Congress Vs BJP: ಠೇವಣಿ ಕಳೆದುಕೊಂಡಿದ್ದ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
ಆರು ತಿಂಗಳ ಸುದೀರ್ಘ ಕಾಯುವಿಕೆ ನಂತರ ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡಿದೆ. ಪದ್ಮನಾಭನಗರ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ವಿಪಕ್ಷನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಆರ್. ಅಶೋಕ್ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ನಾಯಕರ ಕಾಲೆಳೆದಿದೆ. ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ ಎಂದು ಆರೋಪಿಸಿದೆ.

ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಕೊಡುತ್ತಿದೆ ಬಿಜೆಪಿ ಕರ್ನಾಟಕ,ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯ ಕಿತ್ತಾಟ ಜೋರಾಗಿದೆ. ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ! ಎಂದು ಬಿಜೆಪಿ ಪಕ್ಷದೊಳಗಿನ ಅಸಮಾಧಾನದ ಬಗ್ಗೆ ಟ್ವೀಟ್ ಮಾಡಿದೆ.
ಠೇವಣಿ ಕಳೆದುಕೊಂಡವ ವಿಪಕ್ಷ ನಾಯಕ
ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ! ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ! ಎಂದು ಕಾಂಗ್ರೆಸ್ ಕಾಲೆಳೆದಿದೆ.
ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
— Karnataka Congress (@INCKarnataka) November 17, 2023
ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ.@siddaramaiah @DKShivakumar ಅವರಂತಹ ನಾಯಕರೆದುರು…
ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ, ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕರ್ನಾಟಕ ಬಿಜೆಪಿಯನ್ನು ಪ್ರಶ್ನಿಸಿದೆ.
ಶಾಸಕಾಂಗ ಸಭೆ ನಡೆಯುವಾ ಯತ್ನಾಳ್, ಬೆಲ್ಲದ್ ಅಂತಹ ನಾಯಕರು ಚಹಾ ಕುಡಿಯಬೇಕೆಂದು ಹೊರ ಬಂದ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, "ಚಹಾ ಕುಡಿಯಲು ಹೋದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ವಾಪಸ್ ಬಂದರಾ? ಬಿಜೆಪಿಯಲ್ಲಿ ಚಹಾ ಕುಡಿಯುವವರು ಯಾರು, ಹಾಲು ಕುಡಿಯುವವರು ಯಾರು, ಹಾಲಾಹಲ ಕುಡಿಯುವವರು ಯಾರು ಎಂಬುದು ಸ್ವತಃ ಬಿಜೆಪಿಗೇ ತಿಳಿದಂತಿಲ್ಲ.!" ಎಂದು ಹೇಳಿದೆ.
ಬಲಾಢ್ಯ ಸಮುದಾಯಗಳನ್ನು ಓಲೈಸಲು ಪ್ರಯತ್ನಿಸುವ ಬಿಜೆಪಿಯಲ್ಲಿ ಪರಿಶಿಷ್ಠ ಜಾತಿಯವರು, ಪರಿಶಿಷ್ಠ ಪಂಗಡದವರು,ಹಿಂದುಳಿದ ವರ್ಗದ ನಾಯಕರ ಕೈಗೆ ಸಿಗುವುದು ಖಾಲಿ ಚೊಂಬು ಮಾತ್ರ! ದಲಿತ ನಾಯಕರ ತಲೆ ಮೇಲೆ ಚಡ್ಡಿ ಹೊರಿಸುವ ಬಿಜೆಪಿ ದಲಿತರು, ಹಿಂದುಳಿದ ವರ್ಗದವರಿಗೆ ರಾಜಕೀಯ ಪ್ರಾತಿನಿಧ್ಯ ಕೊಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ.












Click it and Unblock the Notifications