Get Updates
Get notified of breaking news, exclusive insights, and must-see stories!

ಅಮಿತ್ ಶಾ ಪುತ್ರ ಬಜರಂಗದಳದ ರಾಷ್ಟ್ರಾಧ್ಯಕ್ಷನಾಗಲಿ, ಬೊಮ್ಮಾಯಿ ಪುತ್ರ ರಾಜ್ಯಾಧ್ಯಕ್ಷನಾಗಲಿ: ಕಾಂಗ್ರೆಸ್‌ ಕೌಂಟರ್‌ ಅಟ್ಯಾಕ್‌

ಬೆಂಗಳೂರು, ಮೇ 04: ಮೇ 10ರಂದು ಕರ್ನಾಟಕದ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಅದಕ್ಕೂ ಮುಂಚಿತವಾಗಿ ಭುಗಿಲೆದ್ದಿರುವ ಬಜರಂಗದಳ ವಿವಾದವೀಗ ರಾಜ್ಯದಲ್ಲಿ ಭಾರೀ ಕಲ್ಲೋಲವನ್ನು ಸೃಷ್ಟಿಸಿದೆ. ಬಿಜೆಪಿ ನಾಯಕರು 'ನಾನು ಬಜರಂಗಿ' ಎಂಬ ಅಭಿಯಾನವನ್ನು ನಡೆಸಿದರೆ, ಕಾಂಗ್ರೆಸ್‌ ನಾಯಕರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, 'ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ, ಪಿಎಫ್‌ಐ ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಉರಿದು ಬೀಳುವ ಬಿಜೆಪಿ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ? ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ಮುಂದಿನ ಮಾತಾಡಲಿ' ಎಂದು ವಾಗ್ದಾಳಿ ನಡೆಸಿದೆ.

Congress Tweets: Why Dont BJP Leader’s Sons Join Bajrang Dal When They So Much Passionate

'ಬಜರಂಗದಳ ಬಿಜೆಪಿಯ ಅಂಗಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಬಿಜೆಪಿ ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ನೀಡಿಲ್ಲವೇಕೆ? ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ?' ಎಂದು ಕಾಂಗ್ರೆಸ್‌ ಪ್ರಸ್ನಿಸಿದೆ.

'ನಿಜವಾದ ಬಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ನರೇಂದ್ರ ಮೋದಿ ಅವರೇ, ಇಲ್ಲಿನ ನಕಲಿ ಬಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ 'ಬಜರಂಗಿ ಪುನಿಯಾ' ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ?' ಎಂದು ಕಾಂಗ್ರೆಸ್‌ ಕೇಳಿದೆ.

ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ ಅಮಿತ್‌ ಶಾ ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ. ಬಸವರಾಜ ಬೊಮ್ಮಾಯಿ ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ ಎಂದು ಕೆಪಿಸಿಸಿ ಟ್ವೀಟ್‌ ಮಾಡಿದೆ.

Congress Tweets: Why Dont BJP Leader’s Sons Join Bajrang Dal When They So Much Passionate

'ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ. ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ. ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ. ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ. ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ' ಎಂದು ಕಾಂಗ್ರೆಸ್‌ ತಿಳಿಸಿದೆ.

'ಬಜರಂಗದಳ ಬಗ್ಗೆ ಭಯಂಕರವಾಗಿ ಮಾತನಾಡುವ ಬಿಜೆಪಿ ನಾಯಕರು ಉತ್ತರಿಸಲಿ. ಸಿಟಿ ರವಿ ಮಕ್ಕಳು ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್‌ ಅಶೋಕ್‌ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಸ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬಸವರಾಜ ಬೊಮ್ಮಾಯಿ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ?' ಎಂದು ಕೆಪಿಸಿಸಿ ಪ್ರಶ್ನಿಸಿದೆ.

Congress Tweets: Why Dont BJP Leader’s Sons Join Bajrang Dal When They So Much Passionate

ಬಜರಂಗದಳ ಬ್ಯಾನ್‌ ಕುರಿತ ವಿಚಾರವನ್ನು ಆಡಳಿತಾರೂಢ ಬಿಜೆಪಿ ತನ್ನ ಚುನಾವಣೆಗೆ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಈ ವಿಚಾರವು ಪಕ್ಷದ ಮೇಲೆ ಯಾವ ಪರಿಣಾಮ ಬೀರಬಹುದೆಂದು ಕಾಂಗ್ರೆಸ್‌ ನಾಯಕರಲ್ಲೇ ಭಿನ್ನಾಭಿಪ್ರಾಯವಿದೆ. ಕಾಂಗ್ರೆಸ್ ತನ್ನ ನಿಲುವಿಗೆ ಅಂಟಿಕೊಂಡಿದೆ, ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಎಲ್ಲರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಪ್ರಣಾಳಿಕೆಯನ್ನು ರಚಿಸುವಾಗ ಈ ವಿಚಾರದ ಬಗ್ಗೆ ಚರ್ಚಿಸಿದ ಹಿರಿಯ ಪದಾಧಿಕಾರಿಗಳು ಈ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಶತಾಯಗತಾಯ ಪ್ರಯತ್ನ ನಡೆಸಿದೆ. ಹೆಚ್ಚಿನ ಸಮೀಕ್ಷೆಗಳು ಕಾಂಗ್ರೆಸ್‌ ಪರ ಅಲೆ ಇದೆ ಎಂದು ಸೂಚಿಸಿವೆ. ಆದರೆ, ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳನ್ನು ನಿಷೇಧಿಸುವ ಘೋಷಣೆಯನ್ನೇ ಬಿಜೆಪಿ ಅಸ್ತ್ರ ಮಾಡಿಕೊಳ್ಳುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+