ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್

|
Google Oneindia Kannada News

ಬೆಂಗಳೂರು, ಮೇ 29: ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿರುವುದಕ್ಕೆ ಕಾಂಗ್ರೆಸ್ ಗರಂ ಆಗಿದೆ.

Recommended Video

ಜನಗಳಿಗೆ ಮೋಸ ಮಾಡುತ್ತಿರೊ ನಾಯಕರಿಗೆ ಶಿಕ್ಷೆ ಆಗಬೇಕು | Oneindia Kannada

ಈ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕೆಲ ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಇಂದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಸಭೆ ಸೇರಿ ತೀರ್ಮಾನ ತೆಗೆದುಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆ

ಅವಧಿ ಮುಗಿದ ಗ್ರಾಮ‌ ಪಂಚಾಯಿತಿಗಳಿಗೆ ತಕ್ಷಣ ಚುನಾವಣೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಸಲಾಗುತ್ತಿದ್ದು, ಪಿಐಎಲ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿ ಮಾಡಿದ್ದಾರೆ. ಕೊರೊನಾವೈರಸ್ ಸೋಂಕು ಹರಡುತ್ತದೆ ಎಂದು ನೆಪ ಹೇಳಿ ಚುನಾವಣಾ ಆಯೋಗ ಚುನಾವಣೆಗಳನ್ನು ಮುಂದೂಡಿಲ್ಲ. ಬದಲಿಗೆ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಚುನಾವಣಾ ಆಯೋಗ ಕುಣಿಯುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕಾರಣ ಏನು?

ಕಾರಣ ಏನು?

ರಾಜ್ಯ ಚುನಾವಣಾ ಆಯೋಗದ ಮೇಲೆ ಆಡಳಿತಾರೂಢ ಬಿಜೆಪಿ ಸರ್ಕಾರ ಒತ್ತಡ ತಂದು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದಕ್ಕೆ ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಮ್ಮ ಬೆಂಬಲಿಗರಿಗೆ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ನಡೆಸಲು ಅನುವು ಮಾಡಿ ಕೊಡುವ ಉದ್ದೇಶ ಇದರ ಹಿಂದೆ ಇದೆ ಎಂದು ಆರೋಪಿಸಲಾಗಿದೆ.

ಬಿಜೆಪಿ ತಾಳಕ್ಕೆ ಆಯೋಗ ಡ್ಯಾನ್ಸ್

ಬಿಜೆಪಿ ತಾಳಕ್ಕೆ ಆಯೋಗ ಡ್ಯಾನ್ಸ್

ಕೊರೊನಾವೈರಸ್ ಸೋಂಕು ಹರಡುತ್ತದೆ ಎಂದು ನೆಪ ಹೇಳಿ ಚುನಾವಣಾ ಆಯೋಗ ಚುನಾವಣೆಗಳನ್ನು ಮುಂದೂಡಿಲ್ಲ. ಬದಲಿಗೆ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಚುನಾವಣಾ ಆಯೋಗ ಕುಣಿಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣೆ ಮುಂದಕ್ಕೆ

ಚುನಾವಣೆ ಮುಂದಕ್ಕೆ

ಮುಂದಿನ ತಿಂಗಳು ನಡೆಯಬೇಕಿದ್ದ ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕೊರೊನಾವೈರಸ್ ಹಾವಳಿಯಿಂದ ಮುಂದಕ್ಕೆ ಹಾಕಿ ಚುನಾವಣಾ ಆಯೋಗ ಆದೇಶಿಸಿದೆ. ಕೊರೊನಾವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಹೀಗಾಗಿ ಈ ಹಂತದಲ್ಲಿ ಚುನಾವಣೆ ನಡೆಸದಿರುವುದೇ ಸೂಕ್ತ ಎಂಬ ತೀರ್ಮಾನಕ್ಕೆ ರಾಜ್ಯ ಚುನಾವಣಾ ಆಯೋಗ ಬಂದಿದೆ. ಈ ಹಿಂದೆ ಚುನಾವಣೆ ನಡೆಸಬೇಕೂ ಬೇಡವೋ ಎಂಬ ಬಗ್ಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆಯೋಗ ವರದಿ ಕೇಳಿತ್ತು.

ಚುನಾವಣೆ ನಡೆಸಲು ಕಷ್ಟ

ಚುನಾವಣೆ ನಡೆಸಲು ಕಷ್ಟ

ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಲು ಕಷ್ಟ ಎಂಬ ವರದಿಯನ್ನು ನೀಡಿದ್ದರು. ಈ ವರದಿ ಅನ್ವಯ ಆಯೋಗ ಚುನಾವಣೆಗಳನ್ನು ಮುಂದೂಡಿದೆ. ಆದರೆ, ದಿನಾಂಕ ಇನ್ನೂ ತಿಳಿಸಿಲ್ಲ. ರಾಜ್ಯದ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಬಹುತೇಕ ಈ ತಿಂಗಳೇ ಅಂತ್ಯವಾಗುತ್ತೆ. ಸುಗಮ ಆಡಳಿತಕ್ಕಾಗಿ ಈಗ ಸರ್ಕಾರವೇ ಆಡಳಿತ ಸಮಿತಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ರಚಿಸಬೇಕಿದೆ. ಚುನಾವಣೆ ಆಯೋಗದ ನಿರ್ದಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

English summary
Gram Panchayat Election 2020: Congress Will Submitting PIL At Highcourt Against Election Postponing. KPCC President DK Shivakumar Desides It.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X