ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಆ.29ರಂದು ಧರಣಿ

|
Google Oneindia Kannada News

ಬೆಂಗಳೂರು, ಆಗಸ್ಟ್ 28 : ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ಸಜ್ಜಾಗಿದೆ. ಆಗಸ್ಟ್ 29ರಂದು ಇಡೀ ದಿನ ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದೆ.

ಕರ್ನಾಟಕದಲ್ಲಿನ ಭೀಕರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ ರಾಜ್ಯ, ಕೇಂದ್ರ ಸರ್ಕಾರಗಳ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಧರಣಿ ನಡೆಸಲಿದೆ.

ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿದ್ದರಾಮಯ್ಯ

ಬೃಹತ್ ಧರಣಿ ಸತ್ಯಾಗ್ರಹ ಆಗಸ್ಟ್ 29ರ ಬೆಳಗ್ಗೆ 10.30ಕ್ಕೆ ಆನಂದರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆಯಲಿದೆ. ಇಡೀ ದಿನ ಧರಣಿ ನಡೆಯಲಿದ್ದು, ಸಂಜೆ 6ಗಂಟೆಗೆ ಮುಕ್ತಾಯಗೊಳ್ಳಲಿದೆ.

ಇಷ್ಟು ಭೀಕರ ಪ್ರವಾಹ ನಾನು ಕಂಡಿದ್ದೇ ಇಲ್ಲ: ಸಿದ್ದರಾಮಯ್ಯ ಕಳವಳಇಷ್ಟು ಭೀಕರ ಪ್ರವಾಹ ನಾನು ಕಂಡಿದ್ದೇ ಇಲ್ಲ: ಸಿದ್ದರಾಮಯ್ಯ ಕಳವಳ

Congress to stage protest against state and union govt on August 29

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರದ ವಿರುದ್ಧ ಇದು ಪ್ರತಿಪಕ್ಷ ಕಾಂಗ್ರೆಸ್‌ನ ಮೊದಲ ಧರಣಿಯಾಗಿದೆ.

ನೆರೆ ಪರಿಹಾರ ಕೇಳಿದರೆ ಬರ ಪರಿಹಾರ ಕೊಟ್ಟ ಕೇಂದ್ರ ಸರ್ಕಾರನೆರೆ ಪರಿಹಾರ ಕೇಳಿದರೆ ಬರ ಪರಿಹಾರ ಕೊಟ್ಟ ಕೇಂದ್ರ ಸರ್ಕಾರ

ಕರ್ನಾಟಕದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹದಿಂದಾಗಿ ಅಪಾರವಾದ ನಷ್ಟ ಉಂಟಾಗಿದೆ. 7 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. 1465 ಪರಿಹಾರ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಬೇಕು ಎಂದು ಆಗ್ರಹಿಸಿತ್ತು.

English summary
Congress opposition party of Karnataka will stage day long protest against state and union government on August 29, 2019 against failure in handling flood situation in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X