ಕಾಂಗ್ರೆಸ್ ಪಾಲಿಗೆ ಕಗ್ಗಂಟಾದ ಎರಡು ಕ್ಷೇತ್ರಗಳು

ಬೆಂಗಳೂರು,ಜ.28 : ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿರುವ ಬೆಂಗಳೂರು ಉತ್ತರ ಮತ್ತು ಮಂಗಳೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಮೆರಿಕಾ ಅಧ್ಯಕ್ಷರ ಆಯ್ಕೆ ಮಾದರಿಯನ್ನು ಅನುಸರಿಸಲು ಕೆಪಿಸಿಸಿ ನಿರ್ಧರಿಸಿದೆ. ಈ ಕುರಿತು ಎಐಸಿಸಿಗೆ ಮನವಿ ಮಾಡಿದೆ.

ಕೆಲವು ದಿನಗಳ ಹಿಂದೆ ನಡೆದ ಎಐಸಿಸಿ ಮಹಾಧಿವೇಶನದಲ್ಲಿಯೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಮೆರಿಕಾ ಅಧ್ಯಕ್ಷರ ಮಾದರಿಯಲ್ಲಿ ಆಯ್ಕೆ ಮಾಡುತ್ತೇವೆ ಎಂದು ರಾಜ್ಯ ನಾಯಕರು ಭರವಸೆ ನೀಡಿದ್ದಾರೆ. ಅದರಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ನಿರ್ಧರಿಸಿದವರಿಗೆ ಟಿಕೆಟ್ ನೀಡಲು ಪಕ್ಷ ಸಿದ್ಧವಾಗಿದೆ.

kpcc

ಮಂಗಳೂರು ಕ್ಷೇತ್ರದಲ್ಲಿ ಹರ್ಷ ಮೊಯ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಸ್ಥಳೀಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿದ ನಂತರ ಕಾರ್ಯಕರ್ತರ ಜತೆ ಮಾತನಾಡಿದ ಡಾ.ಪರಮೇಶ್ವರ್, ಬೆಂಗಳೂರು ಉತ್ತರ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಅಮೆರಿಕಾ ಅಧ್ಯಕ್ಷರ ಆಯ್ಕೆ ಮಾದರಿಯಲ್ಲಿ ನಡೆಸಲು ಎಐಸಿಸಿ ಉದ್ದೇಶಿಸಿದೆ ಎಂದು ಹೇಳಿದ್ದಾರೆ.[ಕಾಂಗ್ರೆಸ್ ಸಂಭಾವ್ಯ ಪಟ್ಟಿ]

ಅಮೆರಿಕಾ ಮಾದರಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎಐಸಿಸಿ ಮಾರ್ಗಸೂಚಿಗಳನ್ನು ಕಳುಹಿಸಲಿದೆ. ಮಾರ್ಗಸೂಚಿ ಅನ್ವಯ 700ರಿಂದ 800 ಜನರಿಂದ ಮತದಾನ ಮಾಡಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು, ಪ್ರದೇಶ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಮತ್ತು ಎನ್ಎಸ್ ಯುಐ ಮುಖಂಡರು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮತದಾನ ಮಾಡಲಿದ್ದಾರೆ. [ಪೂಜಾರಿ ಪರ ಬೆಂಗಳೂರಿನಲ್ಲಿ ಬ್ಯಾಟಿಂಗ್]

ಟಿಕೆಟ್ ಪಡೆಯಲು ಭಾರೀ ಪೈಪೋಟಿ ವ್ಯಕ್ತವಾಗಿರುವ ಕರ್ನಾಟಕದ ಬೆಂಗಳೂರು ಉತ್ತರ ಮತ್ತು ಮಂಗಳೂರು ಕ್ಷೇತ್ರದಲ್ಲಿ ಅಮೆರಿಕ ಮಾದರಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಸಿಸಿ ನಿರ್ಧರಿಸಿದೆ. ದೇಶದ 15 ಕ್ಷೇತ್ರಗಳಲ್ಲಿ ಈ ಮಾದರಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಅದರಲ್ಲಿ ಕರ್ನಾಟಕದ ಎರಡು ಕ್ಷೇತ್ರಗಳು ಸೇರಿವೆ. [ಹಳೆ ಹುಲಿ-ಹೊಸ ಮುಖ ಪೈಪೋಟಿ]

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ವಕ್ತಾರ ಬಿ.ಎಲ್.ಶಂಕರ್, ಐಐಎಂಬಿ ಪ್ರೊ ರಾಜೀವ್ ಗೌಡ, ಸ್ಥಳೀಯ ನಾಯಕ ಜಿ.ಸಿ.ಚಂದ್ರಶೇಖರ್ ಮತ್ತು ಕೆ.ಸಿ.ರಾಮಮೂರ್ತಿ ಆಕಾಂಕ್ಷಿಗಳಾಗಿದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮತದಾನದ ಮೂಲಕ ನಿರ್ಧಾರವಾಗಲಿದೆ.

ಮಂಗಳೂರು ಕ್ಷೇತ್ರದಲ್ಲಿಯೂ ಹಾಲಿ ಸಂಸದ ಜನಾರ್ದನ ಪೂಜಾರಿ ಮತ್ತು ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ವಿರುದ್ಧ ಟಿಕೆಟ್ ಗಾರಿ ಪೈಪೋಟಿ ಏರ್ಪಟ್ಟಿದೆ. ಆದ್ದರಿಂದ ಈ ಕ್ಷೇತ್ರದಲ್ಲೂ ಮತದಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಉದ್ಧೇಶಿಸಿಲಾಗಿದೆ. ಫೆ.20ರೊಳಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+