ಕೈ ಪಾಳಯದಲ್ಲಿ ಭುಗಿಲೆದ್ದ ಕಿಚ್ಚು: 25 ಶಾಸಕರಿಗೆ, 5 ಎಂಎಲ್‌ಸಿಗೆ ನಿಗಮ-ಮಂಡಳಿ ಪಟ್ಟ?

ಬೆಂಗಳೂರು, ನವೆಂಬರ್‌ 22: 2024 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲಲು ಟಾರ್ಗೆಟ್‌ ಹಾಕಿಕೊಂಡಿರುವ ಕಾಂಗ್ರೆಸ್‌ ನಾಯಕರಿಗೆ ಸದ್ಯ ಕೈ ಪಾಳಯದಲ್ಲಿ ಹೊತ್ತಿಕೊಂಡ ಅಸಮಾಧಾನದ ಬೆಂಕಿಯನ್ನ ಶಮನಗೊಳಿಸಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಜ್ಜಾಗಲು ಕಾಂಗ್ರೆಸ್ ತನ್ನ ಶಾಸಕರು ಮತ್ತು ಕಾರ್ಯಕರ್ತರಿಗೆ ಮನವೊಲಿಸಲು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕ ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಪಕ್ಷದೊಳಗೆ, ವಿಶೇಷವಾಗಿ ಹಿರಿಯ ಶಾಸಕರು ಮತ್ತು ಎಂಎಲ್‌ಸಿಗಳಲ್ಲಿ ಅಸಮಾಧಾನವನ್ನು ಶಮನಗೊಳಿಸಲು ಮುಂದಾಗಿದ್ದಾರೆ.

Congress to appoint 25 MLAs,5 MLCs to boards and corps

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಮಂಗಳವಾರ ಬೆಂಗಳೂರಿಗೆ ಆಗಮಿಸಿ 80 ಕ್ಕೂ ಹೆಚ್ಚು ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸುವ ಕುರಿತು ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಇತರ ಹಿರಿಯ ಪದಾಧಿಕಾರಿಗಳೊಂದಿಗೆ ಎರಡು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಈ ನಿಟ್ಟಿನಲ್ಲಿ ಸುರ್ಜೇವಾಲಾ ಅವರ ಎರಡನೇ ಸಭೆ ಇದಾಗಿದೆ ಎಂದು ಹೇಳಲಾಗಿದೆ.

ಇನ್ನೂ ನಿಗಮ ಮಂಡಳಿಯನ್ನ ಹಂತ ಹಂತವಾಗಿ ನೇಮಕಾತಿಗಳನ್ನು ಅಂತಿಮಗೊಳಿಸಲು ನಿರ್ಧರಿಸಿದ್ದೇವೆ ಮತ್ತು ಮೊದಲ ಸುತ್ತಿನಲ್ಲಿ ಸುಮಾರು 25 ಶಾಸಕರು ಮತ್ತು ಐದು ಎಂಎಲ್‌ಸಿಗಳನ್ನು ನಾಮನಿರ್ದೇಶನ ಮಾಡಲು ಯೋಜಿಸಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದವರಲ್ಲಿ ಒಬ್ಬರು ಹೇಳಿದರು. ಎರಡನೇ ಸುತ್ತಿನಲ್ಲಿ ಮಾಜಿ ಶಾಸಕರು ಮತ್ತು ಪಕ್ಷದ ಹಿರಿಯ ಪದಾಧಿಕಾರಿಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ.

ಶಾಸಕರ ಪಟ್ಟಿ ಬಹುತೇಕ ಸಿದ್ದವಾಗಿದ್ದು, ಪಕ್ಷವು ನಿಮಗ ಮಂಡಳಿ ಪಟ್ಟಿಯನ್ನ ಯಾವುದೇ ಸಮಯದಲ್ಲಿ ಬಿಡುಗಡೆ ಮಾಡಬಹುದು ಎಂದು ಕಾಂಗ್ರೆಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ. ಕಿಯೋನಿಕ್ಸ್, ಕರ್ನಾಟಕ ಹೌಸಿಂಗ್ ಬೋರ್ಡ್, ಎಂಎಸ್‌ಐಎಲ್ ಮತ್ತು ಇತರ ಪ್ಲಮ್ ಬೋರ್ಡ್‌ಗಳು ಮತ್ತು ನಿಗಮಗಳ ಅಧ್ಯಕ್ಷರ ಹುದ್ದೆಗಳಿಗೆ ಶಾಸಕರ ಹಿರಿತನಕ್ಕೆ ಆದ್ಯತೆ ನೀಡಲು ಪಕ್ಷವು ನಿರ್ಧರಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಎಲ್ಲ ನೇಮಕಾತಿಗಳು ಒಂದೇ ಬಾರಿ ಆಗಲು ಸಾಧ್ಯವಿಲ್ಲ. ಅವುಗಳನ್ನು ಎರಡು ಮೂರು ಹಂತಗಳಲ್ಲಿ ಮಾಡಲಾಗುತ್ತದೆ. ನಾವು ಅದನ್ನು ಮಾಡುತ್ತೇವೆ. ಸುರ್ಜೇವಾಲಾ ಬಂದಿದ್ದಾರೆ. ಇಂದು ಅಂತಿಮಗೊಳಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂದು ನನಗೆ ಖಚಿತವಿಲ್ಲ. ಮೊದಲ ಹಂತದಲ್ಲಿ ಶಾಸಕರು ಮತ್ತು ಎಂಎಲ್‌ಸಿಗಳನ್ನು ಮತ್ತು ಎರಡನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮಾಜಿ ಶಾಸಕರನ್ನು ನೇಮಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+