ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಪರೇಷನ್ ಕಮಲ : ಬಿಜೆಪಿ ವಿರುದ್ಧ ಎಸಿಬಿಗೆ ಕಾಂಗ್ರೆಸ್ ದೂರು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14 : ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿ ಶಾಸಕರಿಗೆ ಕೋಟಿ ಕೋಟಿ ರೂ ಹಣದ ಆಮಿಷ ಒಡ್ಡಲಾಗಿದೆ ಎಂಬ ಆರೋಪವಿದೆ. ಈ ಕುರಿತು ಕಾನೂನು ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ಅವರು, 'ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಈ ಬಗ್ಗೆ ಎಸಿಬಿಗೆ ದೂರು ನೀಡುವ ಚಿಂತನೆ ಇದೆ' ಎಂದರು.

ಆಪರೇಷನ್ ಕಮಲ : ಆರ್‌ಎಸ್‌ಎಸ್‌ನಿಂದ ಅಮಿತ್‌ ಶಾಗೆ ವರದಿ!ಆಪರೇಷನ್ ಕಮಲ : ಆರ್‌ಎಸ್‌ಎಸ್‌ನಿಂದ ಅಮಿತ್‌ ಶಾಗೆ ವರದಿ!

Congress to file complaint against BJP to ACB

'ಶಾಸಕರಿಗೆ ಹಣದ ಆಮಿಷ ವೊಡ್ಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿದೆ. ಶಾಸಕರು ಸಹ ದೂರವಾಣಿ ಕರೆ ಮಾಡಿ ಮಾಹಿತಿ ನೀಡುತ್ತಿದ್ದಾರೆ. ಇದು ಹಣದ ವ್ಯವಹಾರಕ್ಕೆ ಸಂಬಂಧಿಸಿದ ವಿಷಯ. ಆದ್ದರಿಂದ, ಐಟಿ ಮತ್ತು ಎಸಿಬಿಗೆ ದೂರು ನೀಡಲು ನಿರ್ಧರಿಸಿದ್ದೇವೆ' ಎಂದು ಪರಮೇಶ್ವರ ಹೇಳಿದರು.

ಆಪರೇಷನ್ ಕಮಲ ಸುದ್ದಿಗಳು : ಕುಮಾರಸ್ವಾಮಿ ಖಾರದ ಮಾತುಗಳು!ಆಪರೇಷನ್ ಕಮಲ ಸುದ್ದಿಗಳು : ಕುಮಾರಸ್ವಾಮಿ ಖಾರದ ಮಾತುಗಳು!

ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್‌ನ 11ಕ್ಕೂ ಹೆಚ್ಚು ಶಾಸಕರನ್ನು ಬಿಜೆಪಿಗೆ ಕರೆತರಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಪಕ್ಷ ಬಿಟ್ಟು ಬರುವ ಶಾಸಕರಿಗೆ ಕೋಟಿ-ಕೋಟಿ ಹಣ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳಿದೆ. ವಿರೋಧ ಪಕ್ಷದಲ್ಲಿ ಕೂರಲು ನಾವು ಕೂರುತ್ತೇವೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ತಿರಗೊಳಿಸುವ ಯಾವ ಪ್ರಯತ್ನವನ್ನು ನಾವು ಮಾಡುತ್ತಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

English summary
Deputy Chief Minister of Karnataka G.Parameshwara said that, Congress will file complaint against BJP to Anti Corruption Bureau (ACB) for offering money to MLA's for Operation Kamala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X