ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ತ ಪ್ರಮಾಣ ವಚನ, ಇತ್ತ ಕಾಂಗ್ರೆಸ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಮೇ 17 : ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅತ್ತ ಕಾಂಗ್ರೆಸ್ ಸರ್ಕಾರ ರಚನೆಗೆ ಅವಕಾಶ ನೀಡಿಲ್ಲ ಎಂದು ಪ್ರತಿಭಟನೆ ಆರಂಭಿಸಿದೆ.

ವಿಕಾಸಸೌಧ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ಗುಲಾ ಬಬಿ ಆಜಾದ್, ಜಿ.ಪರಮೇಶ್ವರ ಮುಂತಾದ ನಾಯಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಲ್‌ ಟನ್ ರೆಸಾರ್ಟ್‌ನಲ್ಲಿದ್ದ ಕಾಂಗ್ರೆಸ್‌ ಶಾಸಕರು ಆಗಮಿಸುತ್ತಿದ್ದಾರೆ.

24ನೇ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿರುವ ಸವಾಲುಗಳು24ನೇ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿರುವ ಸವಾಲುಗಳು

Congress stage protest at Mahatma Gandhi statue

ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸರ್ಕಾರ ರಚನೆ ವಿವಾದ ನ್ಯಾಯಾಲಯದ ಅಂಗಳದಲ್ಲಿದೆ. ನಾವು ಜನರ ಮುಂದೆ ಹೋಗುತ್ತೇವೆ. ಬಿಜೆಪಿ ಕಾನೂನಿಗೆ ವಿರುದ್ಧವಾಗಿ ಹೋಗುತ್ತಿದೆ' ಎಂದು ಆರೋಪಿಸಿದರು.

Congress stage protest at Mahatma Gandhi statue

ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಅಭ್ಯರ್ಥಿ ಆರ್.ಶಂಕರ್ ಅವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯ ಪಾಲರು ಕಾನೂನಿಗೆ ವಿರುದ್ಧವಾಗಿ ಸರ್ಕಾರ ರಚನೆ ಮಾಡಲು ಅವಕಾಶವನ್ನು ಬಿಜೆಪಿಗೆ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಜೆಡಿಎಸ್‌ ನಡೆ ಏನು?: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದಿಂದ ಶಾಂಗ್ರಿಲಾ ಹೋಟೆಲ್‌ಗೆ ಆಗಮಿಸಿದ್ದು, ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಚರ್ಚೆ ನಡೆಸಲಿದ್ದಾರೆ.

English summary
Congress MLAs and leaders, including Ashok Gehlot and Siddaramaiah gather at Mahatma Gandhi's near statue in Vikasa Soudha to protest against B.S.Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X