ರೌಡಿ ಶೀಟರ್‌ ಎದುರು ಕೈ ಮುಗಿದು ನಿಂತ ಮೋದಿ; ಪ್ರಧಾನಿ ಹುದ್ದಗೆ ಕಳಂಕ ಎಂದು ಕಾಂಗ್ರೆಸ್‌ ಕಿಡಿ

ವಿಧಾನಸಭಾ ಚುನಾವಣೆ ಹೊತ್ತಲಿ ರಾಜ್ಯ ರಾಜಕಾರಣಕ್ಕೆ ರೌಡಿ ಶೀಟರ್‌ ಗಳು ಎಂಟ್ರಿಯಾಗಲಿದ್ದಾರಾ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, ಮಾರ್ಚ್ 13: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರೌಡಿ ಶೀಟರ್‌ ಗಳ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದೆ. ಈ ಹಿಂದೆ ರೌಡಿ ಶೀಟರ್‌ ಸೈಲೆಂಟ್‌ ಸುನೀಲ್‌ ಜೊತೆ ಬಿಜೆಪಿ ನಾಯಕರು ಒಟ್ಟಿಗೆ ಕಾಣಿಸಿಕೊಂಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಇನ್ನೂ ಈ ಕುರಿತು ರಾಜ್ಯ ಬಿಜೆಪಿ ವಿರುದ್ದ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿತ್ತು, ಈ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಸಾಕಷ್ಟು ಆರೋಪ ಹಾಗೂ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಆದರೆ, ಇದೀಗ ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

Congress Slams BJP Over Pic Of Rowdy Sheeter Ravi Greeting PM Narendra Modi

ಭಾನುವಾರ ಮಂಡ್ಯಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸ್ವಾಗತಿಸುವ ವೇಳೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ರೌಡಿ ಶೀಟರ್ ಫೈಟರ್ ರವಿ ಕಾಣಿಸಿಕೊಂಡಿದ್ದು, ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಆರೋಪಿಸಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ನಿಮ್ಮನ್ನು ಸ್ವಾಗತಿಸಲು ಧಿಡೀರ್ ಹಾಜರಾಗಿದ್ದ ಉರಿಗೌಡ, ದೊಡ್ಡನಂಜೇಗೌಡ ಎಂಬ ಫಿಕ್ಷನ್ ಕ್ಯಾರೆಕ್ಟರ್‌ಗಳು ರಾತ್ರೋರಾತ್ರಿ ಎಲ್ಲಿ ಹೋದರು ಎಂದು ಒಮ್ಮೆ ಸಿ.ಟಿ ರವಿ ಅವರನ್ನ ವಿಚಾರಿಸಿ. ರಾಜ್ಯ ಬಿಜೆಪಿ ನಾಯಕರ ನಕಲಿತನ, ಸುಳ್ಳು, ಆತ್ಮವಂಚನೆ, ಡೋಂಗಿತನ ಎಲ್ಲವಕ್ಕೂ ಮೋದಿಯವರೇ ಪ್ರೇರಣೆಯೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

Congress Slams BJP Over Pic Of Rowdy Sheeter Ravi Greeting PM Narendra Modi

ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಎರಡನೇ ಇಂಜಿನ್ ಸರ್ಕಾರದ ಲಂಚಾವತಾರವು ರೈತರನ್ನು ಎತ್ತು, ಗಾಡಿಗಳನ್ನೇ ಲಂಚ ನೀಡುವ ಹಂತಕ್ಕೆ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ತವರು ಜಿಲ್ಲೆಯ ರೈತರ ಎತ್ತುಗಳನ್ನೇ ಲಂಚವಾಗಿ ನೀಡಲು ತಂದಿದ್ದಾರೆ. ಬಿಜೆಪಿಯ ಕಡುಭ್ರಷ್ಟ ಸರ್ಕಾರದ ಪರವಾಗಿ ಯಾವ ಮುಖವಿಟ್ಟುಕೊಂಡು ಮತ ಕೇಳುವಿರಿ? ಎಂದು ಪ್ರಶ್ನಿಸಿದೆ.

ಮಂಡ್ಯದಲ್ಲಿ ಕಬ್ಬು ಬೆಳೆಗಾರರು ಹಲವು ದಿನಗಳಿಂದ ಪ್ರತಿಭಟಿಸುತ್ತಿದ್ದರೂ ಬಿಜೆಪಿ ಕ್ಯಾರೇ ಅನ್ನಲಿಲ್ಲ ಈಗ ಅದೇ ಮಂಡ್ಯದಲ್ಲಿ ಮೋದಿ ಕರೆಸಿ ಬರಿಗೈ ಬೀಸಿದರೆ ಜನ ಕೇಳುವರೇ? ರಾಜ್ಯ ನಾಯಕರ ನಂತರ ಮೋದಿಗೂ ಖಾಲಿ ಕುರ್ಚಿಗಳ ದರ್ಶನವಾಗಿದೆ, ಹಣ ಕೊಟ್ಟರೂ ಬಾರದ ಜನ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದಾರೆ ಎಂದು ಕಾಂಗ್ರೆಸ್‌ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+