ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ವ್ಯಂಗ್ಯ

|
Google Oneindia Kannada News

ಬೆಂಗಳೂರು, ನವೆಂಬರ್ 29; ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಮುಂದಿನ ವರ್ಷ ಚುನಾವಣೆ ಇರುವ ಹಿನ್ನಲೆಯಲ್ಲಿ ಈ ದೆಹಲಿ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಮಂಗಳವಾರ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ. ಮುಖ್ಯಮಂತ್ರಿಗಳ ನವದಹೆಲಿ ಪ್ರವಾಸದ ಬಗ್ಗೆ ವ್ಯಂಗ್ಯವಾಡಿದೆ.

'ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ' ಎಂದು ಹೇಳಿದೆ.

Breaking; ಸಿಎಂಗೆ ಧಮ್​, ತಾಕತ್ ಇಲ್ಲವೇ?; ಕಾಂಗ್ರೆಸ್ ಟ್ವೀಟ್ Breaking; ಸಿಎಂಗೆ ಧಮ್​, ತಾಕತ್ ಇಲ್ಲವೇ?; ಕಾಂಗ್ರೆಸ್ ಟ್ವೀಟ್

Congress Tweet Against Basavaraj Bommai Delhi Tour

'ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ. ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ' ಎಂದು ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದೆ.

 ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ

'ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?. ರಾಜ್ಯದ ಸಿಎಂ ಬೊಮ್ಮಾಯಿಯವರನ್ನು ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ?. ಬೊಮ್ಮಾಯಿಯವರು ಅಷ್ಟು ಅಸಮರ್ಥರೆ?. ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ?" ಎಂದು ಕಾಂಗ್ರೆಸ್ ಕೇಳಿದೆ.

ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ; ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಮಾತನಾಡಿದ್ದಾರೆ. ನವೆಂಬರ್ 30ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, "ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30ರಂದು ವಿಚಾರಣೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ" ಎಂದರು.

ಮುಕುಲ್ ರೋಹಟಗಿ ಭೇಟಿ ಮಾಡಿದ ಬಳಿಕ ಮಾತನಾಡಿ, "ಕರ್ನಾಟಕ, ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲಾ ವಿಷಯಗಳನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನಲೆ ಬಗ್ಗೆ ವಿವರಣೆ ನೀಡಿದ್ದೇನೆ. ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ" ಎಂದು ಹೇಳಿದರು.

English summary
Karnataka Congress tweet against chief minister Basavaraj Bommai New Delhi tour. Basavaraj Bommai in Delhi tour to meet party high command leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X