• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ಶ್ರೀಶೈಲಪ್ಪ ನಿಧನ, ಕಾಂಗ್ರೆಸ್ ಸಭೆ ನ. 27ಕ್ಕೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 25: ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಇದೇ ತಿಂಗಳು 27ರ ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಹೊರವಲಯದ ವರ್ತೂರು ರೆಸಾರ್ಟ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿತ್ತು. ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ಶ್ರೀಶೈಲಪ್ಪ ಬಿದರೂರು ಅವರು ಕೂಡಾ ಭಾಗಿಯಾಗಿದ್ದರು.

ಒಬ್ಬರಿಗೆ ಒಂದೇ ಟಿಕೆಟ್, ಸಿದ್ದುಗೆ ಡಿ. ಕೆ. ಶಿವಕುಮಾರ್ ಟಾಂಗ್ ಒಬ್ಬರಿಗೆ ಒಂದೇ ಟಿಕೆಟ್, ಸಿದ್ದುಗೆ ಡಿ. ಕೆ. ಶಿವಕುಮಾರ್ ಟಾಂಗ್

ಸಭೆಯ ಆರಂಭದಲ್ಲಿಯೇ ಲ್ಲಿ ಶ್ರಿಶೈಲಪ್ಪ ಬಿದರೂರುಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣೆವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರಾದೃಷ್ಟವಶಾತ್ ಅವರು ಬದುಕುಳಿಯಲಿಲ್ಲ. ಸಭೆಯ ಕಾಂಗ್ರೆಸ್ ನಾಯಕರು ಬಿದರೂರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಬಿದರೂರು ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್ ಅವರು, ಮಾಜಿ ಶಾಸಕರು, ಹಿರಿಯ ನಾಯಕರಾದ ಶೀಶೈಲಪ್ಪ ಬಿದರೂರು ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಇವರು ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಹಲವು ಸಮಿತಿಗಳಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದಾರೆ. ಇಂದು ಸಭೆಯಲ್ಲಿ ಭಾಗವಹಿಸಲು ಆಗಮಿಸಿದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಕೊನೆಯುಸಿರೆಳೆದಿದ್ದಾರೆ. ನಾನು, ನಮ್ಮ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಎಲ್ಲರ ಒಮ್ಮತದ ತೀರ್ಮಾನದ ಮೇರೆಗೆ ಈ ಸಭೆಯನ್ನು 27ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಜೂಮ್ ಮೂಲಕ ಇದೇ 27 ರಂದು ಸಭೆ ಮಾಡಲಾಗುವುದು. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಅಭ್ಯರ್ಥಿಯಾಗಲು ಅರ್ಜಿ ಹಾಕಿರುವವರಿಗೆ ಜೂಮ್ ಸಭೆ ಲಿಂಕ್ ಕಳುಹಿಸಲಾಗುವುದು. ನಿಮಗೆ ಕೊಡಬೇಕಾದ ಮಾರ್ಗದರ್ಶನವನ್ನು ನೀವುಗಳು ಕೊಟ್ಟಿರುವ ದೂರವಾಣಿ ಸಂಖ್ಯೆಗೆ ಶೇರ್ ಮಾಡುತ್ತೇವೆ. ಮತದಾರರ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಗೆ ನೀಡಲಾಗುವುದು. ನೀವುಗಳು ನಿಮ್ಮ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ತೆಗೆದುಕೊಂಡು ಹೋಗಿ ಅವುಗಳನ್ನು ಪರಿಶೀಲಿಸಬೇಕು. ಕೈಬಿಡಲಾಗಿರುವ ಹೆಸರನ್ನು ಮತ್ತೆ ಸೇರಿಸಿಕೊಳ್ಳುವಂತೆ ಮಾಡಬೇಕು.

ನಮ್ಮ ನಾಯಕ ಬಿದರೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್‌
Know all about
ಡಿ.ಕೆ. ಶಿವಕುಮಾರ್‌
English summary
KPCC president D. K. Shivakumar said Congress ticket aspirants meeting has postponed to November 27 after the death of Srishailappa Bidarur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X