೆಸ್ ಕಿಡಿ
ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಜನರಿಗೆ ಶಾಕ್ ನೀಡಿದ್ದು, ಕಾಂಗ್ರೆಸ್ ಈ ಕುರಿತು ಕಿಡಿಕಾರಿದೆ.
ಬೆಂಗಳೂರು,ಮಾರ್ಚ್1: ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಜನರಿಗೆ ಶಾಕ್ ನೀಡಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಿಡಿಕಾರಿದೆ.
ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆ ಬರೆ ಎಳೆದು ಹೋದರು ಎಂದೇ ಅರ್ಥ!
— Karnataka Congress (@INCKarnataka) March 1, 2023
ಗೃಹಬಳಕೆಯ ಸಿಲಿಂಡರ್ ದರ ಇಂದಿನಿಂದ ಮತ್ತೆ ₹50 ಏರಿಕೆಯಾಗಿದೆ.
ಮೋದಿಜಿಯ ಅಚ್ಛೆ ದಿನಗಳಲ್ಲಿ
ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ.
ಈ ಅಮಾನವೀಯ ಬೆಲೆ ಏರಿಕೆಯಲ್ಲಿ ನೆರವು ನೀಡಲೆಂದೇ
ನಮ್ಮ #GruhaLakshmi ಯೋಜನೆ
ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆ ಬರೆ ಎಳೆದು ಹೋದರು ಎಂದೇ ಅರ್ಥ. ಗೃಹಬಳಕೆಯ ಸಿಲಿಂಡರ್ ದರ ಇಂದಿನಿಂದ ಮತ್ತೆ 50 ಏರಿಕೆಯಾಗಿದೆ. ಮೋದಿಜಿಯ ಅಚ್ಛೆ ದಿನಗಳಲ್ಲಿ ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಈ ಅಮಾನವೀಯ ಬೆಲೆ ಏರಿಕೆಯಲ್ಲಿ ನೆರವು ನೀಡಲೆಂದೇ ನಮ್ಮ ಗೃಹ ಲಕ್ಷ್ಮಿ ಯೋಜನೆ ಘೋಷಿಸಿದ್ದೇನೆ ಎಂದು ಕಾಂಗ್ರೆಸ್ ಹೇಳದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹350 ಏರಿಕೆ, ಗೃಹಬಳಕೆಯ ಸಿಲಿಂಡರ್ ಬೆಲೆ ₹50 ಏರಿಕೆಯಾಗಿದೆ. ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ ಕೂಡ "ಐಷಾರಾಮಿ ಜೀವನ" ಎನ್ನುವ ಸ್ಥಿತಿಗೆ ತಂದಿಟ್ಟಿದ್ದಕ್ಕೆ ಧನ್ಯವಾದ ಮೋದಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಮೊದಲು ಹೊಗೆಯಿಂದ ಕಣ್ಣೀರು ಬರ್ತಿತ್ತು, ಈಗ ಸಿಲಿಂಡರ್ ಕೂಡ ಕಣ್ಣೀರು ತರಿಸುತ್ತಿದೆ ಅಲ್ಲವೇ ಎಂದು ಬಿಜೆಪಿಯನ್ನ ಕಾಂಗ್ರೆಸ್ ಪ್ರಶ್ನಿಸಿದೆ.
ಇನ್ನೂ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಜನರಿಗೆ ಶಾಕ್ ನೀಡಿದೆ. LPG ಸಿಲಿಂಡರ್ ಗ್ರಾಹಕರಿಗೆ ಮಾರ್ಚ್ ತಿಂಗಳ ಮೊದಲ ದಿನ ಶಾಕಿಂಗ್ ಸುದ್ದಿ ಎದುರಾಗಿದ್ದು, ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದ್ದು, 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 350.50 ಏರಿಕೆಯಾಗಿದೆ.
ಇನ್ನೂ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೆರಿದ್ದು, ಮತ್ತೆ ಸಿಲಿಂಡರ್ ದರದಲ್ಲಿ 50 ಏರಿಕೆ ಮಾಡಿರುವುದು ಜನರಲ್ಲಿ ಆತಂಕ ತಂದಿದೆ . ಗೃಹ ಬಳಕೆಯ ಸಿಲಿಂಡರ್ ದರಗಳು 14.2 ಕೆಜಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಇಂದಿನಿಂದ ದೆಹಲಿಯಲ್ಲಿ 1053 ರೂ.ಗೆ ಬದಲಾಗಿ 1103 ರೂ.ಗೆ ಲಭ್ಯವಾಗಲಿದೆ. ಮುಂಬೈನಲ್ಲಿ ಈ ಸಿಲಿಂಡರ್ ಬೆಲೆ 1052.50 ರೂ. ಬದಲಿಗೆ 1102 ರೂ.,ಗೆ ಮಾರಾಟ ಮಾಡಲಾಗುತ್ತಿದೆ. ಕೋಲ್ಕತ್ತಾದಲ್ಲಿ 1079 ರೂ. ಬದಲು 1129 ಮತ್ತು ಚೆನ್ನೈನಲ್ಲಿ ಇಂದಿನಿಂದ 1068.50ರೂ. ಬದಲಿಗೆ 1118.5 ಬೆಲೆಯಾಗಿದೆ.












Click it and Unblock the Notifications