ಶಿವಮೊಗ್ಗದಲ್ಲಿ ಮತ್ತೆ ಬೆಂಕಿ ಕಡ್ಡಿ ಗೀರಲು ಬಿಜೆಪಿ ತೆರಳಿದೆ: ಕಾಂಗ್ರೆಸ್ ಕೆಂಡ
ಬೆಂಗಳೂರು, ಅಕ್ಟೋಬರ್ 05: ರಾಜ್ಯಾದ್ಯಂತ ಸುದ್ದಿ ಮಾಡುತ್ತಿರುವ ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿನ ಗಲಾಟೆ ಸ್ಥಳಕ್ಕೆ ಬಿಜೆಪಿ ಸತ್ಯಶೋಧನಾ ತಂಡ ತೆರಳಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿ ಕಾರಿದೆ. ಬಿಜೆಪಿ ಶಿವಮೊಗ್ಗದಲ್ಲಿ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಹೋಗಿದೆ ಎಂದು ಆರೋಪಿಸಿದೆ.
ಬಿಜೆಪಿ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದು ಹೇಳಿದೆ.

ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನು ಇದೆ. ಬಿಜೆಪಿ ನಾಯಕರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ. ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಗುಡುಗಿದೆ.
ಶಿವಮೊಗ್ಗದ ರಾಗಿಗುಡ್ಡಲ್ಲಿ ಈದ ಮಿಲಾದ್ ಬೃಹತ್ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು. ತಲ್ವಾರ್ ಪ್ರದರ್ಶಿಸಲಾಗಿತ್ತು. ಮೆರವಣಿಗೆ ವೇಳೆ ಮುಸ್ಲಿಂ ಯುವಕರ ಗುಂಪೊಂದು ಪೊಲೀಸರ ವಿರುದ್ಧ ಕೈ ತೂರಾಟ ಆರಂಭಿಸಿದ್ದರು. ನೋಡು ನೋಡುತ್ತಿದ್ದಂತೆ ಪರಿಸ್ಥಿತಿ ಹತೋಟಿ ಮೀರಿ ಹೋಗಿತ್ತು.
ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು.
— Karnataka Congress (@INCKarnataka) October 5, 2023
ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿಯವರ ಅಗತ್ಯವಿಲ್ಲ, ಬಿಜೆಪಿ ಯಾವುದೇ ಯಾವ ತನಿಖಾ ಏಜೆನ್ಸಿಯೂ ಅಲ್ಲ.
ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು…
ರಾಗಿಗುಡ್ಡದ ಸ್ಥಳೀಯರಿಂದ ಬಿಜೆಪಿಗೆ ಮಾಹಿತಿ
ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿತು. ಈ ಸಂಬಂಧ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡ ಶಿವಮೊಗ್ಗಕ್ಕೆ ಬೆಳಗ್ಗೆ 11 ಗಂಟೆಗೆ ತೆರಳಿದೆ.
ಅಲ್ಲಿ ಖುದ್ದು ಗಲಭೆ ವೇಳೆ ತೊಂದರೆಗೀಡಾದ ಸಂತ್ರಸ್ತರ ಮನೆಗೆ ಭೇಟಿ ನೀಡಿದೆ. ಘಟನೆ ನಡೆದ ಕುರಿತು ಸ್ಥಳೀಯರಿಂದ ನೈಜ ಮಾಹಿತಿ ಸಂಗ್ರಹಿಸುವಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ.

ಸತ್ಯ ಶೋಧನಾ ತಂಡದಲ್ಲಿ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವಥ್ ನಾರಾಯಣ, ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ, ಸ್ಥಳಿಯ ಶಾಸಕರು ಹಾಗೂ ಇನ್ನಿತರ ಮುಖಂಡರು ಶಿವಮೊಗ್ಗದ ರಾಗಿಗುಡ್ಡದ ಬೀದಿಗಳಲ್ಲಿ ಸಂಚರಿಸಿದ್ದಾರೆ. ಗಲಭೆ ಕುರಿತು ವಾಸ್ತವಾಂಸ ಸಂಗ್ರಹಿಸುತ್ತಿದ್ದಾರೆ.
ಸರ್ಕಾರದ ವಿರುದ್ಧ ಎಂಪಿ ರೇಣುಕಾಚಾರ್ಯ ಆಕ್ರೋಶ
ಈ ಮಧ್ಯೆ ಗಲಭೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು, ಗಲಭೆ ಕಾರಣರಾದವರನ್ನು ಬಂಧಿಸಿದರೆ ಮಾತ್ರವೇ ಸಾಲದು ಅವರನ್ನು ಎನ್‌ಕೌಂಟರ್ ಮಾಡಬೇಕು ಎಂದು ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಿ ಮತಾಂಧ ಕೋಮುವಾದಿ ಶಕ್ತಿಗಳಿಂದ ಹಿಂದುಗಳ ಮೇಲೆ ನಡೆದ ದೌರ್ಜನ್ಯ ಮತ್ತು ದಾಳಿಯಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ, ಹಾನಿಗೊಳಗಾದ ಮನೆಗಳು ವಾಹನಗಳನ್ನು ಪರಿಶೀಲಿಸಿದೆವು.
— Nalinkumar Kateel (@nalinkateel) October 5, 2023
ನಂತರ ಆ ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ನೋವು, ಸಂಕಷ್ಟ ಮತ್ತು ಭಾವನೆಗಳನ್ನು ಆಲಿಸಿ ಸಂತೈಸಲಾಯಿತು.
1/2 pic.twitter.com/puBZWETjY2
ಇತ್ತ ರಾಜ್ಯ ಬಿಜೆಪಿಯು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕರ್ನಾಟಕ/ಶಿವಮೊಗ್ಗವು 1990ರ ಅವಧಿಯಲ್ಲಿನ ಜಮ್ಮು ಮತ್ತು ಕಾಶ್ಮೀರದಲ್ಲಿನ ಘಟನೆಗಳನ್ನು ಹೋಲುತ್ತವೆ. ಹಿಂದುಗಳ ಮೇಲಿನ ಜಿಹಾದಿಗಳ ದಾಳಿ, ಸೈನಿಕರ ಮೇಲಿನ ಕಲ್ಲು ತೂರಾಟ, ಒಕ್ಕಲೆಬ್ಬಿಸುವುದು, ಸ್ಥಳೀಯರನ್ನು ಭಯ ಭೀತಗೊಳಿಸುವ ಘಟನೆಗಳು ಜಮ್ಮು ಕಾಶ್ಮೀರದಲ್ಲಿ ನಡೆದಿದ್ದು, ಅಂತದ್ದೇ ಘಟನೆಗಳು ಶಿವಮೊಗ್ಗದಲ್ಲಿ ನಡೆದಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರತಿಪಾದಿಸಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications