ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬೀಳಲಿದೆಯೇ?
ಬೆಂಗಳೂರು, ಜುಲೈ 29 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿದೆ. ಆದರೆ, ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರೆಯಲಿದೆಯೇ? ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ.
ಕಾಂಗ್ರೆಸ್ ಮತ್ತು ಜೆಡಿಎಸ್‌ನ ನಾಯಕರು ಮೈತ್ರಿ ಮುಂದುವರೆಸುವ ಅಥವ ಮುರಿಯುವ ಬಗ್ಗೆ ಇದುವರೆಗೂ ಯಾವುದೇ ಸ್ಪಷ್ಟವಾದ ಹೇಳಿಕೆ ನೀಡಿಲ್ಲ. ಎರಡೂ ಪಕ್ಷಗಳ ಮುಂದಿನ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು. ಪಕ್ಷದ ನಾಯಕರ ಜೊತೆ ಅವರು ಸಭೆ ನಡೆಸಲಿದ್ದು, ಮೈತ್ರಿ ಮುಂದುವರಿಕೆ ಬಗ್ಗೆ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಲಿದ್ದಾರೆ.
ರಾಜ್ಯ ನಾಯಕರ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್‌ಗೆ ನೀಡಲಿದ್ದು, ಅಂತಿಮ ತೀರ್ಮಾನವನ್ನು ಅವರು ಕೈಗೊಳ್ಳುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವಾಗಲೂ ಎರಡೂ ಪಕ್ಷಗಳ ಮೈತ್ರಿ ವಿಚಾರದಲ್ಲಿ ಗುಲಾಂ ನಬಿ ಆಜಾದ್ ಪ್ರಮುಖ ಪಾತ್ರ ವಹಿಸಿದ್ದರು.
{photo-feature}4











Click it and Unblock the Notifications