ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಟ್ರಬಲ್ ಶೂಟರ್ ಇಲ್ಲ!

|
Google Oneindia Kannada News

Recommended Video

ಮೇ 27ರವರೆಗೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ ಇರುವುದಿಲ್ಲ | Oneindia kannada

ಬೆಂಗಳೂರು, ಮೇ 20 : ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಟ್ರಬಲ್ ಶೂಟರ್ ಇರುವುದಿಲ್ಲ. ಹೌದು, ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡ ದಿನವೇ ಟ್ರಬಲ್ ಶೂಟರ್ ವಿಮಾನವೇರಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಟ್ರಬಲ್ ಶೂಟರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಕುಂದಗೋಳ ಉಪ ಚುನಾವಣೆಯ ಮತದಾನ ಮುಗಿದ ಬಳಿಕ ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಕುಟುಂಬ ಸಮೇತ ಹೋಗಿದ್ದಾರೆ.

ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಲಿದೆ ಎಂಬ ವರದಿಗಳು ಬಂದಿವೆ.

ಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನ

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೇ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಮೇ 27ರ ಬಳಿಕ ಅವರು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ....

ಕುಂದಗೋಳ ಉಪ ಚುನಾವಣೆ : ಬಿಜೆಪಿಗೆ ಶಾಕ್‌ ಕೊಟ್ಟ ಡಿಕೆಶಿಕುಂದಗೋಳ ಉಪ ಚುನಾವಣೆ : ಬಿಜೆಪಿಗೆ ಶಾಕ್‌ ಕೊಟ್ಟ ಡಿಕೆಶಿ

ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಭಾನುವಾರ ಕುಟುಂಬ ಸಮೇತರಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದು, ಏಳು ದಿನಗಳ ಬಳಿಕ ರಾಜ್ಯಕ್ಕೆ ವಾಪಸ್ ಅಗಲಿದ್ದಾರೆ. ಮೇ 27ರಂದು ಅವರು ಕರ್ನಾಟಕಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ಫಲಿತಾಂಶ

ಲೋಕಸಭಾ ಚುನಾವಣೆ ಫಲಿತಾಂಶ

ಮೇ 23ರ ಗುರುವಾರ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂದು ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಇರುವುದಿಲ್ಲ. ಫಲಿತಾಂಶದ ಬಳಿಕ ಕರ್ನಾಟಕ ರಾಜಕೀಯದಲ್ಲಿ ಏನಾದರೂ ಬದಲಾವಣೆ ಆಗಲಿದೆಯೇ? ಕಾದು ನೋಡಬೇಕು.

ಕುಂದಗೋಳ ಫಲಿತಾಂಶ

ಕುಂದಗೋಳ ಫಲಿತಾಂಶ

ಡಿ.ಕೆ.ಶಿವಕುಮಾರ್ ಅವರು ಧಾರವಾಡ ಜಿಲ್ಲೆಯ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿಯಾಗಿದ್ದರು. ಮೇ 19ರ ಭಾನುವಾರ ಮತದಾನ ನಡೆದಿದ್ದು ಶೇ 82.42ರಷ್ಟು ಮತದಾನವಾಗಿದೆ. ಉಪ ಚುನಾವಣೆ ಫಲಿತಾಂಶ ಮೇ 23ರಂದು ಪ್ರಕಟವಾಗಲಿದೆ.

ಮೈತ್ರಿ ಸರ್ಕಾರದ ಟ್ರಬಲ್ ಶೂಟರ್

ಮೈತ್ರಿ ಸರ್ಕಾರದ ಟ್ರಬಲ್ ಶೂಟರ್

ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಟ್ರಬಲ್ ಶೂಟರ್. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರು. ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದಾಗ ಮುಂದಾಳತ್ವ ವಹಿಸಿ ಎಲ್ಲವನ್ನೂ ಬಗೆಹರಿಸಿದವರು. ಆದರೆ, ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆ ಸಮಯದಲ್ಲಿಯೇ ಅವರು ರಾಜ್ಯದಲ್ಲಿಲ್ಲ.

English summary
Water resource minister and Karnataka Congress troubleshooter D.K.ShivaKumar in a foreign tour. D.K.ShivaKumar will return to Karnataka after May 27, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X